పవిత్ర బైబిల్

ఈజీ టు రీడ్ వెర్షన్ (ERV) - తెలుగు
1 తిమోతికి

1 తిమోతికి అధ్యాయము 1

1 2 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು. 3 ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ. {#1ದುರ್ಬೋಧನೆಗಳ ವಿರುದ್ಧ ಎಚ್ಚರಿಕೆ } ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು. 4 ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು. 5 ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು. 6 ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ. 7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ. 8 ಧರ್ಮಶಾಸ್ತ್ರವು ಒಳ್ಳೆಯದೇ. ಆದರೆ ಅದನ್ನು ನಿಷ್ಠೆಯಿಂದ ಅನುಸರಿಸಬೇಕು. 9 ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ, 10 ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ. 11 ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು. 12 {#1ದೇವರ ಕರುಣೆಗಾಗಿ ಕೃತಜ್ಞತೆಗಳು } ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ. 13 ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು. 14 ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು. 15 ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು. 16 ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು. 17 ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್. 18 ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು. 19 ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು. 20 ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.
1 .::. 2 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು. .::. 3 ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ. {#1ದುರ್ಬೋಧನೆಗಳ ವಿರುದ್ಧ ಎಚ್ಚರಿಕೆ } ನಾನು ಮಕೆದೋನಿಯಕ್ಕೆ ಹೋಗುವಾಗ, ನೀನು ಎಫೆಸದಲ್ಲೇ ಇರು ಎಂದು ನಿನಗೆ ತಿಳಿಸಿದ್ದೆ. ಏಕೆಂದರೆ ಕೆಲವರು ಅಲ್ಲಿ ಸುಳ್ಳು ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ. ನೀನು ಅದನ್ನು ನಿಲ್ಲಿಸಬೇಕು. .::. 4 ಕಲ್ಪನಾಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಗಮನಕೊಡಬಾರದೆಂದು ಅವರಿಗೆ ಆಜ್ಞಾಪಿಸು. ಆ ಸಂಗತಿಗಳು ವಾದವಿವಾದಗಳನ್ನು ಮಾತ್ರ ತರುತ್ತವೆ. ಅವುಗಳಿಂದ ದೇವರ ಕಾರ್ಯಕ್ಕೆ ಪ್ರಯೋಜನವೇನೂ ಇಲ್ಲ. ದೇವರ ಕಾರ್ಯವನ್ನು ನಂಬಿಕೆಯಿಂದ ಮಾಡಬೇಕು. .::. 5 ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು. .::. 6 ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ. .::. 7 ತಾವು ಧರ್ಮೋಪದೇಶಕರಾಗಬೇಕೆಂಬುದು ಅವರ ಅಪೇಕ್ಷೆ. ಆದರೆ ತಾವು ಏನು ಮಾತಾಡುತ್ತಿದ್ದೇವೆ ಎಂಬುದೇ ಅವರಿಗೆ ತಿಳಿದಿಲ್ಲ. ತಮಗೆ ಖಚಿತವಾಗಿ ತಿಳಿದಿದೆ ಎಂದು ತಾವು ಹೇಳುವ ಸಂಗತಿಗಳನ್ನೂ ಅವರು ಅರ್ಥಮಾಡಿಕೊಳ್ಳುವುದಿಲ್ಲ. .::. 8 ಧರ್ಮಶಾಸ್ತ್ರವು ಒಳ್ಳೆಯದೇ. ಆದರೆ ಅದನ್ನು ನಿಷ್ಠೆಯಿಂದ ಅನುಸರಿಸಬೇಕು. .::. 9 ಧರ್ಮಶಾಸ್ತ್ರವನ್ನು ರೂಪಿಸಿದ್ದು ಒಳ್ಳೆಯವರಿಗಾಗಿಯಲ್ಲ ಎಂಬುದು ನಮಗೆ ತಿಳಿದಿದೆ. ಅದನ್ನು ರೂಪಿಸಿದ್ದು ಅದರ ವಿರುದ್ಧವಾಗಿ ನಡೆಯುವ ಮತ್ತು ಅದನ್ನು ಅನುಸರಿಸಲು ಒಪ್ಪದಿರುವ ಜನರಿಗಷ್ಟೇ. ದೇವರಿಗೆ ವಿರುದ್ಧವಾದ ಜನರಿಗೆ ಮತ್ತು ಪಾಪಿಷ್ಠರಿಗೆ, ಅಧರ್ಮಿಗಳಿಗೆ ಮತ್ತು ಪರಿಶುದ್ಧರಲ್ಲದವರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ ಮತ್ತು ಕೊಲೆಗಾರರಿಗೆ, .::. 10 ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ. .::. 11 ಈ ಉಪದೇಶವು ಜನರಿಗೆ ತಿಳಿಸುವುದಕ್ಕಾಗಿ ದೇವರು ನನಗೆ ಕೊಟ್ಟ ಸುವಾರ್ತೆಯ ಒಂದು ಭಾಗವಾಗಿದೆ. ಭಾಗ್ಯವಂತನಾದ ದೇವರಿಂದಲೇ ಈ ಮಹಿಮೆಯ ಸುವಾರ್ತೆಯು ಬಂದಿತು. .::. 12 {#1ದೇವರ ಕರುಣೆಗಾಗಿ ಕೃತಜ್ಞತೆಗಳು } ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಈ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ. .::. 13 ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು. .::. 14 ಆದರೆ ನಮ್ಮ ಪ್ರಭುವಿನ ಕೃಪೆಯು ಸಂಪೂರ್ಣವಾಗಿ ನನಗೆ ಲಭಿಸಿತು. ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಗಳು ಆ ಕೃಪೆಯೊಂದಿಗೆ ಬಂದವು. .::. 15 ನಾನು ಹೇಳುತ್ತಿರುವ ಈ ಸಂಗತಿ ಸತ್ಯವಾದದ್ದು. ಆದ್ದರಿಂದ ನೀವು ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಬೇಕು. ಅದೇನೆಂದರೆ: ಪಾಪಿಗಳನ್ನು ರಕ್ಷಿಸುವುದಕ್ಕೆ ಕ್ರಿಸ್ತ ಯೇಸು ಈ ಲೋಕದಲ್ಲಿ ಪ್ರತ್ಯಕ್ಷನಾದನು. ಆ ಪಾಪಿಗಳಲ್ಲಿ ನಾನೇ ಮುಖ್ಯನು. .::. 16 ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು. .::. 17 ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್. .::. 18 ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನೆಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು. .::. 19 ನಂಬಿಕೆಯು ನಿನ್ನಲ್ಲಿ ಅಚಲವಾಗಿರಲಿ, ನಿನಗೆ ಯೋಗ್ಯವೆನಿಸಿದ್ದನ್ನೇ ಮಾಡು. ಕೆಲವು ಜನರು ಹೀಗೆ ಮಾಡಲಿಲ್ಲ. ಅವರ ನಂಬಿಕೆಯೆಲ್ಲವೂ ನಾಶವಾಯಿತು. .::. 20 ಹುಮೆನಾಯನು ಮತ್ತು ಅಲೆಗ್ಸಾಂಡರನು ಹಾಗೆ ಮಾಡಿದರು. ದೇವರ ವಿರುದ್ಧವಾಗಿ ಮಾತನಾಡಕೂಡದೆಂದು ಅವರು ತಿಳಿದುಕೊಳ್ಳಲೆಂದೇ ಅವರನ್ನು ಸೈತಾನನಿಗೆ ಒಪ್ಪಿಸಿದೆನು.
  • 1 తిమోతికి అధ్యాయము 1  
  • 1 తిమోతికి అధ్యాయము 2  
  • 1 తిమోతికి అధ్యాయము 3  
  • 1 తిమోతికి అధ్యాయము 4  
  • 1 తిమోతికి అధ్యాయము 5  
  • 1 తిమోతికి అధ్యాయము 6  
×

Alert

×

Telugu Letters Keypad References