ఆదికాండము అధ్యాయము 6
16 ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.
17 “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
18 ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.
8