పవిత్ర బైబిల్

ఈజీ టు రీడ్ వెర్షన్ (ERV) - తెలుగు
నెహెమ్యా

నెహెమ్యా అధ్యాయము 6

1 {#1ವಿರೋಧಿಗಳ ಕುಯುಕ್ತಿ } ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ. 2 ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು. 3 4 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.” ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು. 5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು. 6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ. 7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು. 8 9 ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು. 10 ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು. 11 ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು. 12 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು. ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು. 13 ನಾನು ಭಯಗೊಂಡು [+ ದೇವಾಲಯದೊಳಗೆ ಓಡಿಹೋಗಿ] ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು. 14 15 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ. {#1ಗೋಡೆಯ ಕೆಲಸ ಮುಕ್ತಾಯವಾಯಿತು } ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. 16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು. 17 ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು. 18 ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು. 19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.
1 {#1ವಿರೋಧಿಗಳ ಕುಯುಕ್ತಿ } ಸನ್ಬಲ್ಲಟನಿಗೆ, ಟೋಬೀಯನಿಗೆ ಮತ್ತು ಅರಬಿಯವನಾದ ಗೆಷೆಮನಿಗೆ ಮತ್ತು ಇನ್ನಿತರ ವೈರಿಗಳಿಗೆ ನಾವು ಗೋಡೆಯನ್ನು ಕಟ್ಟಿ ಮುಗಿಸಿದ್ದು ಗೊತ್ತಾಯಿತು. ಗೋಡೆಯಲ್ಲಿದ್ದ ಎಲ್ಲಾ ಕಿಂಡಿಗಳನ್ನು ನಾವು ಮುಚ್ಚಿದೆವು. ಆದರೆ ಗೋಡೆಯಲ್ಲಿನ ದ್ವಾರಗಳಿಗೆ ಇನ್ನೂ ಬಾಗಿಲುಗಳನ್ನು ಇಟ್ಟಿರಲಿಲ್ಲ. .::. 2 ಸನ್ಬಲ್ಲಟನು ಮತ್ತು ಗೆಷೆಮನು ನನಗೆ ಒಂದು ಸಂದೇಶವನ್ನು ಕಳುಹಿಸಿ, “ನೆಹಮೀಯನೇ, ನಾವು ಓನೋ ಬಯಲಿನಲ್ಲಿರುವ ಹಕ್ಕೆಫಿರೀಮ್ ಎಂಬ ಪಟ್ಟಣದಲ್ಲಿ ಭೇಟಿಯಾಗೋಣ” ಎಂದು ಬರೆದಿದ್ದರು. ಓನೋ ಬಯಲಿನಲ್ಲಿ ನನಗೆ ಅವರು ಕೇಡು ಮಾಡಬೇಕೆಂದಿದ್ದರು. .::. 3 .::. 4 ನಾನು ಅವರಿಗೆ ಸೇವಕರ ಮುಖಾಂತರ ಈ ಉತ್ತರವನ್ನು ಕಳುಹಿಸಿದೆನು: “ನಾನು ಬಹಳ ವಿಶೇಷವಾದ ಕೆಲಸ ಮಾಡಿಸುತ್ತಿದ್ದೇನೆ. ಆದ್ದರಿಂದ ನನಗೆ ಬರಲು ಸಾಧ್ಯವಿಲ್ಲ. ನನ್ನ ಬರುವಿಕೆಯಿಂದಾಗಿ ಈ ಕೆಲಸವು ನಿಂತು ಹೋಗಬಾರದು.” ಸನ್ಬಲ್ಲಟನೂ ಗೆಷೆಮನೂ ಅದೇ ಸಂದೇಶವನ್ನು ನಾಲ್ಕು ಸಲ ಕಳುಹಿಸಿದರು. ಪ್ರತಿ ಸಾರಿಯೂ ಅದೇ ಉತ್ತರವನ್ನು ನಾನು ಅವರಿಗೆ ಕಳುಹಿಸಿದೆನು. .::. 5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು. .::. 6 ಅದರಲ್ಲಿ, “ಒಂದು ಸುದ್ದಿಯು ಹರಡುತ್ತಲಿದೆ. ಎಲ್ಲಾ ಕಡೆಗಳಲ್ಲಿ ಜನರು ಅದರ ವಿಷಯವಾಗಿ ಮಾತಾಡುತ್ತಿದ್ದಾರೆ. ಆ ಸುದ್ದಿಯು ಸತ್ಯವೆಂದು ಗೆಷೆಮನು ನನಗೆ ಹೇಳಿದನು. ನೀನು ಮತ್ತು ಯೆಹೂದ್ಯರು ಅರಸನಿಗೆ ವಿರುದ್ಧವಾಗಿ ದಂಗೆ ಏಳಲು ಯೋಚಿಸುತ್ತಿದ್ದೀರೆಂಬ ವದಂತಿ ಇದೆ. ಅದಕ್ಕೋಸ್ಕರವಾಗಿಯೇ ನೀವು ಕೋಟೆಗೋಡೆಯನ್ನು ಕಟ್ಟುತ್ತಿದ್ದೀರಿ. ನೀನು ಯೆಹೂದ್ಯರ ಅರಸನಾಗುವೆ ಎಂದೂ ಜನರಲ್ಲಿ ಸುದ್ದಿ ಹಬ್ಬಿದೆ. .::. 7 ಮಾತ್ರವಲ್ಲದೆ ನಿನ್ನನ್ನು ಯೆಹೂದ ಪ್ರಾಂತ್ಯದ ಅರಸನೆಂದು ಪ್ರಕಟಿಸಲಿಕ್ಕೆ ಪ್ರವಾದಿಗಳನ್ನು ಆರಿಸಿಕೊಂಡಿರುವೆ ಎಂಬ ಸುದ್ದಿಯೂ ಇದೆ. ರಾಜನಾದ ಅರ್ತಷಸ್ತನು ಇದರ ಬಗ್ಗೆ ಕೇಳುವುದಕ್ಕಿಂತ ಮೊದಲೇ ನಾವು ಕುಳಿತುಕೊಂಡು ಮಾತನಾಡೋಣ” ಎಂದು ಬರೆಯಲಾಗಿತ್ತು. .::. 8 .::. 9 ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು. .::. 10 ನಾವು ಹೆದರಿಹೋಗಬೇಕೆಂದು ನಮ್ಮ ವೈರಿಗಳ ಕುತಂತ್ರವಿದೆ. “ಯೆಹೂದ್ಯರು ಭಯಗೊಂಡು ಬಲಹೀನರಾಗುವುದರಿಂದ ಅವರ ಕೆಲಸವನ್ನು ಮುಂದುವರಿಸಲು ಆಗುವುದಿಲ್ಲ, ಗೋಡೆಯೂ ಪೂರ್ಣಗೊಳ್ಳುವುದಿಲ್ಲ” ಎಂದು ಅವರು ಯೋಚಿಸಿಕೊಂಡಿದ್ದಾರೆ. ಆದರೆ ನಾನು, “ದೇವರೇ, ನನ್ನನ್ನು ಬಲಗೊಳಿಸು” ಎಂದು ಪ್ರಾರ್ಥಿಸಿದೆನು. .::. 11 ಒಂದು ದಿನ ನಾನು ದೆಲಾಯನ ಮಗನಾದ ಶೆಮಾಯನ ಮನೆಗೆ ಹೋದೆನು. ದೆಲಾಯನು ಮೆಹೇಟಬೇಲನ ಮಗ. ಆಗ ಶೆಮಾಯನು ಮನೆಯಲ್ಲಿದ್ದನು. ಅವನು, “ನೆಹೆಮೀಯನೇ, ನಾವು ದೇವಾಲಯದಲ್ಲಿ ಭೇಟಿಯಾಗೋಣ. ನಾವು ಅದರ ಒಳಗೆ ಹೋಗಿ ಕದಗಳನ್ನು ಮುಚ್ಚಿಕೊಳ್ಳೋಣ. ಯಾಕೆಂದರೆ ನಿನ್ನನ್ನು ಕೊಲ್ಲಲು ಈ ರಾತ್ರಿ ಜನರು ಬರುತ್ತಾರೆ” ಎಂದು ಹೇಳಿದನು. .::. 12 ಆದರೆ ನಾನು ಶೆಮಾಯನಿಗೆ, “ನನ್ನಂಥ ಪುರುಷನು ಓಡಿಹೋಗಬೇಕೆ? ನನ್ನಂಥ ಸಾಮಾನ್ಯ ವ್ಯಕ್ತಿ ದೇವಾಲಯಕ್ಕೆ ಹೋಗಿ ಅವಿತುಕೊಳ್ಳಬಾರದು. ನಾನು ಬರುವುದಿಲ್ಲ” ಎಂದು ಹೇಳಿದೆನು. ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು. .::. 13 ನಾನು ಭಯಗೊಂಡು [+ ದೇವಾಲಯದೊಳಗೆ ಓಡಿಹೋಗಿ] ದೋಷಿಯಾಗುವಂತೆಯೂ ನನ್ನ ಮೇಲೆ ಹಾಗೆ ಅಪರಾಧ ಹೊರಿಸಲು ತಮಗೆ ಕಾರಣ ದೊರೆಯುವಂತೆಯೂ ಅವರು ಶೆಮಾಯನನ್ನು ಉಪಯೋಗಿಸಿಕೊಂಡರು. .::. 14 .::. 15 ದೇವರೇ, ಟೋಬೀಯ ಮತ್ತ ಸನ್ಬಲ್ಲಟನ ವಿಚಾರವಾಗಿ ನಿನ್ನ ಜ್ಞಾಪಕದಲ್ಲಿರಿಸು. ಅವರು ಮಾಡಿದ ಕೆಟ್ಟಕಾರ್ಯಗಳನ್ನು ನೆನಪಿನಲ್ಲಿಡು. ಅದೇ ಸಮಯದಲ್ಲಿ ಪ್ರವಾದಿನಿಯಾದ ನೋವದ್ಯಳನ್ನು, ಇತರ ಪ್ರವಾದಿಗಳನ್ನು, ನನ್ನನ್ನು ಹೆದರಿಸುವವರನ್ನು ನೆನಪು ಮಾಡಿಕೊ. {#1ಗೋಡೆಯ ಕೆಲಸ ಮುಕ್ತಾಯವಾಯಿತು } ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. .::. 16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತುಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು. .::. 17 ಅದೇ ಸಮಯದಲ್ಲಿ ಗೋಡೆಯ ಕೆಲಸ ಮುಗಿದ ಬಳಿಕ ಯೆಹೂದ ಪ್ರಾಂತ್ಯದ ಧನಿಕರು ಟೋಬೀಯನಿಗೆ ಆಗಾಗ್ಗೆ ಅನೇಕ ಪತ್ರ ಬರೆಯುತ್ತಿದ್ದರು. .::. 18 ಟೋಬೀಯನೂ ಅವರಿಗೆ ಉತ್ತರಿಸುತ್ತಿದ್ದನು. ಅವರು ಆ ಪತ್ರಗಳನ್ನು ಕಳುಹಿಸಲು ಕಾರಣವೇನೆಂದರೆ ಯೆಹೂದ್ಯರಲ್ಲಿ ಅನೇಕ ಜನರು ಅವನಿಗೆ ನಂಬಿಗಸ್ತರಾಗಿರುವುದಾಗಿ ವಾಗ್ದಾನ ಮಾಡಿದ್ದರು. ಟೋಬೀಯನು ಆರಹನ ಮಗನಾದ ಶೆಕನ್ಯನ ಅಳಿಯನಾಗಿದ್ದುದೇ ಇದಕ್ಕೆ ಕಾರಣ. ಟೋಬೀಯನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳೊಂದಿಗೆ ಲಗ್ನವಾಗಿದ್ದನು. .::. 19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.
  • నెహెమ్యా అధ్యాయము 1  
  • నెహెమ్యా అధ్యాయము 2  
  • నెహెమ్యా అధ్యాయము 3  
  • నెహెమ్యా అధ్యాయము 4  
  • నెహెమ్యా అధ్యాయము 5  
  • నెహెమ్యా అధ్యాయము 6  
  • నెహెమ్యా అధ్యాయము 7  
  • నెహెమ్యా అధ్యాయము 8  
  • నెహెమ్యా అధ్యాయము 9  
  • నెహెమ్యా అధ్యాయము 10  
  • నెహెమ్యా అధ్యాయము 11  
  • నెహెమ్యా అధ్యాయము 12  
  • నెహెమ్యా అధ్యాయము 13  
×

Alert

×

Telugu Letters Keypad References