పవిత్ర బైబిల్

ఈజీ టు రీడ్ వెర్షన్ (ERV) - తెలుగు
ఆమోసు

ఆమోసు అధ్యాయము 2

1 {#1ಮೋವಾಬ್ಯರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು. 2 ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು. 3 ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ. 4 {#1ಯೆಹೂದಕ್ಕೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ. 5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.” 6 {#1ಇಸ್ರೇಲಿನ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು. 7 ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು. 8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು. 9 10 “ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು. “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು. 11 ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು. 12 “ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ. 13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.[* ಬಗ್ಗಿಸುತ್ತೇನೆ ಬಹುಶಃ, “ನಾನು ನಿಮಗೆ ತೊಂದರೆ ಕೊಡುತ್ತೇನೆ.” ] 14 ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು. 15 ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ. 16 ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ.
1 {#1ಮೋವಾಬ್ಯರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಮೋವಾಬ್ಯರು ಅನೇಕ ಅಪರಾಧಗಳನ್ನು ಮಾಡಿದ್ದರಿಂದ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಎದೋಮ್ಯರ ಅರಸನ ಎಲುಬುಗಳನ್ನು ಮೋವಾಬ್ಯರು ಸುಟ್ಟು ಸುಣ್ಣವಾಗಿ ಮಾಡಿದರು. .::. 2 ಆದ್ದರಿಂದ ಮೋವಾಬಿನಲ್ಲಿ ನಾನು ಬೆಂಕಿಯನ್ನು ಹಾಕುವೆನು. ಅದು ಕೆರಿಯೋತಿನ ಉನ್ನತ ಗೋಪುರಗಳನ್ನು ನಾಶಮಾಡುವದು. ಅಲ್ಲಿ ಭಯಂಕರವಾದ ಕೂಗಾಟವೂ ತುತ್ತೂರಿಯ ಧ್ವನಿಯೂ ಇರುತ್ತದೆ. ಆಗ ಮೋವಾಬು ಸಾಯುವದು. .::. 3 ಹೀಗೆ ನಾನು ಮೋವಾಬಿನ ಅರಸರಿಗೆ ಅಂತ್ಯವನ್ನು ಮಾಡುವೆನು. ಮೋವಾಬಿನ ಎಲ್ಲಾ ನಾಯಕರುಗಳನ್ನು ಸಾಯಿಸುವೆನು” ಇದು ಯೆಹೋವನ ನುಡಿ. .::. 4 {#1ಯೆಹೂದಕ್ಕೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ. .::. 5 ಆದ್ದರಿಂದ ನಾನು ಯೆಹೂದದಲ್ಲಿ ಬೆಂಕಿಯನ್ನು ಹಚ್ಚುವೆನು; ಆ ಬೆಂಕಿಯು ಜೆರುಸಲೇಮಿನ ಉನ್ನತ ಬುರುಜುಗಳನ್ನು ನಾಶಮಾಡುವದು.” .::. 6 {#1ಇಸ್ರೇಲಿನ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಇಸ್ರೇಲನ್ನು ನಾನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ಸ್ವಲ್ಪ ಬೆಳ್ಳಿಗಾಗಿ ಒಳ್ಳೆಯವರನ್ನೂ ಮತ್ತು ನಿರಪರಾಧಿಗಳನ್ನೂ ಮಾರಿದರು; ಒಂದು ಜೊತೆ ಕೆರಗಳ ಕ್ರಯಕ್ಕೆ ಬಡ ಜನರನ್ನು ಮಾರಿದರು. .::. 7 ಆ ಬಡಜನರ ಮುಖವನ್ನು ನೆಲದ ಮೇಲೆ ದೂಡಿ ಅವರ ಮೇಲೆ ನಡೆದರು. ಕಷ್ಟ ಅನುಭವಿಸುವ ಜನರ ಮೊರೆಯನ್ನು ಅವರು ಲಾಲಿಸದೆ ಹೋದರು. ತಂದೆಗಳೂ ಗಂಡುಮಕ್ಕಳೂ ಒಬ್ಬ ತರುಣಿಯೊಂದಿಗೇ ಲೈಂಗಿಕ ಸಂಬಂಧವನ್ನಿಟ್ಟುಕೊಂಡರು. ನನ್ನ ಪವಿತ್ರನಾಮವನ್ನು ಹಾಳುಮಾಡಿದರು. .::. 8 ಬಡಜನರ ಬಟ್ಟೆಗಳನ್ನು ತೆಗೆದುಕೊಂಡು ತಾವು ವೇದಿಕೆಯ ಮೇಲೆ ಯಜ್ಞ ಮಾಡುತ್ತಿರುವಾಗ ಆ ಬಟ್ಟೆಗಳ ಮೇಲೆ ಕುಳಿತುಕೊಳ್ಳುವರು. ಬಡವರಿಗೆ ಸಾಲಕೊಟ್ಟು ಅವರು ಬಟ್ಟೆಗಳನ್ನು ಒತ್ತೆಗೆ ತೆಗೆದುಕೊಳ್ಳುವರು. ಅವರು ಜನರಿಗೆ ದಂಡ ವಿಧಿಸಿ, ಆ ಹಣದಿಂದ ದ್ರಾಕ್ಷಾರಸವನ್ನು ಕೊಂಡುಕೊಂಡು ದೇವರ ಆಲಯದಲ್ಲಿ ಕುಡಿಯುವರು. .::. 9 .::. 10 “ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೊನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು. “ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ತನಕ ನಾನು ಅಡವಿಯಲ್ಲಿ ನಿಮ್ಮನ್ನು ನಡಿಸಿದೆನು. ನಾನು ಅಮೋರಿಯರ ದೇಶವನ್ನು ಸ್ವಾಧೀನಪಡಿಸಲು ಅವರಿಗೆ ಸಹಾಯ ಮಾಡಿದೆನು. .::. 11 ನಿಮ್ಮ ಕೆಲವು ಗಂಡುಮಕ್ಕಳನ್ನು ನಾನು ಪ್ರವಾದಿಗಳನ್ನಾಗಿ ಮಾಡಿದೆನು. ಇನ್ನು ಕೆಲವರನ್ನು ನಾಜೀರರನ್ನಾಗಿ ಮಾಡಿದೆನು. ಇಸ್ರೇಲ್ ಜನರೇ, ಇವು ಸತ್ಯವಾದ ಮಾತುಗಳು,” ಇವು ಯೆಹೋವನ ನುಡಿಗಳು. .::. 12 “ಆದರೆ ನೀವು ನಾಜೀರರನ್ನು ದ್ರಾಕ್ಷಾರಸ ಕುಡಿಯುವಂತೆ ಮಾಡಿದಿರಿ. ಪ್ರವಾದಿಗಳನ್ನು ಪ್ರವಾದಿಸಬೇಡಿ ಎಂದು ಹೇಳಿದಿರಿ. .::. 13 ನೀವು ನನಗೆ ಬಹು ಭಾರವಾಗಿದ್ದೀರಿ. ಬಂಡಿಯಲ್ಲಿ ಒತ್ತಿ ತುಂಬಿಸಿದಾಗ ಹೇಗೆ ಬಗ್ಗುತ್ತದೋ ಅದೇ ರೀತಿಯಲ್ಲಿ ನಾನು ಬಹುವಾಗಿ ಬಗ್ಗಿರುತ್ತೇನೆ. ಆದರೆ ನಾನು ನಿಮ್ಮನ್ನು ಅದೇ ರೀತಿಯಲ್ಲಿ ಬಗ್ಗಿಸುತ್ತೇನೆ.[* ಬಗ್ಗಿಸುತ್ತೇನೆ ಬಹುಶಃ, “ನಾನು ನಿಮಗೆ ತೊಂದರೆ ಕೊಡುತ್ತೇನೆ.” ] .::. 14 ಯಾರೂ ತಪ್ಪಿಸಿಕೊಳ್ಳಲಾರರು. ಅತಿ ವೇಗವಾದ ಓಟಗಾರರೂ ತಪ್ಪಿಸಿಕೊಳ್ಳಲಾರರು. ಬಲಶಾಲಿಗಳಿಗೂ ಶಕ್ತಿ ಸಾಲದು. ಸಿಪಾಯಿಗಳಿಗೂ ತಮ್ಮನ್ನು ಕಾಪಾಡಿಕೊಳ್ಳಲಾಗದು. .::. 15 ಬಿಲ್ಲುಬಾಣ ಹಿಡಿದಿರುವವರೂ ಉಳಿಯರು. ವೇಗದ ಓಟಗಾರರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕುದುರೆ ಮೇಲಿನ ಸವಾರರು ಜೀವಸಹಿತ ತಪ್ಪಿಸಿಕೊಳ್ಳುವುದಿಲ್ಲ. .::. 16 ಆ ಸಮಯದಲ್ಲಿ ಅತಿ ಧೈರ್ಯಶಾಲಿಗಳೂ ರಣವೀರರೂ ಓಡಿಬಿಡುವರು. ತಮ್ಮ ಬಟ್ಟೆಗಳನ್ನು ಧರಿಸಿಕೊಳ್ಳಲೂ ಅವರಿಗೆ ಸಮಯವಿರುವುದಿಲ್ಲ.” ಇವು ಯೆಹೋವನ ನುಡಿ.
  • ఆమోసు అధ్యాయము 1  
  • ఆమోసు అధ్యాయము 2  
  • ఆమోసు అధ్యాయము 3  
  • ఆమోసు అధ్యాయము 4  
  • ఆమోసు అధ్యాయము 5  
  • ఆమోసు అధ్యాయము 6  
  • ఆమోసు అధ్యాయము 7  
  • ఆమోసు అధ్యాయము 8  
  • ఆమోసు అధ్యాయము 9  
×

Alert

×

Telugu Letters Keypad References