పవిత్ర బైబిల్

ఈజీ టు రీడ్ వెర్షన్ (ERV) - తెలుగు
హెబ్రీయులకు

హెబ్రీయులకు అధ్యాయము 8

1 {#1ಯೇಸುವೇ ನಮ್ಮ ಪ್ರಧಾನಯಾಜಕನು } ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ. 2 ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. 3 ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು. 4 ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ. 5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು”[✡ ಉಲ್ಲೇಖನ: ವಿಮೋಚನ. 25: 40. ] ಎಂದು ಹೇಳಿದ್ದು ಈ ಕಾರಣದಿಂದಲೇ. 6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. 7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. 8 ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. 9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. 10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು. 11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. 12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” --ಯೆರೆಮೀಯ 31:31-34-- 13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
1 {#1ಯೇಸುವೇ ನಮ್ಮ ಪ್ರಧಾನಯಾಜಕನು } ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ. .::. 2 ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. .::. 3 ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು. .::. 4 ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ. .::. 5 ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು”[✡ ಉಲ್ಲೇಖನ: ವಿಮೋಚನ. 25: 40. ] ಎಂದು ಹೇಳಿದ್ದು ಈ ಕಾರಣದಿಂದಲೇ. .::. 6 ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. .::. 7 ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ. .::. 8 ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. .::. 9 ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. .::. 10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು. .::. 11 ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. .::. 12 ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” --ಯೆರೆಮೀಯ 31:31-34-- .::. 13 ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು.
  • హెబ్రీయులకు అధ్యాయము 1  
  • హెబ్రీయులకు అధ్యాయము 2  
  • హెబ్రీయులకు అధ్యాయము 3  
  • హెబ్రీయులకు అధ్యాయము 4  
  • హెబ్రీయులకు అధ్యాయము 5  
  • హెబ్రీయులకు అధ్యాయము 6  
  • హెబ్రీయులకు అధ్యాయము 7  
  • హెబ్రీయులకు అధ్యాయము 8  
  • హెబ్రీయులకు అధ్యాయము 9  
  • హెబ్రీయులకు అధ్యాయము 10  
  • హెబ్రీయులకు అధ్యాయము 11  
  • హెబ్రీయులకు అధ్యాయము 12  
  • హెబ్రీయులకు అధ్యాయము 13  
×

Alert

×

Telugu Letters Keypad References