Telugu బైబిల్

సమూయేలు రెండవ గ్రంథము మొత్తం 24 అధ్యాయాలు

సమూయేలు రెండవ గ్రంథము

సమూయేలు రెండవ గ్రంథము అధ్యాయము 5
సమూయేలు రెండవ గ్రంథము అధ్యాయము 5

1 {#1ಇಸ್ರೇಲರು ದಾವೀದನನ್ನು ರಾಜನನ್ನಾಗಿ ಮಾಡುವರು } ಆಗ ಇಸ್ರೇಲಿನ ಕುಲಗಳವರೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು, “ನಾವೆಲ್ಲಾ ಒಂದೇ ಕುಲದವರಾಗಿದ್ದೇವೆ.

2 ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.

3

సమూయేలు రెండవ గ్రంథము అధ్యాయము 5

4 ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು. ದಾವೀದನು ಆಳುವುದಕ್ಕೆ ಪ್ರಾರಂಭಿಸಿದಾಗ ಅವನಿಗೆ ಮೂವತ್ತು ವರ್ಷ ವಯಸ್ಸಾಗಿತ್ತು. ಅವನು ನಲವತ್ತು ವರ್ಷಗಳ ಕಾಲ ಆಳಿದನು.

5 ಅವನು ಏಳು ವರ್ಷ ಆರು ತಿಂಗಳ ಕಾಲ ಹೆಬ್ರೋನಿನಲ್ಲಿದ್ದು ಯೆಹೂದ್ಯರನ್ನು ಆಳಿದನು. ಅವನು ಮೂವತ್ತಮೂರು ವರ್ಷ ಜೆರುಸಲೇಮಿನಲ್ಲಿದ್ದು ಸಮಸ್ತ ಇಸ್ರೇಲನ್ನು ಮತ್ತು ಯೆಹೂದವನ್ನು ಆಳಿದನು.

సమూయేలు రెండవ గ్రంథము అధ్యాయము 5

6 {#1ದಾವೀದನು ಜೆರುಸಲೇಮ್ ಪಟ್ಟಣವನ್ನು ಗೆಲ್ಲುವನು } ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು.[* ನೀನು ನಮ್ಮ ನಗರದೊಳಕ್ಕೆ ಬರಲಾಗದು ಜೆರುಸಲೇಮ್ ನಗರವನ್ನು ಬೆಟ್ಟದ ಮೇಲೆ ಕಟ್ಟಿದ್ದರು. ಆ ನಗರದ ಸುತ್ತಲೂ ಎತ್ತರವಾದ ಗೋಡೆಗಳಿದ್ದುದರಿಂದ, ಅದನ್ನು ವಶಪಡಿಸಿಕೊಳ್ಳುವುದು ಕಠಿಣವಾಗಿತ್ತು. ] ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.

సమూయేలు రెండవ గ్రంథము అధ్యాయము 5

7 ಆದರೆ ದಾವೀದನು ಚೀಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಈ ಕೋಟೆಗೆ ದಾವೀದ ನಗರವೆಂದು ಹೆಸರಾಯಿತು.)

8

9 ದಾವೀದನು ತನ್ನ ಜನರಿಗೆ ಅಂದು, “ನೀವು ಯೆಬೂಸಿಯರನ್ನು ಸೋಲಿಸಬೇಕೆಂದಿದ್ದರೆ ಜಲಮಾರ್ಗದ ಮೂಲಕ[† ಜಲಮಾರ್ಗದ ಮೂಲಕ ಪುರಾತನ ನಗರವಾದ ಜೆರುಸಲೇಮ್ ನಗರದ ನೆಲದ ಒಳಗಡೆ ನಿರ್ಮಿಸಿದ್ದ ಒಂದು ಜಲಮಾರ್ಗ. ದಾವೀದನು ಮತ್ತು ಅವನ ಜನರು ನಗರಕ್ಕೆ ಈ ಮಾರ್ಗದಲ್ಲಿ ಹೋದರು. ] ಹೋಗಿ ಶತ್ರುಗಳಾದ ಕುಂಟರು ಮತ್ತು ಕುರುಡರನ್ನು ಎದುರಿಸಿ” ಎಂದು ಹೇಳಿದನು. ಆದ್ದರಿಂದಲೇ “ಕುರುಡರು ಮತ್ತು ಕುಂಟರು ಮನೆಯೊಳಕ್ಕೆ [‡ ಮನೆಯೊಳಕ್ಕೆ ಹೀಗೆಂದರೆ: “ಮನೆ, ಅರಮನೆ ಅಥವಾ ದೇವಾಲಯ” ಎಂದು. ] ಬರಲಾಗದು” ಎಂಬ ನಾಣ್ಣುಡಿ ಉಂಟಾಯಿತು. ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.

సమూయేలు రెండవ గ్రంథము అధ్యాయము 5

10 ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.

11 ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.

12 ಯೆಹೋವನು ನಿಜವಾಗಿಯೂ ತನ್ನನ್ನು ಇಸ್ರೇಲಿನ ರಾಜನನ್ನಾಗಿ ಮಾಡಿದ್ದಾನೆಂಬುದನ್ನೂ ಆತನು ತನ್ನ ಜನರಾದ ಇಸ್ರೇಲರಿಗಾಗಿ ನನ್ನ ರಾಜ್ಯವನ್ನು ಸ್ಥಿರಪಡಿಸಿದ್ದಾನೆಂತಲೂ ದಾವೀದನು ಇದರ ಮೂಲಕ ತಿಳಿದುಕೊಂಡನು.

సమూయేలు రెండవ గ్రంథము అధ్యాయము 5

13 ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು.

14 ಜೆರುಸಲೇಮಿನಲ್ಲಿ ದಾವೀದನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,

15 ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,

16 ಎಲೀಷಾಮ, ಎಲ್ಯಾದ, ಎಲೀಫೆಲೆಟ್.

సమూయేలు రెండవ గ్రంథము అధ్యాయము 5

17 {#1ದಾವೀದನು ಫಿಲಿಷ್ಟಿಯರ ವಿರುದ್ಧ ಯುದ್ಧಕ್ಕೆ ಹೋಗುವನು } ಇಸ್ರೇಲರು ದಾವೀದನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆಂಬುದು ಫಿಲಿಷ್ಟಿಯರಿಗೆ ತಿಳಿದಾಗ, ಫಿಲಿಷ್ಟಿಯರೆಲ್ಲ ದಾವೀದನನ್ನು ಹಿಡಿಯಲು ಹಾಗೂ ಅವನನ್ನು ಕೊಲ್ಲಲು ಹೋದರು. ಆದರೆ ಈ ಸುದ್ದಿಯು ದಾವೀದನಿಗೆ ತಿಳಿಯಿತು. ಅವನು ಕೋಟೆಗೆ ಹೊರಟುಹೋದನು.

18 ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.

19

సమూయేలు రెండవ గ్రంథము అధ్యాయము 5

20 ದಾವೀದನು ಯೆಹೋವನಿಗೆ “ಫಿಲಿಷ್ಟಿಯರ ವಿರುದ್ಧ ಹೋರಾಡಲು ನಾನು ಹೋಗಬಹುದೇ? ಫಿಲಿಷ್ಟಿಯರನ್ನು ಸೋಲಿಸಲು ನೀನು ಸಹಾಯ ಮಾಡುವೆಯಾ?” ಎಂದು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು, ಫಿಲಿಷ್ಟಿಯರನ್ನು ಸೋಲಿಸಲು ನಾನು ಖಂಡಿತವಾಗಿಯೂ ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು. ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.

సమూయేలు రెండవ గ్రంథము అధ్యాయము 5

21 ಫಿಲಿಷ್ಟಿಯರು ತಮ್ಮ ದೇವರ ವಿಗ್ರಹಗಳನ್ನು ಬಾಳ್‌ಪೆರಾಚೀಮ್‌ನಲ್ಲಿಯೇ ಬಿಟ್ಟುಹೋದರು. ದಾವೀದನು ಮತ್ತು ಅವನ ಜನರು ಈ ವಿಗ್ರಹಗಳನ್ನು ತೆಗೆದುಕೊಂಡು ಹೋದರು.

22

23 ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.

సమూయేలు రెండవ గ్రంథము అధ్యాయము 5

24 ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು.

25 ಯೆಹೋವನು ಆಜ್ಞಾಪಿಸಿದಂತೆಯೇ ದಾವೀದನು ಮಾಡಿದನು. ಅವನು ಫಿಲಿಷ್ಟಿಯರನ್ನು ಸೋಲಿಸಿ ಗೆಬದಿಂದ ಗೆಜೆರಿನವರೆಗೆ ಅವರನ್ನು ಅಟ್ಟಿಸಿಕೊಂಡು ಹೋಗಿ ದಾರಿಯುದ್ದಕ್ಕೂ ಅವರನ್ನು ಕೊಂದನು.