Telugu బైబిల్

హొషేయ మొత్తం 14 అధ్యాయాలు

హొషేయ

హొషేయ అధ్యాయము 14
హొషేయ అధ్యాయము 14

1 {#1ಯೆಹೋವನ ಬಳಿಗೆ ಹಿಂದಿರುಗಿರಿ } ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.

2 ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.

హొషేయ అధ్యాయము 14

3 ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ. ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ. ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”

4 {#1ಯೆಹೋವನು ಇಸ್ರೇಲನ್ನು ಕ್ಷಮಿಸುವನು } ಯೆಹೋವನು ಹೇಳುವುದೇನೆಂದರೆ, “ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.

హొషేయ అధ్యాయము 14

5 ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.

6 ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು. ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.

హొషేయ అధ్యాయము 14

7 ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು, ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”

8 {#1ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ } “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ. ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”

హొషేయ అధ్యాయము 14

9 {#1ಅಂತಿಮ ಸಲಹೆ } ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ. ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.