పవిత్ర బైబిల్

ఈజీ టు రీడ్ వెర్షన్ (ERV) - తెలుగు
నిర్గమకాండము

నిర్గమకాండము అధ్యాయము 26

1 {#1ಪವಿತ್ರ ಗುಡಾರ } ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. 2 ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. 3 ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. 4 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. 5 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. 6 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು. 7 “ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. 8 ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. 9 ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು. 10 ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು. 11 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. 12 ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. 13 ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು. 14 ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು. 15 “ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು. 16 ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು. 17 ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. 18 ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. 19 ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು. 20 ಪವಿತ್ರಗುಡಾರದ ಇನ್ನೊಂದು ಕಡೆಗೆ ಅಂದರೆ, ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. 21 ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. 22 ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿಯೂ ಆರು ಚೌಕಟ್ಟುಗಳನ್ನು ಮಾಡಿಸಬೇಕು. 23 ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. 24 ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. 25 ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು. 26 “ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. 27 ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. 28 ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು. 29 “ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು. 30 ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು. 31 {#1ಪವಿತ್ರಗುಡಾರದ ಒಳಭಾಗ } “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. 33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು. 34 ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು. 35 36 “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು. {#1ಪವಿತ್ರಗುಡಾರದ ಬಾಗಿಲು } “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು. 37 ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.
1 {#1ಪವಿತ್ರ ಗುಡಾರ } ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು. .::. 2 ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. .::. 3 ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು. .::. 4 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು. .::. 5 ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು. .::. 6 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು. .::. 7 “ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು. .::. 8 ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು. .::. 9 ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು. .::. 10 ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು. .::. 11 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು. .::. 12 ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು. .::. 13 ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು. .::. 14 ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು. .::. 15 “ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು. .::. 16 ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು. .::. 17 ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು. .::. 18 ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. .::. 19 ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು. .::. 20 ಪವಿತ್ರಗುಡಾರದ ಇನ್ನೊಂದು ಕಡೆಗೆ ಅಂದರೆ, ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು. .::. 21 ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. .::. 22 ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿಯೂ ಆರು ಚೌಕಟ್ಟುಗಳನ್ನು ಮಾಡಿಸಬೇಕು. .::. 23 ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು. .::. 24 ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು. .::. 25 ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು. .::. 26 “ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. .::. 27 ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು. .::. 28 ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು. .::. 29 “ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು. .::. 30 ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು. .::. 31 {#1ಪವಿತ್ರಗುಡಾರದ ಒಳಭಾಗ } “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. .::. 32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು. .::. 33 ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು. .::. 34 ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು. .::. 35 .::. 36 “ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು. {#1ಪವಿತ್ರಗುಡಾರದ ಬಾಗಿಲು } “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು. .::. 37 ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.
  • నిర్గమకాండము అధ్యాయము 1  
  • నిర్గమకాండము అధ్యాయము 2  
  • నిర్గమకాండము అధ్యాయము 3  
  • నిర్గమకాండము అధ్యాయము 4  
  • నిర్గమకాండము అధ్యాయము 5  
  • నిర్గమకాండము అధ్యాయము 6  
  • నిర్గమకాండము అధ్యాయము 7  
  • నిర్గమకాండము అధ్యాయము 8  
  • నిర్గమకాండము అధ్యాయము 9  
  • నిర్గమకాండము అధ్యాయము 10  
  • నిర్గమకాండము అధ్యాయము 11  
  • నిర్గమకాండము అధ్యాయము 12  
  • నిర్గమకాండము అధ్యాయము 13  
  • నిర్గమకాండము అధ్యాయము 14  
  • నిర్గమకాండము అధ్యాయము 15  
  • నిర్గమకాండము అధ్యాయము 16  
  • నిర్గమకాండము అధ్యాయము 17  
  • నిర్గమకాండము అధ్యాయము 18  
  • నిర్గమకాండము అధ్యాయము 19  
  • నిర్గమకాండము అధ్యాయము 20  
  • నిర్గమకాండము అధ్యాయము 21  
  • నిర్గమకాండము అధ్యాయము 22  
  • నిర్గమకాండము అధ్యాయము 23  
  • నిర్గమకాండము అధ్యాయము 24  
  • నిర్గమకాండము అధ్యాయము 25  
  • నిర్గమకాండము అధ్యాయము 26  
  • నిర్గమకాండము అధ్యాయము 27  
  • నిర్గమకాండము అధ్యాయము 28  
  • నిర్గమకాండము అధ్యాయము 29  
  • నిర్గమకాండము అధ్యాయము 30  
  • నిర్గమకాండము అధ్యాయము 31  
  • నిర్గమకాండము అధ్యాయము 32  
  • నిర్గమకాండము అధ్యాయము 33  
  • నిర్గమకాండము అధ్యాయము 34  
  • నిర్గమకాండము అధ్యాయము 35  
  • నిర్గమకాండము అధ్యాయము 36  
  • నిర్గమకాండము అధ్యాయము 37  
  • నిర్గమకాండము అధ్యాయము 38  
  • నిర్గమకాండము అధ్యాయము 39  
  • నిర్గమకాండము అధ్యాయము 40  
×

Alert

×

Telugu Letters Keypad References