Telugu బైబిల్
హెబ్రీయులకు మొత్తం 13 అధ్యాయాలు
హెబ్రీయులకు
హెబ్రీయులకు అధ్యాయము 9
హెబ్రీయులకు అధ్యాయము 9
1 {#1ಹಳೆಯ ಒಡಂಬಡಿಕೆಯ ಕ್ರಮಕ್ಕನುಸಾರವಾದ ಆರಾಧನೆ } ಮೊದಲನೆ ಒಡಂಬಡಿಕೆಯಲ್ಲಿ ಆರಾಧನೆಯ ನಿಯಮಗಳಿದ್ದವು. ಅದರಲ್ಲಿ ಮಾನವನಿರ್ಮಿತವಾದ ಆರಾಧನಾ ಸ್ಥಳವಿತ್ತು.
2 ಈ ಸ್ಥಳವು ಗುಡಾರದ ಒಳಗಿತ್ತು. ಗುಡಾರದ ಮೊದಲ ಆವರಣವನ್ನು ಪವಿತ್ರ ಸ್ಥಳವೆಂದು ಕರೆಯುತ್ತಿದ್ದರು. ಪವಿತ್ರ ಸ್ಥಳದಲ್ಲಿ ದೀಪಸ್ತಂಭ, ಮೇಜು ಮತ್ತು ದೇವರಿಗೆ ಅರ್ಪಿಸಲ್ಪಟ್ಟ ರೊಟ್ಟಿಗಳಿದ್ದವು.
3 ಎರಡನೆ ತೆರೆಯ ಹಿಂದೆ “ಮಹಾ ಪವಿತ್ರಸ್ಥಳ”ವೆಂದು ಕರೆಸಿಕೊಳ್ಳುವ ಒಂದು ಕೊಠಡಿಯಿತ್ತು.
హెబ్రీయులకు అధ్యాయము 9
4 ಮಹಾ ಪವಿತ್ರಸ್ಥಳದಲ್ಲಿ ಧೂಪವನ್ನು ಸುಡುವುದಕ್ಕಾಗಿ ಬಂಗಾರದ ಯಜ್ಞವೇದಿಕೆಯಿತ್ತು. ಅಲ್ಲದೆ ಮೊದಲನೆ ಒಡಂಬಡಿಕೆಯನ್ನು ಇಡಲಾಗಿದ್ದ ಪವಿತ್ರ ಪೆಟ್ಟಿಗೆಯಿತ್ತು. ಅದಕ್ಕೆ ಚಿನ್ನದ ತಗಡನ್ನು ಹೊದಿಸಲಾಗಿತ್ತು. ಅದರ ಒಳಗಡೆ ಚಿನ್ನದ ಪಾತ್ರೆಯಲ್ಲಿಟ್ಟಿದ್ದ ಮನ್ನಾ ಮತ್ತು ಒಂದಾನೊಂದು ಕಾಲದಲ್ಲಿ ಚಿಗುರಿ ಎಲೆಗಳನ್ನು ಬಿಟ್ಟಿದ್ದ ಆರೋನನ ಕೋಲು ಇದ್ದವು. ಅಲ್ಲದೆ ಆ ಮೊದಲನೆ ಒಡಂಬಡಿಕೆಯ ಹತ್ತು ಆಜ್ಞೆಗಳನ್ನು ಬರೆಯಲಾಗಿದ್ದ ಕಲ್ಲಿನ ಹಲಗೆಗಳನ್ನು ಅದರಲ್ಲಿ ಇಡಲಾಗಿತ್ತು.
హెబ్రీయులకు అధ్యాయము 9
5 ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.
6 ನಾನು ನಿಮಗೆ ವಿವರಿಸಿದಂತೆಯೇ ಗುಡಾರದಲ್ಲಿ ಎಲ್ಲವನ್ನೂ ಸಿದ್ಧಮಾಡಲಾಗಿತ್ತು. ಯಾಜಕರು ಪ್ರತಿದಿನವೂ ತಮ್ಮ ಆರಾಧನೆಯ ಕರ್ತವ್ಯಗಳನ್ನು ಮಾಡಲು ಮೊದಲನೆ ಕೊಠಡಿಯ ಒಳಗಡೆ ಹೋಗುತ್ತಿದ್ದರು.
7 ಆದರೆ ಪ್ರಧಾನಯಾಜಕನು ಮಾತ್ರ ಎರಡನೆ ಕೊಠಡಿಯ ಒಳಗೆ ಹೋಗಬಹುದಿತ್ತು. ಅವನು ವರ್ಷಕ್ಕೊಮ್ಮೆ ಮಾತ್ರ ಅದರೊಳಗೆ ಹೋಗುತ್ತಿದ್ದನು. ಅವನು ತನ್ನೊಂದಿಗೆ ರಕ್ತವನ್ನು ತೆಗೆದುಕೊಳ್ಳದೆ ಎಂದೂ ಅದರೊಳಗೆ ಪ್ರವೇಶಿಸುತ್ತಿರಲಿಲ್ಲ. ತನಗೋಸ್ಕರವಾಗಿಯೂ ಜನರು ತಿಳಿಯದೆ ಮಾಡಿದ ಪಾಪಗಳಿಗಾಗಿಯೂ ಅವನು ಆ ರಕ್ತವನ್ನು ದೇವರಿಗೆ ಅರ್ಪಿಸುತ್ತಿದ್ದನು.
హెబ్రీయులకు అధ్యాయము 9
8 ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.
9 ಈ ದಿನ ನಮಗೆ ಇದೊಂದು ಉದಾಹರಣೆಯಾಗಿದೆ. ದೇವರಿಗೆ ಅರ್ಪಿಸಲ್ಪಡುತ್ತಿದ್ದ ಕಾಣಿಕೆಗಳಿಗಾಗಲಿ ಯಜ್ಞಗಳಿಗಾಗಲಿ ದೇವಾರಾಧನೆ ಮಾಡುವ ವ್ಯಕ್ತಿಯನ್ನು ಪರಿಪೂರ್ಣನನ್ನಾಗಿ ಮಾಡಲು ಸಾಧ್ಯವಿರಲಿಲ್ಲ ಎಂಬುದನ್ನು ಇದು ತೋರ್ಪಡಿಸುತ್ತದೆ. ಆ ವ್ಯಕ್ತಿಯ ಹೃದಯವನ್ನು ಪರಿಶುದ್ಧಗೊಳಿಸಲು ಆ ಯಜ್ಞಗಳಿಗೆ ಸಾಧ್ಯವಿರಲಿಲ್ಲ.
హెబ్రీయులకు అధ్యాయము 9
10 ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.
11 {#1ಹೊಸ ಒಡಂಬಡಿಕೆಗನುಸಾರವಾಗಿ ಆರಾಧನೆ } ಆದರೆ ಕ್ರಿಸ್ತನು ಈಗಾಗಲೇ ಪ್ರಧಾನಯಾಜಕನಾಗಿ ಬಂದಿದ್ದಾನೆ. ಈಗ ನಾವು ಹೊಂದಿರುವ ಉತ್ತಮ ಸಂಗತಿಗಳಿಗೆ ಆತನು ಪ್ರಧಾನಯಾಜಕನಾಗಿದ್ದಾನೆ. ಇತರ ಯಾಜಕರಾದರೊ ಗುಡಾರದಲ್ಲಿ ಸೇವೆಯನ್ನು ಮಾಡಿದರು. ಆದರೆ ಕ್ರಿಸ್ತನು ಗುಡಾರದಲ್ಲಿ ಸೇವೆ ಮಾಡದೆ ಅದಕ್ಕಿಂತಲೂ ಶ್ರೇಷ್ಠವಾದ ಸ್ಥಳದಲ್ಲಿ ಸೇವೆ ಮಾಡುತ್ತಾನೆ. ಅದು ಮತ್ತಷ್ಟು ಪರಿಪೂರ್ಣವಾದದ್ದು. ಅದು ಮನುಷ್ಯರಿಂದ ನಿರ್ಮಿತವಾದದ್ದಲ್ಲ. ಲೋಕಕ್ಕೆ ಸೇರಿದ್ದೂ ಅಲ್ಲ.
హెబ్రీయులకు అధ్యాయము 9
12 ಆತನು ಒಂದೇ ಒಂದು ಸಾರಿ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿದನು. ಆತನು ಹೋತಗಳ ಮತ್ತು ಹೋರಿಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತದಿಂದಲೇ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸಿ ನಮಗೆ ನಿತ್ಯಸ್ವಾತಂತ್ರ್ಯವನ್ನು ತಂದುಕೊಟ್ಟನು.
13 ಹೋತಗಳ ಮತ್ತು ಹೋರಿಗಳ ರಕ್ತವನ್ನೂ ಹಸುಗಳ ಬೂದಿಯನ್ನೂ ಆ ಆರಾಧನೆಯ ಸ್ಥಳದಲ್ಲಿ ಪ್ರವೇಶಿಸುವಷ್ಟು ಶುದ್ಧರಾಗಿಲ್ಲದ ಜನರ ಮೇಲೆ ಚಿಮುಕಿಸಲಾಗುತ್ತಿತ್ತು. ಆ ರಕ್ತ ಮತ್ತು ಬೂದಿ ಜನರ ದೇಹಗಳನ್ನು ಮಾತ್ರ ಶುದ್ಧಿಗೊಳಿಸುತ್ತಿದ್ದವು.
హెబ్రీయులకు అధ్యాయము 9
14 ಆದ್ದರಿಂದ ಆತನ ರಕ್ತವು ಖಚಿತವಾಗಿ ಅದಕ್ಕಿಂತಲೂ ಹೆಚ್ಚಿನದನ್ನು ಸಾಧಿಸುತ್ತದೆ. ಆತನು ನಿತ್ಯಾತ್ಮನ ಮೂಲಕ ತನ್ನನ್ನು ತಾನೇ ದೇವರಿಗೆ ನಿಷ್ಕಳಂಕವಾದ ಯಜ್ಞವನ್ನಾಗಿ ಅರ್ಪಿಸಿಕೊಂಡನು. ಆತನ ರಕ್ತವು ನಮ್ಮನ್ನು ನಮ್ಮ ಕೆಟ್ಟಕಾರ್ಯಗಳಿಂದ ಪರಿಪೂರ್ಣವಾಗಿ ಬಿಡಿಸಿ ನಾವು ಜೀವಸ್ವರೂಪನಾದ ದೇವರನ್ನು ಆರಾಧಿಸಲು ಸಾಧ್ಯವಾಗುವಂತೆ ನಮ್ಮ ಹೃದಯವನ್ನೂ ಪರಿಶುದ್ಧಗೊಳಿಸುತ್ತದೆ.
15
16 ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. ಒಬ್ಬನು ಸಾಯುವ ಮೊದಲೇ ಉಯಿಲನ್ನು[* ಉಯಿಲು ಒಬ್ಬ ವ್ಯಕ್ತಿಯು ಸತ್ತಮೇಲೆ, ತನ್ನ ವಸ್ತುಗಳು ಯಾರಿಗೆ ಸೇರಬೇಕೆಂದು ಬರೆದಿಡುವ ಒಂದು ಪತ್ರ. ಅದನ್ನು “ಮರಣಶಾಸನ”ವೆಂದೂ ಕರೆಯುವರು. ] ಬರೆದಿಡುತ್ತಾನೆ. ಆದರೆ ಸತ್ತಿರುವಾತನೇ ಆ ಉಯಿಲನ್ನು ಬರೆದವನೆಂದು ಜನರು ಸಾಧಿಸಿ ತೋರಿಸಬೇಕು.
హెబ్రీయులకు అధ్యాయము 9
17 ಅದನ್ನು ಬರೆದವನು ಇನ್ನೂ ಬದುಕಿದ್ದರೆ ಅದಕ್ಕೆ ಬೆಲೆಯೇನೂ ಇಲ್ಲ. ಅದನ್ನು ಬರೆದಾತನು ಸತ್ತನಂತರ ಅದು ಉಪಯುಕ್ತವಾಗಿರುತ್ತದೆ.
18 ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಮೊದಲನೆ ಒಡಂಬಡಿಕೆ ಇದಕ್ಕೆ ಹೋಲಿಕೆಯಾಗಿದೆ. ಮೊದಲನೆ ಒಡಂಬಡಿಕೆ ಉಪಯುಕ್ತಕ್ಕೆ ಬರಲು ರಕ್ತಾರ್ಪಣೆಯಾಗಬೇಕಿತ್ತು.
19 ಮೊದಲನೆಯದಾಗಿ, ಮೋಶೆಯು ಧರ್ಮಶಾಸ್ತ್ರದ ಪ್ರತಿಯೊಂದು ಆಜ್ಞೆಯನ್ನೂ ಜನರಿಗೆಲ್ಲ ತಿಳಿಸಿದನು. ನಂತರ ಅವನು ಕರುಗಳ ರಕ್ತವನ್ನು ತೆಗೆದುಕೊಂಡು ಅದನ್ನು ನೀರಿನೊಂದಿಗೆ ಬೆರೆಸಿದನು. ಬಳಿಕ ನೀರು ಮತ್ತು ರಕ್ತವನ್ನು ಧರ್ಮಶಾಸ್ತ್ರದ ಮೇಲೆ ಮತ್ತು ಜನರೆಲ್ಲರ ಮೇಲೆ ಚಿಮುಕಿಸಲು ಕೆಂಪು ಉಣ್ಣೆಯನ್ನೂ ಹಿಸ್ಸೋಪ್ ಗಿಡದ[† ಹಿಸ್ಸೋಪಿನ ಗಿಡ ಒಂದು ಬಗೆಯ ಸಸ್ಯ. ] ಕವಲನ್ನು ಉಪಯೋಗಿಸಿದನು.
హెబ్రీయులకు అధ్యాయము 9
20 ಚಿಮುಕಿಸುವಾಗ, “ನೀವು ಅನುಸರಿಸಬೇಕೆಂದು ದೇವರು ಆಜ್ಞಾಪಿಸಿದ ಒಡಂಬಡಿಕೆಯನ್ನು ಈ ರಕ್ತ ದೃಢಪಡಿಸುತ್ತದೆ”[✡ ಉಲ್ಲೇಖನ: ವಿಮೋಚನ. 24: 8. ] ಎಂದು ಹೇಳಿದನು.
21 ಅದೇರೀತಿ, ಮೋಶೆಯು ರಕ್ತವನ್ನು ಗುಡಾರದ ಮೇಲೆಯೂ ಆರಾಧನೆಯಲ್ಲಿ ಬಳಸುವ ಎಲ್ಲಾ ವಸ್ತುಗಳ ಮೇಲೆಯೂ ಚಿಮುಕಿಸಿದನು.
22 ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.
హెబ్రీయులకు అధ్యాయము 9
23 {#1ಕ್ರಿಸ್ತನ ಯಜ್ಞವು ಪಾಪಗಳನ್ನು ದೂರತಳ್ಳಿತು } ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
24 ಕ್ರಿಸ್ತನು ಮಹಾ ಪವಿತ್ರಸ್ಥಳದೊಳಕ್ಕೆ ಹೋದನು. ಆದರೆ ಆತನು ಮಾನವನಿರ್ಮಿತವಾದ ಮಹಾಪವಿತ್ರಸ್ಥಳಕ್ಕೆ ಹೋಗಲಿಲ್ಲ. ಈ ಮಹಾಪವಿತ್ರಸ್ಥಳವು ನಿಜವಾದದ್ದರ ಪ್ರತಿರೂಪ ಮಾತ್ರವಾಗಿದೆ. ಆತನು ಪರಲೋಕಕ್ಕೆ ಹೋದನು; ನಮಗೆ ಸಹಾಯ ಮಾಡುವುದಕ್ಕೋಸ್ಕರ ಈಗ ದೇವರ ಸನ್ನಿಧಿಯಲ್ಲಿದ್ದಾನೆ.
హెబ్రీయులకు అధ్యాయము 9
25 ಪ್ರಧಾನಯಾಜಕನು ವರ್ಷಕ್ಕೊಮ್ಮೆ ಮಹಾ ಪವಿತ್ರಸ್ಥಳಕ್ಕೆ ಪ್ರವೇಶಿಸುವಾಗ ಅರ್ಪಿಸುವುದಕ್ಕಾಗಿ ಪಶುರಕ್ತವನ್ನು ತನ್ನೊಡನೆ ತೆಗೆದುಕೊಂಡು ಹೋಗುತ್ತಿದ್ದನು. ಆದರೆ ಅವನು ತನ್ನ ಸ್ವಂತ ರಕ್ತವನ್ನು ಅರ್ಪಿಸುತ್ತಿರಲಿಲ್ಲ. ಕ್ರಿಸ್ತನು ಪರಲೋಕಕ್ಕೆ ಹೋದದ್ದು, ಪ್ರಧಾನ ಯಾಜಕನು ಮತ್ತೆಮತ್ತೆ ರಕ್ತವನ್ನು ಅರ್ಪಿಸಿದಂತೆ ತನ್ನನ್ನು ಮತ್ತೆಮತ್ತೆ ಅರ್ಪಿಸಿಕೊಳ್ಳುವುದಕ್ಕಾಗಿಯಲ್ಲ.
26 ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.
హెబ్రీయులకు అధ్యాయము 9
27 ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.
28 ಅದರಂತೆಯೇ ಕ್ರಿಸ್ತನು ಅನೇಕ ಜನರ ಪಾಪಗಳನ್ನು ತೆಗೆದುಹಾಕಲು ಒಂದು ಸಲ ಮಾತ್ರ ತನ್ನನ್ನು ಯಜ್ಞವನ್ನಾಗಿ ಅರ್ಪಿಸಿಕೊಂಡನು. ಕ್ರಿಸ್ತನು ಎರಡನೆ ಸಲ ಪ್ರತ್ಯಕ್ಷನಾಗುವುದು ಜನರ ಪಾಪನಿವಾರಣೆಗೋಸ್ಕರವಲ್ಲ. ತನಗಾಗಿ ಕಾಯುತ್ತಿರುವ ಜನರನ್ನು ಬಿಡುಗಡೆ ಮಾಡುವುದಕ್ಕಾಗಿಯಷ್ಟೇ.