పవిత్ర బైబిల్

ఈజీ టు రీడ్ వెర్షన్ (ERV) - తెలుగు
2 కొరింథీయులకు

2 కొరింథీయులకు అధ్యాయము 12

1 {#1ಪೌಲನ ಜೀವಿತದಲ್ಲಾದ ವಿಶೇಷ ಆಶೀರ್ವಾದ } ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ. 2 ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು. 3 (3-4)ಈ ವ್ಯಕ್ತಿಯು ಪರದೈಸಿಗೆ ಒಯ್ಯಲ್ಪಟ್ಟದ್ದು ನನಗೆ ಗೊತ್ತಿದೆ. ಅವನು ನುಡಿಯಲಶಕ್ಯವಾದ ಮತ್ತು ಹೇಳಕೂಡದಂಥ ಮಾತುಗಳನ್ನು ಕೇಳಿದನು. 4 5 ಅಂಥವನ ಬಗ್ಗೆ ನಾನು ಹೊಗಳಿಕೊಳ್ಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳದೆ, ನನ್ನ ಬಲಹೀನತೆಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ. 6 7 ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ. ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು. 8 ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು. 9 ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು. 10 ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ. 11 {#1ಕೊರಿಂಥದ ಕ್ರೈಸ್ತರ ಮೇಲೆ ಪೌಲನಿಗಿರುವ ಪ್ರೀತಿ } ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ. 12 ನಾನು ನಿಮ್ಮೊಂದಿಗಿದ್ದಾಗ ನಾನೂ ಅಪೊಸ್ತಲನೆಂಬುದನ್ನು ನಿರೂಪಿಸುವಂಥ ಸೂಚಕಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡಿದೆನು. 13 ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ. 14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು. 15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ? 16 ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ. 17 ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ. 18 ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು. 19 ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ. 20 ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ. 21 ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
1 {#1ಪೌಲನ ಜೀವಿತದಲ್ಲಾದ ವಿಶೇಷ ಆಶೀರ್ವಾದ } ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ನನಗೆ ಅವಶ್ಯವಾಗಿದೆ. ಆದ್ದರಿಂದ ನನಗೆ ಪ್ರಭುವಿನಿಂದಾದ ದರ್ಶನಗಳ ಮತ್ತು ಪ್ರಕಟಣೆಗಳ ಬಗ್ಗೆ ಹೇಳುತ್ತೇನೆ. .::. 2 ಮೂರನೆಯ ಆಕಾಶಕ್ಕೆ ಒಯ್ಯಲ್ಪಟ್ಟಿದ್ದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆನು. ಇದು ಸಂಭವಿಸಿ ಹದಿನಾಲ್ಕು ವರ್ಷಗಳಾದವು. ಆ ವ್ಯಕ್ತಿಯು ದೇಹಸಹಿತವಾಗಿ ಹೋಗಿದ್ದನೊ ಅಥವಾ ದೇಹರಹಿತನಾಗಿ ಹೋಗಿದ್ದನೊ ನನಗೆ ಗೊತ್ತಿಲ್ಲ. ದೇವರಿಗೆ ಗೊತ್ತು. .::. 3 (3-4)ಈ ವ್ಯಕ್ತಿಯು ಪರದೈಸಿಗೆ ಒಯ್ಯಲ್ಪಟ್ಟದ್ದು ನನಗೆ ಗೊತ್ತಿದೆ. ಅವನು ನುಡಿಯಲಶಕ್ಯವಾದ ಮತ್ತು ಹೇಳಕೂಡದಂಥ ಮಾತುಗಳನ್ನು ಕೇಳಿದನು. .::. 4 .::. 5 ಅಂಥವನ ಬಗ್ಗೆ ನಾನು ಹೊಗಳಿಕೊಳ್ಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳದೆ, ನನ್ನ ಬಲಹೀನತೆಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ. .::. 6 .::. 7 ನನ್ನ ಬಗ್ಗೆ ಹೊಗಳಿಕೊಳ್ಳಬೇಕೆಂದಿದ್ದರೂ ಬುದ್ಧಿಹೀನನಾಗುವುದಿಲ್ಲ, ಏಕೆಂದರೆ ಸತ್ಯವನ್ನೇ ಹೇಳುತ್ತೇನೆ. ಆದರೆ ನನ್ನ ಬಗ್ಗೆ ಹೊಗಳಿಕೊಳ್ಳುವುದಿಲ್ಲ, ಏಕೆಂದರೆ ಜನರು ನನ್ನಲ್ಲಿ ನೋಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಯೋಚಿಸುವುದು ನನಗೆ ಇಷ್ಟವಿಲ್ಲ. ಆದರೆ ನನಗೆ ತೋರಿಸಲ್ಪಟ್ಟ ಆಶ್ಚರ್ಯಕರವಾದ ಸಂಗತಿಗಳ ಬಗ್ಗೆ ನಾನು ಬಹು ಹೆಮ್ಮೆಪಡಕೂಡದು. ಆದ್ದರಿಂದಲೇ ಬಾಧೆಯ ಸಮಸ್ಯೆಯೊಂದು ನನಗೆ ಕೊಡಲ್ಪಟ್ಟಿತು. ಸೈತಾನನಿಂದ ಬಂದ ದೂತನೇ ಈ ಸಮಸ್ಯೆ. ಬಹಳವಾಗಿ ಹೆಮ್ಮೆಪಡದಂತೆ ನನ್ನನ್ನು ಹೊಡೆಯುವುದಕ್ಕಾಗಿ ಅದನ್ನು ಕಳುಹಿಸಲಾಗಿತ್ತು. .::. 8 ನನ್ನಿಂದ ಅದನ್ನು ತೆಗೆದುಹಾಕಬೇಕೆಂದು ನಾನು ಮೂರು ಸಲ ಪ್ರಭುವನ್ನು ಬೇಡಿಕೊಂಡೆನು. .::. 9 ಆದರೆ ಪ್ರಭುವು ನನಗೆ, “ನನ್ನ ಕೃಪೆಯೇ ನಿನಗೆ ಸಾಕು, ನೀನು ಬಲಹೀನನಾಗಿರುವಾಗ ನನ್ನ ಶಕ್ತಿಯು ನಿನ್ನಲ್ಲಿ ಪರಿಪೂರ್ಣವಾಗಿರುತ್ತದೆ” ಎಂದು ಹೇಳಿದನು. .::. 10 ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ. .::. 11 {#1ಕೊರಿಂಥದ ಕ್ರೈಸ್ತರ ಮೇಲೆ ಪೌಲನಿಗಿರುವ ಪ್ರೀತಿ } ನಾನು ಬದ್ಧಿಹೀನನಂತೆ ಮಾತಾಡುತ್ತಿದ್ದೇನೆ. ಅದಕ್ಕೆ ನೀವೇ ಕಾರಣರು. ನೀವೇ ನನ್ನ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳಬೇಕು. ನನಗೆ ಯಾವ ಬೆಲೆಯೂ ಇಲ್ಲ. ನಾನು ಕೇವಲ ಅಲ್ಪನಾಗಿದ್ದೇನೆ, ಆದರೆ ಆ “ಮಹಾಅಪೊಸ್ತಲರು” ನನಗಿಂತ ಯಾವುದರಲ್ಲಿಯೂ ಮಿಗಿಲಾಗಿಲ್ಲ. .::. 12 ನಾನು ನಿಮ್ಮೊಂದಿಗಿದ್ದಾಗ ನಾನೂ ಅಪೊಸ್ತಲನೆಂಬುದನ್ನು ನಿರೂಪಿಸುವಂಥ ಸೂಚಕಕಾರ್ಯಗಳನ್ನು, ಆಶ್ಚರ್ಯಕರವಾದ ಕಾರ್ಯಗಳನ್ನು, ಅದ್ಭುತಕಾರ್ಯಗಳನ್ನು ಮಾಡಿದೆನು. .::. 13 ನಾನು ಈ ಕಾರ್ಯಗಳನ್ನು ಬಹು ತಾಳ್ಮೆಯಿಂದ ಮಾಡಿದೆನು. ಆದ್ದರಿಂದ ಇತರ ಸಭೆಗಳಿಗೆ ದೊರೆತವುಗಳೆಲ್ಲ ನಿಮಗೂ ದೊರೆತವು. ಒಂದೇ ಒಂದು ವ್ಯತ್ಯಾಸವೇನೆಂದರೆ, ನಾನು ನಿಮಗೆ ಭಾರವಾಗಿರಲಿಲ್ಲ. ಈ ವಿಷಯದಲ್ಲಿ ನನ್ನನ್ನು ಕ್ಷಮಿಸಿರಿ. .::. 14 ಈಗ ನಿಮ್ಮನ್ನು ಮೂರನೆ ಸಲ ಸಂದರ್ಶಿಸಲು ಸಿದ್ಧನಾಗಿದ್ದೇನೆ, ಆದರೆ ನಾನು ನಿಮಗೆ ಭಾರವಾಗಿರುವುದಿಲ್ಲ. ನಿಮ್ಮ ಸ್ವತ್ತುಗಳಲ್ಲಿ ಯಾವುದೂ ನನಗೆ ಬೇಕಾಗಿಲ್ಲ. ನನಗೆ ಬೇಕಾಗಿರುವುದು ನೀವೇ. ಮಕ್ಕಳು ತಂದೆತಾಯಿಗಳಿಗೋಸ್ಕರ ಹಣವನ್ನು ಉಳಿಸಿ ಕೊಡಬೇಕಾಗಿಲ್ಲ. ತಂದೆತಾಯಿಗಳು ಹಣವನ್ನು ಉಳಿಸಿ ಮಕ್ಕಳಿಗೆ ಕೊಡಬೇಕು. .::. 15 ಆದ್ದರಿಂದ ನನ್ನಲ್ಲಿರುವುದನ್ನೆಲ್ಲಾ ನಿಮಗೆ ಕೊಡಲು ಸಂತೋಷಿಸುತ್ತೇನೆ. ನನ್ನನ್ನೇ ನಿಮಗೆ ಕೊಟ್ಟುಬಿಡುತ್ತೇನೆ. ನಾನು ನಿಮ್ಮನ್ನು ಬಹಳವಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ? .::. 16 ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ. .::. 17 ನಾನು ನಿಮ್ಮ ಬಳಿಗೆ ಕಳುಹಿಸಿದ ಜನರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಮೋಸಗೊಳಿಸಿದೆನೇ? ಇಲ್ಲ! ನಾನು ಮೋಸಗೊಳಿಸಲಿಲ್ಲ ಎಂಬುದು ನಿಮಗೆ ಗೊತ್ತಿದೆ. .::. 18 ನಿಮ್ಮ ಬಳಿಗೆ ಹೋಗಬೇಕೆಂದು ತೀತನನ್ನು ಕೇಳಿಕೊಂಡೆನು. ಅಲ್ಲದೆ ನಮ್ಮ ಸಹೋದರನನ್ನು ಅವನೊಂದಿಗೆ ಕಳುಹಿಸಿದೆನು. ಅವನು ನಿಮ್ಮನ್ನು ಮೋಸಗೊಳಿಸಲಿಲ್ಲ. ಅವನು ಮೋಸ ಮಾಡಿದನೇ? ಇಲ್ಲ! ಅವನು ಮತ್ತು ನಾನು ಒಂದೇ ಆತ್ಮನಿಂದ ಪ್ರೇರಿತರಾಗಿ ಒಂದೇ ರೀತಿಯಲ್ಲಿ ನಡೆದುಕೊಂಡೆವು. .::. 19 ಈವರೆಗೂ ನಾವು ನಿಮ್ಮೊಂದಿಗೆ ನಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಿದ್ದೇವೆಂದು ಭಾವಿಸುತ್ತೀರೋ? ಇಲ್ಲ! ನಾವು ಕ್ರಿಸ್ತನಲ್ಲಿ ಈ ಸಂಗತಿಗಳನ್ನು ದೇವರ ಮುಂದೆ ಹೇಳುತ್ತಿದ್ದೇವೆ. ನೀವು ನಮ್ಮ ಪ್ರಿಯ ಸ್ನೇಹಿತರು. ನಾವು ಮಾಡುವ ಪ್ರತಿಯೊಂದೂ ನಿಮ್ಮನ್ನು ಮತ್ತಷ್ಟು ಬಲಿಷ್ಠರನ್ನಾಗಿ ಮಾಡುವುದಕ್ಕಾಗಿಯೇ. .::. 20 ಕಾರಣವೇನೆಂದರೆ, ನಾನು ಬಂದಾಗ ನನ್ನ ಅಪೇಕ್ಷೆಗೆ ತಕ್ಕಂತೆ ನೀವು ಇರುವುದಿಲ್ಲವೆಂಬ ಭಯ ನನಗಿದೆ. ನಿಮ್ಮ ಸಭೆಯಲ್ಲಿ ವಾದ, ಹೊಟ್ಟೆಕಿಚ್ಚು, ಕೋಪ, ಸ್ವಾರ್ಥಪರವಾದ ಹೋರಾಟ, ಕೆಟ್ಟಮಾತು, ಸುಳ್ಳುಸುದ್ದಿ, ಗರ್ವ ಮತ್ತು ಗಲಿಬಿಲಿ ಇರಬಹುದೆಂಬ ಭಯ ನನಗಿದೆ. .::. 21 ನಾನು ನಿಮ್ಮ ಬಳಿಗೆ ಮತ್ತೆ ಬಂದಾಗ ನನ್ನ ದೇವರು ನನ್ನನ್ನು ನಿಮ್ಮ ಮುಂದೆ ದೀನನನ್ನಾಗಿ ಮಾಡಬಹುದೆಂಬ ಭಯವಿದೆ. ನಿಮ್ಮಲ್ಲಿ ಪಾಪಕ್ಕೆ ಒಳಗಾಗಿರುವ ಅನೇಕರಿಂದ ನಾನು ದುಃಖಿತನಾಗಬಹುದು. ಏಕೆಂದರೆ, ಆ ಜನರು ತಮ್ಮ ದುಷ್ಟಜೀವಿತದ ಬಗ್ಗೆ, ತಮ್ಮ ಲೈಂಗಿಕ ಪಾಪಗಳ ಬಗ್ಗೆ ಮತ್ತು ನಾಚಿಕೆಕರವಾದ ಕಾರ್ಯಗಳ ಬಗ್ಗೆ ದುಃಖಪಟ್ಟಿಲ್ಲ ಮತ್ತು ತಮ್ಮ ಹೃದಯಗಳನ್ನು ಮಾರ್ಪಾಟು ಮಾಡಿಕೊಂಡಿಲ್ಲ.
  • 2 కొరింథీయులకు అధ్యాయము 1  
  • 2 కొరింథీయులకు అధ్యాయము 2  
  • 2 కొరింథీయులకు అధ్యాయము 3  
  • 2 కొరింథీయులకు అధ్యాయము 4  
  • 2 కొరింథీయులకు అధ్యాయము 5  
  • 2 కొరింథీయులకు అధ్యాయము 6  
  • 2 కొరింథీయులకు అధ్యాయము 7  
  • 2 కొరింథీయులకు అధ్యాయము 8  
  • 2 కొరింథీయులకు అధ్యాయము 9  
  • 2 కొరింథీయులకు అధ్యాయము 10  
  • 2 కొరింథీయులకు అధ్యాయము 11  
  • 2 కొరింథీయులకు అధ్యాయము 12  
  • 2 కొరింథీయులకు అధ్యాయము 13  
×

Alert

×

Telugu Letters Keypad References