పవిత్ర బైబిల్

ఈజీ టు రీడ్ వెర్షన్ (ERV) - తెలుగు
నిర్గమకాండము

నిర్గమకాండము అధ్యాయము 36

1 2 “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.” ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು. 3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು. 4 ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು, 5 “ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು. 6 ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು. 7 ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು. 8 {#1ಪವಿತ್ರಗುಡಾರ } ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು. 9 ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. 10 ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು. 11 ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು. 12 ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು. 13 ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು. 14 ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು. 15 ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. 16 ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು. 17 ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು. 18 ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು. 19 ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು. 20 ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. 21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು. 22 ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು. 23 ಪವಿತ್ರಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. 24 ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು. 25 ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. 26 ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. 27 ಅವರು ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ಭಾಗಕ್ಕೆ ಇನ್ನೂ ಆರು ಚೌಕಟ್ಟುಗಳನ್ನು ಮಾಡಿದರು. 28 ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು. 29 ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು. 30 ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು. 31 ಬಳಿಕ ಕೆಲಸಗಾರರು ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಲು ಜಾಲೀಮರವನ್ನು ಉಪಯೋಗಿಸಿದರು. ಪವಿತ್ರಗುಡಾರದ ಮೊದಲಿನ ಕಡೆಯಲ್ಲಿ ಐದು ಅಗುಳಿಗಳೂ 32 ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು. 33 ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು. 34 ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು. 35 ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು. 36 ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. 37 ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು. 38 ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.
1 .::. 2 “ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.” ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು. .::. 3 ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು. .::. 4 ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು, .::. 5 “ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು. .::. 6 ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು. .::. 7 ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು. .::. 8 {#1ಪವಿತ್ರಗುಡಾರ } ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು. .::. 9 ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. .::. 10 ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು. .::. 11 ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು. .::. 12 ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು. .::. 13 ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು. .::. 14 ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು. .::. 15 ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. .::. 16 ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು. .::. 17 ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು. .::. 18 ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು. .::. 19 ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು. .::. 20 ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು. .::. 21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು. .::. 22 ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು. .::. 23 ಪವಿತ್ರಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. .::. 24 ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು. .::. 25 ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು. .::. 26 ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. .::. 27 ಅವರು ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ಭಾಗಕ್ಕೆ ಇನ್ನೂ ಆರು ಚೌಕಟ್ಟುಗಳನ್ನು ಮಾಡಿದರು. .::. 28 ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು. .::. 29 ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು. .::. 30 ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು. .::. 31 ಬಳಿಕ ಕೆಲಸಗಾರರು ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಲು ಜಾಲೀಮರವನ್ನು ಉಪಯೋಗಿಸಿದರು. ಪವಿತ್ರಗುಡಾರದ ಮೊದಲಿನ ಕಡೆಯಲ್ಲಿ ಐದು ಅಗುಳಿಗಳೂ .::. 32 ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು. .::. 33 ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು. .::. 34 ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು. .::. 35 ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು. .::. 36 ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. .::. 37 ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು. .::. 38 ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.
  • నిర్గమకాండము అధ్యాయము 1  
  • నిర్గమకాండము అధ్యాయము 2  
  • నిర్గమకాండము అధ్యాయము 3  
  • నిర్గమకాండము అధ్యాయము 4  
  • నిర్గమకాండము అధ్యాయము 5  
  • నిర్గమకాండము అధ్యాయము 6  
  • నిర్గమకాండము అధ్యాయము 7  
  • నిర్గమకాండము అధ్యాయము 8  
  • నిర్గమకాండము అధ్యాయము 9  
  • నిర్గమకాండము అధ్యాయము 10  
  • నిర్గమకాండము అధ్యాయము 11  
  • నిర్గమకాండము అధ్యాయము 12  
  • నిర్గమకాండము అధ్యాయము 13  
  • నిర్గమకాండము అధ్యాయము 14  
  • నిర్గమకాండము అధ్యాయము 15  
  • నిర్గమకాండము అధ్యాయము 16  
  • నిర్గమకాండము అధ్యాయము 17  
  • నిర్గమకాండము అధ్యాయము 18  
  • నిర్గమకాండము అధ్యాయము 19  
  • నిర్గమకాండము అధ్యాయము 20  
  • నిర్గమకాండము అధ్యాయము 21  
  • నిర్గమకాండము అధ్యాయము 22  
  • నిర్గమకాండము అధ్యాయము 23  
  • నిర్గమకాండము అధ్యాయము 24  
  • నిర్గమకాండము అధ్యాయము 25  
  • నిర్గమకాండము అధ్యాయము 26  
  • నిర్గమకాండము అధ్యాయము 27  
  • నిర్గమకాండము అధ్యాయము 28  
  • నిర్గమకాండము అధ్యాయము 29  
  • నిర్గమకాండము అధ్యాయము 30  
  • నిర్గమకాండము అధ్యాయము 31  
  • నిర్గమకాండము అధ్యాయము 32  
  • నిర్గమకాండము అధ్యాయము 33  
  • నిర్గమకాండము అధ్యాయము 34  
  • నిర్గమకాండము అధ్యాయము 35  
  • నిర్గమకాండము అధ్యాయము 36  
  • నిర్గమకాండము అధ్యాయము 37  
  • నిర్గమకాండము అధ్యాయము 38  
  • నిర్గమకాండము అధ్యాయము 39  
  • నిర్గమకాండము అధ్యాయము 40  
×

Alert

×

Telugu Letters Keypad References