Telugu బైబిల్
ఆమోసు మొత్తం 9 అధ్యాయాలు
ఆమోసు అధ్యాయము 1
1 {#1ಪರಿಚಯ }
2 ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು. {#1ಅರಾಮ್ಯರಿಗೆ ಶಿಕ್ಷೆ } ಆಮೋಸನು ಹೇಳಿದ್ದೇನೆಂದರೆ, “ಚೀಯೋನಿನಲ್ಲಿ ಯೆಹೋವನು ಸಿಂಹದಂತೆ ಗರ್ಜಿಸುವನು. ಜೆರುಸಲೇಮಿನಿಂದ ಆರ್ಭಟಿಸುತ್ತಾನೆ. ಆಗ ಕುರುಬರ ಹಸಿರು ಹುಲ್ಲುಗಾವಲು ಕಂದುಬಣ್ಣವಾಗಿ ಸಾಯುವುದು. ಕರ್ಮೆಲ್ ಬೆಟ್ಟವು ಒಣಗಿ ಬರಡಾಗುವುದು.”
ఆమోసు అధ్యాయము 1
3 ಯೆಹೋವನು ಹೇಳುವುದೇನೆಂದರೆ, “ದಮಸ್ಕದವರು ನಡಿಸಿದ ಅನೇಕ ಅಪರಾಧಗಳ ನಿಮಿತ್ತವಾಗಿ ನಾನು ಖಂಡಿತವಾಗಿಯೂ ಅವರನ್ನು ಶಿಕ್ಷಿಸುವೆನು. ಯಾಕೆಂದರೆ ಅವರು ಗಿಲ್ಯಾದಿನ ಜನರನ್ನು ಒಕ್ಕಣೆಗೆ ಉಪಯೋಗಿಸುವ ಕಬ್ಬಿಣದ ಸಲಕರಣೆಗಳಿಂದ ಜಜ್ಜಿಬಿಟ್ಟರು.
4 ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು.
5
ఆమోసు అధ్యాయము 1
6 “ನಾನು ದಮಸ್ಕದ ಹೆಬ್ಬಾಗಿಲುಗಳನ್ನೂ ಒಡೆದುಹಾಕುವೆನು; ಆವೆನ್ ಕಣಿವೆಯಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ತೆಗೆದುಬಿಡುವೆನು; ಬೇತ್ ಎದೆನ್‌ನಲ್ಲಿರುವ ಸಾಮರ್ಥ್ಯದ ಗುರುತನ್ನು ಕಿತ್ತುಹಾಕುವೆನು. ಆಗ ಅರಾಮ್ಯರು ಸೋಲಿಸಲ್ಪಟ್ಟವರಾಗಿ ಕೀರ್ ಎಂಬಲ್ಲಿಗೆ ಕೊಂಡೊಯ್ಯುವರು. ಇದು ಯೆಹೋವನ ನುಡಿ.” {#1ಫಿಲಿಷ್ಟಿಯರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಗಾಜದ ಜನರನ್ನು ಅವರು ಮಾಡಿದ ಅಪರಾಧಗಳ ನಿಮಿತ್ತ ಖಂಡಿತವಾಗಿಯೂ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಇಡೀ ಜನಾಂಗವನ್ನೇ ಎದೋಮಿಗೆ ಗುಲಾಮರನ್ನಾಗಿ ಕಳುಹಿಸಿದರು.
ఆమోసు అధ్యాయము 1
7 ಅದಕ್ಕಾಗಿ ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಈ ಬೆಂಕಿಯು ಗಾಜದ ಎತ್ತರವಾದ ಗೋಪುರಗಳನ್ನು ನಾಶಮಾಡುವದು.
8 ಇದಲ್ಲದೆ, ನಾನು ಅಷ್ಡೋದಿನಲ್ಲಿ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನನ್ನು ನಾಶಮಾಡುವೆನು; ಅಷ್ಕೆಲೋನಿನಲ್ಲಿ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು; ಎಕ್ರೋನಿನ ಜನರನ್ನು ಶಿಕ್ಷಿಸುವೆನು. ಆಮೇಲೆ ಅಳಿದುಳಿದ ಫಿಲಿಷ್ಟಿಯರು ಸಾಯುವರು.” ಇದು ಯೆಹೋವನ ನುಡಿ.
9 {#1ತೂರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.
ఆమోసు అధ్యాయము 1
10 ಆದ್ದರಿಂದ ನಾನು ತೂರಿನ ಗೋಡೆಯ ಮೇಲೆ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ತೂರಿನ ಎತ್ತರವಾದ ಬುರುಜುಗಳನ್ನು ನಾಶಮಾಡುವದು.”
11 {#1ಎದೋಮ್ಯರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ಎದೋಮ್ಯರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಎದೋಮ್ ತನ್ನ ಸಹೋದರನಾದ ಇಸ್ರೇಲನ್ನು ಕತ್ತಿಯಿಂದ ಹತಿಸಿತು. ಎದೋಮ್ ಯಾವ ಕರುಣೆಯನ್ನೂ ತೋರಲಿಲ್ಲ. ಅದರ ಕೋಪವು ನಿರಂತರವಾಗಿ ಮುಂದುವರಿಯಿತು; ಕ್ರೂರಪ್ರಾಣಿಯಂತೆ ಇಸ್ರೇಲನ್ನು ಹರಿದುಹರಿದು ಹಾಕಿತು.
ఆమోసు అధ్యాయము 1
12 ಆದ್ದರಿಂದ ನಾನು ತೇಮಾನಿನಲ್ಲಿ ಬೆಂಕಿಯನ್ನು ಹಾಕುವೆನು. ಆ ಬೆಂಕಿಯು ಬೋಚ್ರದ ಉನ್ನತ ಗೋಪುರಗಳನ್ನು ನಾಶಮಾಡುವದು.”
13 {#1ಅಮ್ಮೋನಿಯರಿಗೆ ಶಿಕ್ಷೆ } ಯೆಹೋವನು ಹೇಳುವುದೇನೆಂದರೆ, “ಅನೇಕಾನೇಕ ಅಪರಾಧಗಳನ್ನು ಮಾಡಿದ ಅಮ್ಮೋನಿಯರನ್ನು ನಾನು ಖಂಡಿತವಾಗಿಯೂ ಶಿಕ್ಷಿಸುತ್ತೇನೆ. ಯಾಕೆಂದರೆ ಅವರು ಗಿಲ್ಯಾದಿನ ಗರ್ಭಿಣಿ ಸ್ತ್ರೀಯರನ್ನು ಕೊಂದರು. ಆ ಪ್ರಾಂತ್ಯವನ್ನು ಕೈವಶಮಾಡಿಕೊಂಡು ತಮ್ಮ ದೇಶವನ್ನು ವಿಸ್ತಾರ ಮಾಡುವುದಕ್ಕಾಗಿ ಅವರು ಹೀಗೆ ಮಾಡಿದರು.
ఆమోసు అధ్యాయము 1
14 ಆದ್ದರಿಂದ ನಾನು ರಬ್ಬದ ಗೋಡೆಗಳಲ್ಲಿ ಬೆಂಕಿ ಹಾಕುವೆನು. ಆ ಬೆಂಕಿಯು ರಬ್ಬದ ಉನ್ನತ ಗೋಪುರಗಳನ್ನು ನಾಶಮಾಡುವದು; ಹಗಲಿನ ಯುದ್ಧದ ಕೂಗಾಟದಂತೆಯೂ ಸುಂಟರಗಾಳಿಯಂತೆಯೂ ಸಂಕಟವು ಅವರ ದೇಶಕ್ಕೆ ಬರುವದು.
15 ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು.