Telugu బైబిల్
యెహెజ్కేలు మొత్తం 48 అధ్యాయాలు
యెహెజ్కేలు
యెహెజ్కేలు అధ్యాయము 25
యెహెజ్కేలు అధ్యాయము 25
1 {#1ಅಮ್ಮೋನಿಗೆ ವಿರುದ್ಧ ಪ್ರವಾದನೆ } ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು:
2 “ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.
3 ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.
యెహెజ్కేలు అధ్యాయము 25
4 ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.
5 “ ‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
యెహెజ్కేలు అధ్యాయము 25
6 ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.
7 ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’ ”
యెహెజ్కేలు అధ్యాయము 25
8 {#1ಮೋವಾಬ್ ಮತ್ತು ಸೇಯೀರ್ ವಿರುದ್ಧ ಪ್ರವಾದನೆ } ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.
9 ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಬೇತ್‌ಯೆಷೀಮೋತ್, ಬಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು.
యెహెజ్కేలు అధ్యాయము 25
10 ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು.
11 ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”
12 {#1ಎದೋಮ್ ವಿರುದ್ಧ ಪ್ರವಾದನೆಗಳು } ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
యెహెజ్కేలు అధ్యాయము 25
13 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.
14 ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.
యెహెజ్కేలు అధ్యాయము 25
15 {#1ಫಿಲಿಷ್ಟಿಯರ ವಿರುದ್ಧ ಪ್ರವಾದನೆಗಳು } ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಬಕಾಲದ ದೆಬಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”
16 ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.
యెహెజ్కేలు అధ్యాయము 25
17 ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”