పవిత్ర బైబిల్

ఈజీ టు రీడ్ వెర్షన్ (ERV) - తెలుగు
ప్రకటన గ్రంథము

ప్రకటన గ్రంథము అధ్యాయము 17

1 {#1ಮೃಗದ ಮೇಲಿದ್ದ ಸ್ತ್ರೀ } ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ. 2 ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು. 3 ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. 4 ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು. 5 ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: **ಬಾಬಿಲೋನ್ ಎಂಬ ಮಹಾನಗರಿಯು ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ ಮತ್ತು ಜಾರಸ್ತ್ರೀಯರಿಗೆ ತಾಯಿ. 6 ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು. 7 ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ. 8 ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ. 9 “ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ. 10 ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ. 11 ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ. 12 “ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ. 13 ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ. 14 ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು. 15 ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ. 16 ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. 17 ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ. 18 ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”
1. {#1ಮೃಗದ ಮೇಲಿದ್ದ ಸ್ತ್ರೀ } ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ. 2. ಲೋಕದ ರಾಜರುಗಳು ಅವಳೊಂದಿಗೆ ಲೈಂಗಿಕ ಪಾಪ ಮಾಡಿದರು. ಲೋಕದ ಜನರು ಅವಳ ಲೈಂಗಿಕ ಪಾಪವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು” ಎಂದು ಹೇಳಿದನು. 3. ಬಳಿಕ ದೇವದೂತನು ಪವಿತ್ರಾತ್ಮವಶನಾದ ನನ್ನನ್ನು ಎತ್ತಿಕೊಂಡು ಮರಳುಗಾಡಿಗೆ ಹೋದನು. ಅಲ್ಲಿ ಒಬ್ಬ ಸ್ತ್ರೀಯು ಕೆಂಪು ಮೃಗದ ಮೇಲೆ ಕುಳಿತಿರುವುದನ್ನು ನಾನು ನೋಡಿದೆನು. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ಬರೆದಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. 4. ಆ ಸ್ತ್ರೀಯು ಧೂಮ್ರ ವರ್ಣದ ಮತ್ತು ಕೆಂಪು ಬಣ್ಣದ ಬಟ್ಟೆಗಳನ್ನು ಧರಿಸಿದ್ದಳು. ಅವಳು ತಾನು ತೊಟ್ಟಿದ್ದ ಚಿನ್ನ, ರತ್ನ, ಮುತ್ತು, ಮುಂತಾದವುಗಳಿಂದ ಪ್ರಕಾಶಿಸುತ್ತಿದ್ದಳು. ಅವಳು ತನ್ನ ಕೈಯಲ್ಲಿ ಚಿನ್ನದ ಬಟ್ಟಲನ್ನು ಹಿಡಿದಿದ್ದಳು. ಆ ಬಟ್ಟಲು ಅಸಹ್ಯವಾದವುಗಳಿಂದ ಮತ್ತು ಅವಳ ಲೈಂಗಿಕ ಪಾಪಗಳ ಅಶುದ್ಧತೆಯಿಂದ ತುಂಬಿಹೋಗಿತ್ತು. 5. ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು: **ಬಾಬಿಲೋನ್ ಎಂಬ ಮಹಾನಗರಿಯು* ***ಭೂಮಿಯಲ್ಲಿರುವ ಕೆಟ್ಟಕಾರ್ಯಗಳಿಗೆ* ***ಮತ್ತು ಜಾರಸ್ತ್ರೀಯರಿಗೆ ತಾಯಿ.* * 6. ಆ ಸ್ತ್ರೀಯು ಕುಡಿದು ಮತ್ತಳಾಗಿರುವುದನ್ನು ನಾನು ನೋಡಿದೆನು. ಅವಳು ದೇವರ ಪರಿಶುದ್ಧ ಜನರ ರಕ್ತವನ್ನು ಕುಡಿದು ಮತ್ತಳಾಗಿದ್ದಳು. ಯೇಸುವಿನಲ್ಲಿ ತಮಗಿರುವ ನಂಬಿಕೆಯ ಕುರಿತಾಗಿ ತಿಳಿಸಿದ ಜನರ ರಕ್ತವನ್ನು ಅವಳು ಕುಡಿದು ಮತ್ತಳಾಗಿದ್ದಳು. ಆ ಸ್ತ್ರೀಯನ್ನು ನಾನು ನೋಡಿದಾಗ ನನಗೆ ತುಂಬಾ ಆಶ್ಚರ್ಯವಾಯಿತು. 7. ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ. 8. ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ. 9. “ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ. 10. ಐದು ಮಂದಿ ರಾಜರುಗಳು ಈಗಾಗಲೇ ಸತ್ತಿದ್ದಾರೆ. ಒಬ್ಬ ರಾಜನು ಮಾತ್ರ ಈಗ ಜೀವಿಸಿದ್ದಾನೆ. ಕೊನೆಯ ರಾಜನು ಬರುತ್ತಾನೆ. ಅವನು ಬಂದು ಸ್ವಲ್ಪಕಾಲ ಮಾತ್ರ ಇರುತ್ತಾನೆ. 11. ಒಂದುಕಾಲದಲ್ಲಿ ಜೀವಿಸಿದ್ದು, ಆದರೆ ಈಗ ಜೀವಿಸಿಲ್ಲದ ಈ ಮೃಗವು ಎಂಟನೆಯ ರಾಜ. ಈ ಎಂಟನೆಯ ರಾಜನೂ ಮೊದಲ ಏಳು ರಾಜರುಗಳ ಗುಂಪಿಗೆ ಸೇರಿದವನು. ಅವನೂ ನಾಶವಾಗುತ್ತಾನೆ. 12. “ನೀನು ನೋಡಿದ ಹತ್ತು ಕೊಂಬುಗಳೇ ಹತ್ತು ರಾಜರುಗಳಾಗಿವೆ. ಈ ಹತ್ತು ರಾಜರುಗಳು ಇನ್ನೂ ತಮ್ಮ ರಾಜ್ಯವನ್ನು ಪಡೆದಿಲ್ಲ. ಆದರೆ ಅವರು ಆಳುವ ಅಧಿಕಾರವನ್ನು ಮೃಗದ ಸಂಗಡ ಒಂದು ಗಂಟೆ ಪಡೆಯುತ್ತಾರೆ. 13. ಈ ಹತ್ತು ರಾಜರುಗಳೆಲ್ಲರೂ ಒಂದೇ ಉದ್ದೇಶವುಳ್ಳವರಾಗಿದ್ದಾರೆ. ಅವರು ತಮ್ಮ ಶಕ್ತಿಯನ್ನು ಮತ್ತು ಅಧಿಕಾರವನ್ನು ಮೃಗಕ್ಕೆ ಕೊಡುತ್ತಾರೆ. 14. ಅವರು ಕುರಿಮರಿಯಾದಾತನ ವಿರುದ್ಧ ಯುದ್ಧಗಳನ್ನು ಮಾಡುತ್ತಾರೆ. ಆದರೆ ಕುರಿಮರಿಯಾದಾತನು ಪ್ರಭುಗಳ ಪ್ರಭುವಾದ್ದರಿಂದ ಮತ್ತು ರಾಜಾಧಿರಾಜನಾದ್ದರಿಂದ ಅವರನ್ನು ಸೋಲಿಸುತ್ತಾನೆ. ಆತನೊಂದಿಗೆ, ತಾನು ಕರೆದಿರುವ ಜನರು, ಆಯ್ಕೆಮಾಡಿಕೊಂಡಿರುವ ಜನರು ಮತ್ತು ತನ್ನ ನಂಬಿಗಸ್ತ ಹಿಂಬಾಲಕರು ಇದ್ದರು” ಎಂದನು. 15. ನಂತರ ದೇವದೂತನು ನನಗೆ ಹೀಗೆ ಹೇಳಿದನು: “ಆ ವೇಶ್ಯೆಯು ಕುಳಿತುಕೊಳ್ಳುವ ನೀರುಗಳನ್ನು ನೀನು ನೋಡಿದೆ. ಈ ನೀರುಗಳು ಈ ಲೋಕದ ಅನೇಕ ಜನರನ್ನೂ ವಿವಿಧ ಜನಾಂಗಗಳನ್ನೂ ಪ್ರಜೆಗಳನ್ನೂ ಭಾಷೆಗಳನ್ನೂ ಸೂಚಿಸು ತ್ತವೆ. 16. ನೀನು ನೋಡಿದ ಆ ಮೃಗ ಮತ್ತು ಅದರ ಹತ್ತು ಕೊಂಬುಗಳು (ರಾಜರುಗಳು) ಆ ವೇಶ್ಯೆಯನ್ನು ದ್ವೇಷಿಸುತ್ತವೆ. ಅವಳಲ್ಲಿರುವುದನ್ನೆಲ್ಲ ಅವರು ಕಿತ್ತುಕೊಂಡು, ಅವಳನ್ನು ನಗ್ನಾವಸ್ಥೆಯಲ್ಲಿ ಬಿಡುತ್ತಾರೆ. ಅವರು ಅವಳ ದೇಹವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. 17. ತನ್ನ ಕಾರ್ಯವನ್ನು ಮಾಡಬೇಕೆಂಬ ಬಯಕೆಯನ್ನು ದೇವರು ಆ ಹತ್ತು ರಾಜರುಗಳಲ್ಲಿ ಉಂಟುಮಾಡಿದ್ದರಿಂದ ಅವರು ಆಳಲು ತಮಗಿದ್ದ ಅಧಿಕಾರವನ್ನು ಮೃಗಕ್ಕೆ ಕೊಡಲು ಸಮ್ಮತಿಸಿದರು. ದೇವರು ಹೇಳಿದ್ದೆಲ್ಲ ಸಂಪೂರ್ಣವಾಗಿ ನೆರವೇರುವ ತನಕ ಅವರು ಆಳುತ್ತಾರೆ. 18. ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”
  • ప్రకటన గ్రంథము అధ్యాయము 1  
  • ప్రకటన గ్రంథము అధ్యాయము 2  
  • ప్రకటన గ్రంథము అధ్యాయము 3  
  • ప్రకటన గ్రంథము అధ్యాయము 4  
  • ప్రకటన గ్రంథము అధ్యాయము 5  
  • ప్రకటన గ్రంథము అధ్యాయము 6  
  • ప్రకటన గ్రంథము అధ్యాయము 7  
  • ప్రకటన గ్రంథము అధ్యాయము 8  
  • ప్రకటన గ్రంథము అధ్యాయము 9  
  • ప్రకటన గ్రంథము అధ్యాయము 10  
  • ప్రకటన గ్రంథము అధ్యాయము 11  
  • ప్రకటన గ్రంథము అధ్యాయము 12  
  • ప్రకటన గ్రంథము అధ్యాయము 13  
  • ప్రకటన గ్రంథము అధ్యాయము 14  
  • ప్రకటన గ్రంథము అధ్యాయము 15  
  • ప్రకటన గ్రంథము అధ్యాయము 16  
  • ప్రకటన గ్రంథము అధ్యాయము 17  
  • ప్రకటన గ్రంథము అధ్యాయము 18  
  • ప్రకటన గ్రంథము అధ్యాయము 19  
  • ప్రకటన గ్రంథము అధ్యాయము 20  
  • ప్రకటన గ్రంథము అధ్యాయము 21  
  • ప్రకటన గ్రంథము అధ్యాయము 22  
×

Alert

×

Telugu Letters Keypad References