Telugu బైబిల్
రాజులు మొదటి గ్రంథము మొత్తం 22 అధ్యాయాలు
రాజులు మొదటి గ్రంథము
రాజులు మొదటి గ్రంథము అధ్యాయము 14
రాజులు మొదటి గ్రంథము అధ్యాయము 14
1 {#1ಯಾರೊಬ್ಬಾಮನ ಮಗನ ಮರಣ } ಆ ಸಮಯದಲ್ಲಿ, ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.
2 ಯಾರೊಬ್ಬಾಮನು ತನ್ನ ಪತ್ನಿಗೆ, “ಶೀಲೋವಿಗೆ ಹೋಗು. ಅಲ್ಲಿಗೆ ಹೋಗಿ ಪ್ರವಾದಿಯಾದ ಅಹೀಯನನ್ನು ನೋಡು. ನಾನು ಇಸ್ರೇಲಿನ ರಾಜನಾಗುವೆನೆಂದು ತಿಳಿಸಿದ ಮನುಷ್ಯನೇ ಅಹೀಯನು. ನೀನು ನನ್ನ ಪತ್ನಿಯೆಂದು ಜನರಿಗೆ ತಿಳಿಯದ ರೀತಿಯಲ್ಲಿ ವಸ್ತ್ರಗಳನ್ನು ಧರಿಸಿಕೊ.
3 ಪ್ರವಾದಿಗೆ ಹತ್ತು ರೊಟ್ಟಿಗಳನ್ನು, ಕೆಲವು ಸಿಹಿ ಪದಾರ್ಥಗಳನ್ನು ಮತ್ತು ಜೇನುತುಪ್ಪ ಜಾಡಿಯನ್ನು ಕೊಡು. ನಂತರ ನಮ್ಮ ಮಗನಿಗೆ ಏನಾಗುತ್ತದೆಂಬುದನ್ನು ಕೇಳು. ಪ್ರವಾದಿಯಾದ ಅಹೀಯನು ನಿನಗೆ ತಿಳಿಸುತ್ತಾನೆ” ಎಂದು ಹೇಳಿದನು.
రాజులు మొదటి గ్రంథము అధ్యాయము 14
4 ರಾಜನ ಪತ್ನಿಯು ಅವನು ಹೇಳಿದಂತೆ ಮಾಡಿದಳು. ಅವಳು ಶೀಲೋವಿಗೆ ಹೋದಳು. ಅವಳು ಪ್ರವಾದಿಯಾದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ಬಹಳ ವಯಸ್ಸಾಗಿತ್ತು; ಅವನು ಕುರುಡನಾಗಿದ್ದನು.
5 ಆದರೆ ಯೆಹೋವನು ಅವನಿಗೆ, “ಯಾರೊಬ್ಬಾಮನ ಪತ್ನಿಯು ಅಸ್ವಸ್ಥನಾಗಿರುವ ತನ್ನ ಮಗನ ಬಗ್ಗೆ ಕೇಳಲು ನಿನ್ನ ಬಳಿಗೆ ಬರುತ್ತಿದ್ದಾಳೆ” ಎಂದು ಹೇಳಿದ್ದನು. ಅಹೀಯನು ಏನು ಹೇಳಬೇಕೆಂಬುದನ್ನು ಯೆಹೋವನು ಅವನಿಗೆ ತಿಳಿಸಿದ್ದನು. ಯಾರೊಬ್ಬಾಮನ ಪತ್ನಿಯು ಅಹೀಯನ ಮನೆಗೆ ಬಂದಳು. ತಾನಾರೆಂಬುದು ಜನರಿಗೆ ತಿಳಿಯಬಾರದೆಂದು ಅವಳು ಪ್ರಯತ್ನಿಸುತ್ತಿದ್ದಳು.
రాజులు మొదటి గ్రంథము అధ్యాయము 14
6 ಅವಳು ಬಾಗಿಲಿನ ಬಳಿಗೆ ಬಂದಾಗಲೇ ಅಹೀಯನಿಗೆ ಆಕೆಯ ಪಾದಗಳ ಸಪ್ಪಳವು ಕೇಳಿಸಿತು. ಆಗ ಅಹೀಯನು, “ಯಾರೊಬ್ಬಾಮನ ಪತ್ನಿಯೇ, ಒಳಗೆ ಬಾ. ನೀನು ಯಾರೆಂಬುದು ಜನರಿಗೆ ತಿಳಿಯದಂತೆ ಮಾಡಲು ಯಾಕೆ ಪ್ರಯತ್ನಿಸುತ್ತಿರುವೆ? ನಾನು ನಿನಗೆ ಅಶುಭದ ಸುದ್ದಿಯನ್ನು ತಿಳಿಸುತ್ತೇನೆ.
7 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆಂದು ನೀನು ಹಿಂದಿರುಗಿ ಹೋಗಿ ಯಾರೊಬ್ಬಾಮನಿಗೆ ತಿಳಿಸು. ಯೆಹೋವನು ಹೀಗೆನ್ನುತ್ತಾನೆ: ‘ಯಾರೊಬ್ಬಾಮನೇ, ಇಸ್ರೇಲಿನ ಜನರಲ್ಲೆಲ್ಲಾ ನಾನು ನಿನ್ನನ್ನು ಆರಿಸಿಕೊಂಡೆ. ನನ್ನ ಜನರನ್ನು ಆಳಲು ನಾನು ನಿನ್ನನ್ನು ನೇಮಿಸಿದೆ.
రాజులు మొదటి గ్రంథము అధ్యాయము 14
8 ದಾವೀದನ ಕುಲವು ಇಸ್ರೇಲ್ ರಾಜ್ಯವನ್ನು ಆಳುತ್ತಿತ್ತು. ಆದರೆ ನಾನು ಅವರಿಂದ ರಾಜ್ಯವನ್ನು ತೆಗೆದುಕೊಂಡು, ನಿನಗೆ ಅದನ್ನು ಕೊಟ್ಟೆ. ಆದರೆ ನೀನು ನನ್ನ ಸೇವಕನಾದ ದಾವೀದನಂತಲ್ಲ. ಅವನು ನನ್ನ ಆಜ್ಞೆಗಳಿಗೆ ಯಾವಾಗಲೂ ವಿಧೇಯನಾಗಿದ್ದನು. ಅವನು ಪೂರ್ಣಮನಸ್ಸಿನಿಂದ ನನ್ನನ್ನು ಅನುಸರಿಸುತ್ತಿದ್ದನು. ನಾನು ಒಪ್ಪಿಕೊಳ್ಳುವ ಸಂಗತಿಗಳನ್ನು ಮಾತ್ರ ಅವನು ಮಾಡಿದನು.
9 ಆದರೆ ನೀನು ಅನೇಕ ಪಾಪಗಳನ್ನು ಮಾಡಿರುವೆ. ನಿನಗಿಂತಲೂ ಮೊದಲು ಆಳಿದವರ ಪಾಪಗಳಿಗಿಂತ ನಿನ್ನ ಪಾಪಗಳು ಹೆಚ್ಚು ಭಯಂಕರವಾಗಿವೆ. ನೀನು ನನ್ನನ್ನು ಅನುಸರಿಸುವುದನ್ನು ಬಿಟ್ಟುಬಿಟ್ಟೆ. ನೀನು ವಿಗ್ರಹಗಳನ್ನು ಮತ್ತು ಅನ್ಯದೇವರುಗಳನ್ನು ನಿರ್ಮಿಸಿದೆ. ಇದು ನನ್ನಲ್ಲಿ ಹೆಚ್ಚು ಕೋಪವುಂಟುಮಾಡಿತು.
రాజులు మొదటి గ్రంథము అధ్యాయము 14
10 ಆದ್ದರಿಂದ ಯಾರೊಬ್ಬಾಮನೇ, ನಾನು ನಿನ್ನ ಕುಟುಂಬಕ್ಕೆ ಕೇಡುಗಳನ್ನು ಬರಮಾಡುತ್ತೇನೆ. ನಿನ್ನ ಕುಟುಂಬದ ಗಂಡಸರೆಲ್ಲರನ್ನು ನಾನು ಕೊಲ್ಲುತ್ತೇನೆ. ಬೆಂಕಿಯು ಸಗಣಿಯನ್ನು ಸುಟ್ಟುಹಾಕುವಂತೆ ನಾನು ನಿನ್ನ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿಸುತ್ತೇನೆ.
11 ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ’ ” ಎಂದು ಹೇಳಿದನು.
రాజులు మొదటి గ్రంథము అధ్యాయము 14
12 ನಂತರ ಪ್ರವಾದಿಯಾದ ಅಹೀಯನು ಯಾರೊಬ್ಬಾಮನ ಪತ್ನಿಯ ಸಂಗಡ ಮಾತನಾಡುವುದನ್ನು ಮುಂದುವರಿಸಿ, “ಈಗ ಮನೆಗೆ ಹೋಗು. ನೀನು ನಿನ್ನ ನಗರವನ್ನು ಪ್ರವೇಶಿಸಿದ ತಕ್ಷಣ, ನಿನ್ನ ಮಗನು ಸತ್ತುಹೋಗುತ್ತಾನೆ.
13 ಇಸ್ರೇಲರೆಲ್ಲರು ಅವನಿಗಾಗಿ ಗೋಳಾಡಿ ಸಮಾಧಿಮಾಡುತ್ತಾರೆ. ಯಾರೊಬ್ಬಾಮನ ಕುಟುಂಬದಲ್ಲಿ ನಿನ್ನ ಮಗನನೊಬ್ಬನನ್ನು ಮಾತ್ರ ಸಮಾಧಿ ಮಾಡುತ್ತಾರೆ. ಏಕೆಂದರೆ ಯಾರೊಬ್ಬಾಮನ ಕುಟುಂಬದಲ್ಲಿ ಇವನೊಬ್ಬನು ಮಾತ್ರ ಇಸ್ರೇಲಿನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
రాజులు మొదటి గ్రంథము అధ్యాయము 14
14 ಯೆಹೋವನು ಇಸ್ರೇಲಿಗೆ ಹೊಸ ರಾಜನನ್ನು ನೇಮಿಸುತ್ತಾನೆ. ಆ ಹೊಸ ರಾಜನು ಯಾರೊಬ್ಬಾಮನ ಕುಟುಂಬವನ್ನು ನಾಶಗೊಳಿಸುತ್ತಾನೆ. ಇದು ಬಹುಬೇಗನೆ ಸಂಭವಿಸುತ್ತದೆ.
15 ನಂತರ ಯೆಹೋವನು ಇಸ್ರೇಲರನ್ನು ಹೊಡೆಯುತ್ತಾನೆ. ಇಸ್ರೇಲಿನ ಜನರು ಬಹಳ ಭಯಗೊಳ್ಳುವರು. ಅವರು ನೀರಿನಲ್ಲಿ ಎತ್ತರವಾಗಿ ಬೆಳೆದಿರುವ ಹುಲ್ಲಿನಂತೆ ನಡುಗುವರು. ಯೆಹೋವನು ಇಸ್ರೇಲರನ್ನು ಈ ಶ್ರೇಷ್ಠವಾದ ದೇಶದಿಂದ ಚದರಿಸಿಬಿಡುವನು; ಆತನು ಈ ದೇಶವನ್ನು ಅವರ ಪೂರ್ವಿಕರಿಗೆ ಕೊಟ್ಟಿದ್ದನು. ಆತನು ಇಸ್ರೇಲರನ್ನು ಯೂಫ್ರೇಟೀಸ್ ನದಿಯ ಮತ್ತೊಂದು ಕಡೆಗೆ ಚದರಿಸಿಬಿಡುತ್ತಾನೆ. ಯೆಹೋವನು ಅವರ ಮೇಲೆ ಕೋಪಗೊಂಡಿರುವುದೇ ಅದಕ್ಕೆ ಕಾರಣ. ಅವರು ಅಶೇರ್ ವಿಗ್ರಹವನ್ನು ಆರಾಧಿಸಲು ವಿಶೇಷ ಸ್ತಂಭಗಳನ್ನು ಮಾಡಿಕೊಂಡಿದ್ದರಿಂದ ಆತನು ಅವರ ಮೇಲೆ ಕೋಪಗೊಂಡನು.
రాజులు మొదటి గ్రంథము అధ్యాయము 14
16 ಯಾರೊಬ್ಬಾಮನು ಪಾಪವನ್ನು ಮಾಡಿದನು. ನಂತರ ಇಸ್ರೇಲಿನ ಜನರೂ ಪಾಪ ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು. ಆದ್ದರಿಂದ ಇಸ್ರೇಲಿನ ಜನರು ಸೋಲಿಸಲ್ಪಡುವಂತೆ ಯೆಹೋವನು ಅವಕಾಶ ಮಾಡುತ್ತಾನೆ” ಎಂದು ಹೇಳಿದನು.
17 ಯಾರೊಬ್ಬಾಮನ ಪತ್ನಿಯು ತಿರ್ಚಾಗೆ ಹಿಂದಿರುಗಿ ಹೋದಳು. ಆಕೆಯು ಮನೆಯೊಳಕ್ಕೆ ಕಾಲಿಟ್ಟಕೂಡಲೇ ಮಗು ಸತ್ತುಹೋಯಿತು.
18 ಇಸ್ರೇಲರೆಲ್ಲರು ಅವನಿಗಾಗಿ ಅತ್ತು, ಸಮಾಧಿಮಾಡಿದರು. ಯೆಹೋವನು ಹೇಳಿದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನೂ ಪ್ರವಾದಿಯೂ ಆದ ಅಹೀಯನ ಮೂಲಕ ಈ ಸಂಗತಿಗಳನ್ನು ಹೇಳಿಸಿದ್ದನು.
రాజులు మొదటి గ్రంథము అధ్యాయము 14
19 ರಾಜನಾದ ಯಾರೊಬ್ಬಾಮನು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವನು ಯುದ್ಧಗಳಲ್ಲಿ ಹೋರಾಡಿದನು ಮತ್ತು ಜನರನ್ನು ಆಳಿದನು. [BKS]“ಇಸ್ರೇಲಿನ ರಾಜರುಗಳ ಇತಿಹಾಸ”[BKE] ಎಂಬ ಪುಸ್ತಕದಲ್ಲಿ ಅವನು ಮಾಡಿದ ಕಾರ್ಯಗಳೆಲ್ಲವನ್ನು ಬರೆಯಲಾಗಿದೆ.
20 ಯಾರೊಬ್ಬಾಮನು ರಾಜನಾಗಿ ಇಪ್ಪತ್ತೆರಡು ವರ್ಷ ಆಳಿದನು. ನಂತರ ಅವನು ಸತ್ತುಹೋದನು. ಅವನನ್ನು ಪೂರ್ವಿಕರ ಬಳಿ ಸಮಾಧಿಮಾಡಿದರು. ಅವನ ಮಗನಾದ ನಾದ್ವಾನು ಅವನ ನಂತರ ಹೊಸ ರಾಜನಾದನು.
రాజులు మొదటి గ్రంథము అధ్యాయము 14
21 {#1ಯೆಹೂದದ ರಾಜನಾದ ರೆಹಬ್ಬಾಮ }
22 ಆ ಕಾಲದಲ್ಲಿ ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ರಾಜನಾಗಿದ್ದನು. ಅವನು ರಾಜನಾದಾಗ ಅವನಿಗೆ ನಲವತ್ತೊಂದು ವರ್ಷ ವಯಸ್ಸಾಗಿತ್ತು. ರೆಹಬ್ಬಾಮನು ಜೆರುಸಲೇಮ್ ನಗರದಲ್ಲಿ ಹದಿನೇಳು ವರ್ಷ ಆಳಿದನು. ಈ ನಗರದಲ್ಲಿ ತಾನು ಸನ್ಮಾನಿಸಲ್ಪಡಬೇಕೆಂದು ಯೆಹೋವನು ಈ ನಗರವನ್ನು ಆರಿಸಿಕೊಂಡಿದ್ದನು. ಇಸ್ರೇಲಿನ ಎಲ್ಲಾ ನಗರಗಳಲ್ಲಿ ಈ ನಗರವನ್ನು ಆತನು ಆರಿಸಿಕೊಂಡಿದ್ದನು. ಅಮ್ಮೋನಿಯಳಾದ ನಯಮಾ ಎಂಬವಳು ರೆಹಬ್ಬಾಮನ ತಾಯಿ. ಯೆಹೋವನು ತಪ್ಪೆಂದು ಹೇಳಿದ ಕಾರ್ಯಗಳನ್ನೆಲ್ಲ ಯೆಹೂದದ ಜನರು ಮಾಡಿ ಪಾಪಿಗಳಾದರು. ಯೆಹೋವನು ಅವರ ಮೇಲೆ ಹೆಚ್ಚು ಕೋಪಗೊಳ್ಳುವಂತೆ ಆತನಿಗೆ ವಿರುದ್ಧವಾದ ಅನೇಕ ಕಾರ್ಯಗಳನ್ನು ಮಾಡಿದರು. ಅವರಿಗಿಂತಲೂ ಮುಂಚೆ ಜೀವಿಸಿದ್ದ ಅವರ ಪೂರ್ವಿಕರಿಗಿಂತಲೂ ಈ ಜನರು ಹೆಚ್ಚು ಕೀಳಾಗಿದ್ದರು.
రాజులు మొదటి గ్రంథము అధ్యాయము 14
23 ಈ ಜನರು ಎತ್ತರವಾದ ಸ್ಥಳಗಳಲ್ಲಿ ಕಲ್ಲಿನ ಸ್ಮಾರಕಗಳನ್ನು, ಪವಿತ್ರ ಸ್ತಂಭಗಳನ್ನು ನಿರ್ಮಿಸಿದರು. ಅವರು ಅವುಗಳನ್ನು ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೂ ಪ್ರತಿಯೊಂದು ಹಸಿರುಮರದ ಕೆಳಗಡೆಯೂ ನಿರ್ಮಿಸಿದರು.
24 ಇತರ ದೇವರುಗಳ ಸೇವೆಗಾಗಿ ತಮ್ಮ ದೇಹಗಳನ್ನು ಲೈಂಗಿಕ ಸಂಬಂಧಕ್ಕೆ ಮಾರಾಟ ಮಾಡುವ ಗಂಡಸರೂ ಅಲ್ಲಿದ್ದರು. ಯೆಹೂದದ ಜನರು ಅನೇಕ ಕೆಟ್ಟಕಾರ್ಯಗಳನ್ನು ಮಾಡಿದರು. ಆ ದೇಶದಲ್ಲಿ ಇವರಿಗಿಂತ ಮುಂಚೆ ನೆಲಸಿದ್ದ ಜನರು ಇಂತಹ ದುಷ್ಕೃತ್ಯಗಳನ್ನು ಮಾಡುತ್ತಿದ್ದರು. ದೇವರು ಆ ಜನರಿಂದ ಈ ದೇಶವನ್ನು ತೆಗೆದುಕೊಂಡು ಇಸ್ರೇಲರಿಗೆ ಕೊಟ್ಟಿದ್ದನು.
రాజులు మొదటి గ్రంథము అధ్యాయము 14
25 ರೆಹಬ್ಬಾಮನು ರಾಜನಾಗಿದ್ದ ಐದನೆಯ ವರ್ಷದಲ್ಲಿ ಈಜಿಪ್ಟಿನ ರಾಜನಾದ ಶೀಶಕನು ಜೆರುಸಲೇಮಿನ ವಿರುದ್ಧ ಹೋರಾಡಿದನು.
26 ಶೀಶಕನು ಯೆಹೋವನ ಆಲಯದ ಭಂಡಾರವನ್ನು ಮತ್ತು ರಾಜನ ಅರಮನೆಯ ಭಂಡಾರವನ್ನು ತೆಗೆದುಕೊಂಡು ಹೋದನು. ಅರಾಮದ ರಾಜನಾದ ಹದದೆಜರನ ಅಧಿಕಾರಿಗಳಿಂದ ದಾವೀದನು ತೆಗೆದುಕೊಂಡಿದ್ದ ಬಂಗಾರದ ಗುರಾಣಿಗಳನ್ನೂ ಅವನು ತೆಗೆದುಕೊಂಡು ಹೋದನು. ದಾವೀದನು ಈ ಗುರಾಣಿಗಳನ್ನು ಜೆರುಸಲೇಮಿಗೆ ತಂದಿದ್ದನು. ಆದರೆ ಶೀಶಕನು ಎಲ್ಲಾ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು ಹೋದನು.
రాజులు మొదటి గ్రంథము అధ్యాయము 14
27 ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.
28 ರಾಜನು ಯೆಹೋವನ ಆಲಯಕ್ಕೆ ಹೋಗುವಾಗ ಪ್ರತಿಸಲವೂ ಮೈಗಾವಲಿನವರು ಅವನ ಜೊತೆಯಲ್ಲಿ ಹೋಗುತ್ತಿದ್ದರು. ಅವರು ಗುರಾಣಿಗಳನ್ನು ತೆಗೆದುಕೊಂಡು ಹೋಗುತ್ತಿದ್ದರು. ನಂತರ ಅವರು ರಕ್ಷಣಾಕೊಠಡಿಯ ಗೋಡೆಯ ಮೇಲೆ ಈ ಗುರಾಣಿಗಳನ್ನು ಇಡುತ್ತಿದ್ದರು.
రాజులు మొదటి గ్రంథము అధ్యాయము 14
29 ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು [BKS]“ಯೆಹೂದದ ರಾಜರುಗಳ ಚರಿತ್ರೆ”[BKE] ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.
30 ರೆಹಬ್ಬಾಮನ ಮತ್ತು ಯಾರೊಬ್ಬಾಮನ ನಡುವೆ ಯಾವಾಗಲೂ ಯುದ್ಧ ನಡೆಯುತ್ತಿತ್ತು.
31 ರೆಹಬ್ಬಾಮನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದನಗರದಲ್ಲಿ ಸಮಾಧಿಮಾಡಿದರು. (ಅಮ್ಮೋನಿಯಾದ ನಯಮಾಳು ಅವನ ತಾಯಿ) ಅವನ ನಂತರ ಅವನ ಮಗ ಅಬೀಯಾಮನು ರಾಜನಾದನು.