పవిత్ర బైబిల్

ఈజీ టు రీడ్ వెర్షన్ (ERV) - తెలుగు
యిర్మీయా

యిర్మీయా అధ్యాయము 24

1 {#1ಒಳ್ಳೆಯ ಮತ್ತು ಕೆಟ್ಟ ಅಂಜೂರದ ಹಣ್ಣುಗಳು } ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.) 2 ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು. 3 4 ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ. ಆಗ ನನಗೆ ಯೆಹೋವನಿಂದ ಸಂದೇಶ ಬಂದಿತು. 5 ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು. 6 ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು. 7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ. 8 “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು. 9 ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು. 10 ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”
1 {#1ಒಳ್ಳೆಯ ಮತ್ತು ಕೆಟ್ಟ ಅಂಜೂರದ ಹಣ್ಣುಗಳು } ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.) .::. 2 ಒಂದು ಬುಟ್ಟಿಯಲ್ಲಿ ಬಹಳ ಉತ್ತಮವಾದ ಅಂಜೂರಗಳಿದ್ದವು. ಆ ಅಂಜೂರಗಳು ಸುಗ್ಗಿಯಲ್ಲಿ ಬೇಗ ಮಾಗುವ ಹಣ್ಣುಗಳಂತಿದ್ದವು. ಆದರೆ ಇನ್ನೊಂದು ಬುಟ್ಟಿಯಲ್ಲಿ ತಿನ್ನಲಾಗದಷ್ಟು ಕೊಳೆತ ಅಂಜೂರಗಳಿದ್ದವು. .::. 3 .::. 4 ಯೆಹೋವನು ನನಗೆ “ಯೆರೆಮೀಯನೇ, ನಿನಗೇನು ಕಾಣುತ್ತಿದೆ?” ಎಂದು ಕೇಳಿದನು. “ನನಗೆ ಅಂಜೂರಗಳು ಕಾಣುತ್ತಿವೆ. ಒಳ್ಳೆಯ ಅಂಜೂರಗಳು ಬಹಳ ಚೆನ್ನಾಗಿವೆ. ಕೊಳೆತ ಅಂಜೂರಗಳು ತಿನ್ನಲಾಗದಷ್ಟು ಕೊಳೆತಿವೆ” ಎಂದು ನಾನು ಉತ್ತರಿಸಿದೆ. ಆಗ ನನಗೆ ಯೆಹೋವನಿಂದ ಸಂದೇಶ ಬಂದಿತು. .::. 5 ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು. .::. 6 ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು. .::. 7 ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ. .::. 8 “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು. .::. 9 ನಾನು ಆ ಜನರನ್ನು ದಂಡಿಸುವೆನು. ಆ ಶಿಕ್ಷೆಯು ಭೂಲೋಕದ ಎಲ್ಲಾ ಜನರಲ್ಲಿ ಭೀತಿಯನ್ನು ಉಂಟು ಮಾಡುವುದು. ಜನರು ಯೆಹೂದದ ಜನರನ್ನು ಗೇಲಿಮಾಡುವರು. ನಾನು ಅವರನ್ನು ತಳ್ಳಿದ ಎಲ್ಲಾ ದೇಶಗಳಲ್ಲಿ ಜನರು ಅವರ ಬಗ್ಗೆ ಪರಿಹಾಸ್ಯದ ಮಾತುಗಳನ್ನು ಆಡುವರು; ಅವರನ್ನು ಶಪಿಸುವರು. .::. 10 ನಾನು ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು. ಅವರೆಲ್ಲರೂ ಸತ್ತುಹೋಗುವವರೆಗೆ ನಾನು ಅವರ ಮೇಲೆ ಧಾಳಿಮಾಡುವೆನು. ನಾನು ಅವರಿಗೆ ಮತ್ತು ಅವರ ಪೂರ್ವಿಕರಿಗೆ ಕೊಟ್ಟ ಭೂಮಿಯ ಮೇಲೆ ಅವರು ವಾಸಿಸಲಾಗುವದಿಲ್ಲ.”
  • యిర్మీయా అధ్యాయము 1  
  • యిర్మీయా అధ్యాయము 2  
  • యిర్మీయా అధ్యాయము 3  
  • యిర్మీయా అధ్యాయము 4  
  • యిర్మీయా అధ్యాయము 5  
  • యిర్మీయా అధ్యాయము 6  
  • యిర్మీయా అధ్యాయము 7  
  • యిర్మీయా అధ్యాయము 8  
  • యిర్మీయా అధ్యాయము 9  
  • యిర్మీయా అధ్యాయము 10  
  • యిర్మీయా అధ్యాయము 11  
  • యిర్మీయా అధ్యాయము 12  
  • యిర్మీయా అధ్యాయము 13  
  • యిర్మీయా అధ్యాయము 14  
  • యిర్మీయా అధ్యాయము 15  
  • యిర్మీయా అధ్యాయము 16  
  • యిర్మీయా అధ్యాయము 17  
  • యిర్మీయా అధ్యాయము 18  
  • యిర్మీయా అధ్యాయము 19  
  • యిర్మీయా అధ్యాయము 20  
  • యిర్మీయా అధ్యాయము 21  
  • యిర్మీయా అధ్యాయము 22  
  • యిర్మీయా అధ్యాయము 23  
  • యిర్మీయా అధ్యాయము 24  
  • యిర్మీయా అధ్యాయము 25  
  • యిర్మీయా అధ్యాయము 26  
  • యిర్మీయా అధ్యాయము 27  
  • యిర్మీయా అధ్యాయము 28  
  • యిర్మీయా అధ్యాయము 29  
  • యిర్మీయా అధ్యాయము 30  
  • యిర్మీయా అధ్యాయము 31  
  • యిర్మీయా అధ్యాయము 32  
  • యిర్మీయా అధ్యాయము 33  
  • యిర్మీయా అధ్యాయము 34  
  • యిర్మీయా అధ్యాయము 35  
  • యిర్మీయా అధ్యాయము 36  
  • యిర్మీయా అధ్యాయము 37  
  • యిర్మీయా అధ్యాయము 38  
  • యిర్మీయా అధ్యాయము 39  
  • యిర్మీయా అధ్యాయము 40  
  • యిర్మీయా అధ్యాయము 41  
  • యిర్మీయా అధ్యాయము 42  
  • యిర్మీయా అధ్యాయము 43  
  • యిర్మీయా అధ్యాయము 44  
  • యిర్మీయా అధ్యాయము 45  
  • యిర్మీయా అధ్యాయము 46  
  • యిర్మీయా అధ్యాయము 47  
  • యిర్మీయా అధ్యాయము 48  
  • యిర్మీయా అధ్యాయము 49  
  • యిర్మీయా అధ్యాయము 50  
  • యిర్మీయా అధ్యాయము 51  
  • యిర్మీయా అధ్యాయము 52  
×

Alert

×

Telugu Letters Keypad References