పవిత్ర బైబిల్

ఈజీ టు రీడ్ వెర్షన్ (ERV) - తెలుగు
అపొస్తలుల కార్యములు

అపొస్తలుల కార్యములు అధ్యాయము 14

1 {#1ಇಕೋನಿಯಾದಲ್ಲಿ ಪೌಲ ಮತ್ತು ಬಾರ್ನಬ } ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು. 2 ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು. 3 ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು. 4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು. 5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. 6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು. 7 ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು. 8 {#1ಲುಸ್ತ್ರ ಮತ್ತು ದರ್ಬೆಗಳಲ್ಲಿ ಪೌಲನು } ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ. 9 ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು, 10 ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು. 11 ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು. 12 ಜನರು ಬಾರ್ನಬನನ್ನು “ಜೆಯುಸ್”[* ಜೆಯುಸ್ ಅನೇಕ ಗ್ರೀಕ್ ದೇವರುಗಳಲ್ಲಿ ಅತ್ಯಂತ ಪ್ರಮುಖನಾದ ದೇವರು. ] ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” [† ಹೆರ್ಮೆ ಮತ್ತೊಬ್ಬ ಗ್ರೀಕ್ ದೇವರು. ಇತರ ದೇವರುಗಳಿಗೆ ಇವನು ಸಂದೇಶಕನೆಂದು ಗ್ರೀಕರು ನಂಬಿದ್ದರು. ] ದೇವರೆಂದೂ ಕರೆದರು. 13 ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು. 14 ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು[‡ ಬಟ್ಟೆಗಳನ್ನು ಹರಿದುಕೊಂಡು ಇದು ಅವರ ಕೋಪವನ್ನು ಸೂಚಿಸುತ್ತದೆ. ] ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು: 15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ. 16 “ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು. 17 ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.” 18 19 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು. ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು. 20 ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು. 21 {#1ಸಿರಿಯದ ಅಂತಿಯೋಕ್ಯಕ್ಕೆ ಮರುಪ್ರಯಾಣ } ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ, 22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು. 23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು. 24 ಪೌಲ ಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು. 25 ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು. 26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. 27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು. 28 ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.
1 {#1ಇಕೋನಿಯಾದಲ್ಲಿ ಪೌಲ ಮತ್ತು ಬಾರ್ನಬ } ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು. .::. 2 ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು. .::. 3 ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು. .::. 4 ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು. .::. 5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. .::. 6 ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು. .::. 7 ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು. .::. 8 {#1ಲುಸ್ತ್ರ ಮತ್ತು ದರ್ಬೆಗಳಲ್ಲಿ ಪೌಲನು } ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ. .::. 9 ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು, .::. 10 ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು. .::. 11 ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು. .::. 12 ಜನರು ಬಾರ್ನಬನನ್ನು “ಜೆಯುಸ್”[* ಜೆಯುಸ್ ಅನೇಕ ಗ್ರೀಕ್ ದೇವರುಗಳಲ್ಲಿ ಅತ್ಯಂತ ಪ್ರಮುಖನಾದ ದೇವರು. ] ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” [† ಹೆರ್ಮೆ ಮತ್ತೊಬ್ಬ ಗ್ರೀಕ್ ದೇವರು. ಇತರ ದೇವರುಗಳಿಗೆ ಇವನು ಸಂದೇಶಕನೆಂದು ಗ್ರೀಕರು ನಂಬಿದ್ದರು. ] ದೇವರೆಂದೂ ಕರೆದರು. .::. 13 ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು. .::. 14 ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು[‡ ಬಟ್ಟೆಗಳನ್ನು ಹರಿದುಕೊಂಡು ಇದು ಅವರ ಕೋಪವನ್ನು ಸೂಚಿಸುತ್ತದೆ. ] ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು: .::. 15 “ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ. .::. 16 “ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು. .::. 17 ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.” .::. 18 .::. 19 ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು. ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು. .::. 20 ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು. .::. 21 {#1ಸಿರಿಯದ ಅಂತಿಯೋಕ್ಯಕ್ಕೆ ಮರುಪ್ರಯಾಣ } ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ, .::. 22 ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು. .::. 23 ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು. .::. 24 ಪೌಲ ಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು. .::. 25 ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು. .::. 26 ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. .::. 27 ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು. .::. 28 ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.
  • అపొస్తలుల కార్యములు అధ్యాయము 1  
  • అపొస్తలుల కార్యములు అధ్యాయము 2  
  • అపొస్తలుల కార్యములు అధ్యాయము 3  
  • అపొస్తలుల కార్యములు అధ్యాయము 4  
  • అపొస్తలుల కార్యములు అధ్యాయము 5  
  • అపొస్తలుల కార్యములు అధ్యాయము 6  
  • అపొస్తలుల కార్యములు అధ్యాయము 7  
  • అపొస్తలుల కార్యములు అధ్యాయము 8  
  • అపొస్తలుల కార్యములు అధ్యాయము 9  
  • అపొస్తలుల కార్యములు అధ్యాయము 10  
  • అపొస్తలుల కార్యములు అధ్యాయము 11  
  • అపొస్తలుల కార్యములు అధ్యాయము 12  
  • అపొస్తలుల కార్యములు అధ్యాయము 13  
  • అపొస్తలుల కార్యములు అధ్యాయము 14  
  • అపొస్తలుల కార్యములు అధ్యాయము 15  
  • అపొస్తలుల కార్యములు అధ్యాయము 16  
  • అపొస్తలుల కార్యములు అధ్యాయము 17  
  • అపొస్తలుల కార్యములు అధ్యాయము 18  
  • అపొస్తలుల కార్యములు అధ్యాయము 19  
  • అపొస్తలుల కార్యములు అధ్యాయము 20  
  • అపొస్తలుల కార్యములు అధ్యాయము 21  
  • అపొస్తలుల కార్యములు అధ్యాయము 22  
  • అపొస్తలుల కార్యములు అధ్యాయము 23  
  • అపొస్తలుల కార్యములు అధ్యాయము 24  
  • అపొస్తలుల కార్యములు అధ్యాయము 25  
  • అపొస్తలుల కార్యములు అధ్యాయము 26  
  • అపొస్తలుల కార్యములు అధ్యాయము 27  
  • అపొస్తలుల కార్యములు అధ్యాయము 28  
×

Alert

×

Telugu Letters Keypad References