Telugu బైబిల్
2 పేతురు మొత్తం 3 అధ్యాయాలు
2 పేతురు
2 పేతురు అధ్యాయము 1
2 పేతురు అధ్యాయము 1
1
2 ಯೇಸು ಕ್ರಿಸ್ತನ ಸೇವಕನೂ ಅಪೊಸ್ತಲನೂ ಆದ ಸಿಮೆಯೋನ ಪೇತ್ರನು ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿರುವ ಜನರೆಲ್ಲರಿಗೂ ಬರೆಯುವ ಪತ್ರ. ನಮ್ಮ ದೇವರೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನು ನೀತಿವಂತನಾಗಿರುವುದರಿಂದ ನೀವು ಆ ನಂಬಿಕೆಯನ್ನು ಪಡೆದುಕೊಂಡಿರಿ. ಆತನು ಯೋಗ್ಯವಾದದ್ದನ್ನೇ ಮಾಡುತ್ತಾನೆ.
3 ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ. ದೇವರನ್ನು ಮತ್ತು ನಮ್ಮ ಪ್ರಭುವಾದ ಯೇಸುವನ್ನು ನೀವು ನಿಜವಾಗಿಯೂ ತಿಳಿದಿರುವುದರಿಂದ ನಿಮಗೆ ಕೃಪೆಯೂ ಶಾಂತಿಯೂ ದೊರೆಯಲಿ. {#1ನಮಗೆ ಬೇಕಾದುದನ್ನೆಲ್ಲಾ ದೇವರು ದಯಪಾಲಿಸಿದ್ದಾನೆ } ಯೇಸುವಿಗೆ ದೇವರ ಶಕ್ತಿಯಿದೆ. ಜೀವಿಸಲು ಮತ್ತು ದೇವರ ಸೇವೆ ಮಾಡಲು ಬೇಕಾದ ಪ್ರತಿಯೊಂದನ್ನು ಆತನ ಶಕ್ತಿಯು ನಮಗೆ ಒದಗಿಸಿದೆ. ನಾವು ಆತನನ್ನು ಬಲ್ಲವರಾದ್ದರಿಂದಲೇ ಅವುಗಳನ್ನು ಪಡೆದುಕೊಂಡಿದ್ದೇವೆ. ಯೇಸು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ನಮ್ಮನ್ನು ಕರೆದನು.
2 పేతురు అధ్యాయము 1
4 ಯೇಸು ತಾನು ಮಾಡಿದ ವಾಗ್ದಾನದಂತೆ, ತನ್ನ ಪ್ರಭಾವ ಮತ್ತು ಗುಣಾತಿಶಯಗಳ ಮೂಲಕ ನಮಗೆ ಅಮೂಲ್ಯವಾದ ಹಾಗೂ ಉತ್ಕೃಷ್ಟವಾದ ವರಗಳನ್ನು ದಯಪಾಲಿಸಿರುವನು. ಆ ವರಗಳಿಂದ ನೀವು ದೇವರ ಗುಣಾತಿಶಯದಲ್ಲಿ ಪಾಲುಗಾರರಾಗಲು ಸಾಧ್ಯ. ಹೀಗಿರಲಾಗಿ ನೀವು ಈ ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನಕ್ಕೆ ತಪ್ಪಿಸಿಕೊಂಡವರಾಗಿದ್ದೀರಿ.
5 ನೀವು ಈ ಆಶೀರ್ವಾದಗಳನ್ನು ಹೊಂದಿರುವುದರಿಂದ ಅವುಗಳನ್ನು ನಿಮ್ಮ ಜೀವಿತಕ್ಕೆ ಅಳವಡಿಸಿಕೊಳ್ಳಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿ. ನಿಮ್ಮ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ
2 పేతురు అధ్యాయము 1
6 ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ದೇವರ ಸೇವೆಯನ್ನೂ
7 ದೇವರ ಸೇವೆಗೆ ಸಹೋದರ ಸ್ನೇಹವನ್ನೂ ಸಹೋದರ ಸ್ನೇಹಕ್ಕೆ ಪ್ರೀತಿಯನ್ನೂ ಸೇರಿಸಿರಿ
8 ಇವೆಲ್ಲವೂ ನಿಮ್ಮಲ್ಲಿದ್ದು ಬೆಳೆಯುತ್ತಿದ್ದರೆ, ನೀವು ಎಂದಿಗೂ ನಿರರ್ಥಕರಾಗದಂತೆ ಇವು ನಿಮಗೆ ಸಹಾಯ ಮಾಡುತ್ತವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಜ್ಞಾನದಲ್ಲಿ ಎಂದಿಗೂ ಅಯೋಗ್ಯರೆನಿಸಿಕೊಳ್ಳದಂತೆ ಇವು ನಿಮಗೆ ಸಹಾಯಮಾಡುತ್ತವೆ.
2 పేతురు అధ్యాయము 1
9 ಆದರೆ ಇವು ಯಾವನಲ್ಲಿ ಇರುವುದಿಲ್ಲವೋ ಅವನು ಸ್ಪಷ್ಟವಾಗಿ ನೋಡಲಾರನು. ಅವನು ಕುರುಡನಾಗಿದ್ದಾನೆ; ತಾನು ಶುದ್ಧನಾದದ್ದನ್ನು ಮರೆತವನಾಗಿದ್ದಾನೆ.
10 ನನ್ನ ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಳ್ಳಲು ಕರೆದನು. ಆದ್ದರಿಂದಲೇ ನೀವು ದೇವರಿಂದ ನಿಜವಾಗಿಯೂ ಕರೆಯಲ್ಪಟ್ಟವರೆಂದೂ ಆರಿಸಲ್ಪಟ್ಟವೆರೆಂದೂ ತೋರಿಸಲು ಬಹಳವಾಗಿ ಪ್ರಯತ್ನಿಸಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡವಿಬೀಳುವುದಿಲ್ಲ.
2 పేతురు అధ్యాయము 1
11 ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸುಕ್ರಿಸ್ತನ ರಾಜ್ಯದಲ್ಲಿ ನಿಮಗೆ ಮಹಾ ಸ್ವಾಗತವನ್ನು ನೀಡಲಾಗುವುದು. ಆ ರಾಜ್ಯವು ಶಾಶ್ವತವಾದದ್ದು.
12 ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.
13 ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.
2 పేతురు అధ్యాయము 1
14 ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.
15 ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.
16 {#1ಕ್ರಿಸ್ತನ ಮಹಿಮೆಯನ್ನು ನಾವು ನೋಡಿದೆವು } ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.
2 పేతురు అధ్యాయము 1
17 ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.
18 ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.[* ನೋಡಿರಿ: ಮತ್ತಾಯ 17:1- 9. ]
19 ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.
2 పేతురు అధ్యాయము 1
20 ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.
21 ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.