Telugu బైబిల్
ప్రసంగి మొత్తం 12 అధ్యాయాలు
ప్రసంగి
ప్రసంగి అధ్యాయము 2
ప్రసంగి అధ్యాయము 2
1 {#1“ಸುಖವು” ನೀತಿಮಾರ್ಗಕ್ಕೆ ನಡೆಸುವುದೇ? } ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.
2 ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು.
3
4 ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ. {#1ದುಡಿಮೆಯಿಂದ ಸಂತೋಷವಾಗುವುದೇ? } ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;
ప్రసంగి అధ్యాయము 2
5 ತೋಟಗಳನ್ನೂ ಉದ್ಯಾನವನಗಳನ್ನೂ ಮಾಡಿಸಿದೆ; ಎಲ್ಲಾ ಬಗೆಯ ಹಣ್ಣಿನ ಮರಗಳನ್ನು ನೆಡಿಸಿದೆ.
6 ನೀರಿನ ಕೊಳಗಳನ್ನು ಮಾಡಿಸಿ ಮರಗಳಿಗೆ ನೀರನ್ನು ಹಾಯಿಸಿದೆ.
7 ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.
ప్రసంగి అధ్యాయము 2
8
9 ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ. ನಾನು ಬಹು ಐಶ್ವರ್ಯವಂತನಾದೆ; ಪ್ರಸಿದ್ಧನಾದೆ. ನನಗಿಂತ ಮೊದಲು ಜೆರುಸಲೇಮಿನಲ್ಲಿದ್ದ ಎಲ್ಲರಿಗಿಂತಲೂ ನಾನು ದೊಡ್ಡವನಾದೆ. ನನಗೆ ಸಹಾಯಕ್ಕಾಗಿ ಯಾವಾಗಲೂ ನನ್ನಲ್ಲಿ ಜ್ಞಾನವಿತ್ತು.
ప్రసంగి అధ్యాయము 2
10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.
11
12 ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ. {#1ಜ್ಞಾನಿಗೂ ಅಜ್ಞಾನಿಗೂ ವ್ಯತ್ಯಾಸವೇನು? } ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ ಆಲೋಚಿಸಿದೆನು.
ప్రసంగి అధ్యాయము 2
13 ಆಗ ಬೆಳಕು ಕತ್ತಲೆಗಿಂತ ಉತ್ತಮವಾಗಿರುವಂತೆ ಜ್ಞಾನವು ಮೂಢತನಕ್ಕಿಂತ ಉತ್ತಮವಾಗಿದೆ ಎಂಬುದನ್ನು ಅರಿತುಕೊಂಡೆನು.
14 ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.
15 ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.
ప్రసంగి అధ్యాయము 2
16 ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.
17 {#1ಜೀವನದಲ್ಲಿ ನಿಜ ಸಂತೋಷವಿದೆಯೇ? }
18 ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು. ನನ್ನ ಪ್ರಯಾಸದ ಫಲವನ್ನು ನನ್ನ ತರುವಾಯ ಬೇರೆಯವರು ಪಡೆದುಕೊಳ್ಳುವುದರಿಂದ ನಾನು ಲೋಕದಲ್ಲಿ ಪಟ್ಟ ಪ್ರಯಾಸಕ್ಕೆ ಬೇಸರಗೊಂಡೆನು.
ప్రసంగి అధ్యాయము 2
19 ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.
20 ಆದ್ದರಿಂದ, ನಾನು ಈ ಲೋಕದಲ್ಲಿ ಪ್ರಯಾಸಪಟ್ಟ ಕೆಲಸಗಳ ಬಗ್ಗೆ ವ್ಯಸನಗೊಂಡೆನು.
21 ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ.
ప్రసంగి అధ్యాయము 2
22 ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು?
23 ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.
24 (24-25)ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.
ప్రసంగి అధ్యాయము 2
25
26 ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.