Telugu బైబిల్

హొషేయ మొత్తం 14 అధ్యాయాలు

హొషేయ

హొషేయ అధ్యాయము 5
హొషేయ అధ్యాయము 5

1 {#1ಇಸ್ರೇಲ್ ಮತ್ತು ಯೆಹೂದವು ಪಾಪದಲ್ಲಿ ಬೀಳಲು ಅವರ ನಾಯಕರೇ ಕಾರಣ } “ಯಾಜಕರೇ, ಇಸ್ರೇಲ್ ಜನಾಂಗವೇ, ಅರಸನ ಪರಿವಾರದವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಯಾಕೆಂದರೆ ನಿಮಗೆ ನ್ಯಾಯತೀರ್ಪು ಬಂದಿದೆ. “ಮಿಚ್ಪದಲ್ಲಿ ನೀವು ಉರುಲಿನಂತೆ ಇದ್ದಿರಿ. ತಾಬೋರಿನಲ್ಲಿ ನೆಲದ ಮೇಲೆ ಹರಡಿಸಿದ್ದ ಬಲೆಯಂತೆ ಇದ್ದಿರಿ.

2 ನೀವು ಅನೇಕಾನೇಕ ಕೆಟ್ಟ ಸಂಗತಿಗಳನ್ನು ಮಾಡಿದ್ದೀರಿ. ಆದ್ದರಿಂದ ನಿಮ್ಮೆಲ್ಲರನ್ನು ನಾನು ಶಿಕ್ಷಿಸುತ್ತೇನೆ.

హొషేయ అధ్యాయము 5

3 ಎಫ್ರಾಯೀಮೇ, ನನಗೆ ಗೊತ್ತುಂಟು. ಇಸ್ರೇಲ್ ಮಾಡಿದ ವಿಷಯಗಳೆಲ್ಲವನ್ನು ನಾನು ಬಲ್ಲೆನು. ಎಫ್ರಾಯೀಮೇ, ನೀನು ಈಗಲೂ ಸೂಳೆಯಂತೆ ವರ್ತಿಸುತ್ತಿರುವಿ. ತನ್ನ ಪಾಪಗಳಿಂದ ಇಸ್ರೇಲ್ ಮಲಿನವಾಗಿದೆ.

4 ಇಸ್ರೇಲಿನ ಜನರು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆ ದುಷ್ಕೃತ್ಯಗಳು ಅವರನ್ನು ತಮ್ಮ ದೇವರ ಬಳಿಗೆ ಹಿಂತಿರುಗಿ ಬಾರದಂತೆ ಮಾಡುತ್ತಿವೆ. ಅವರು ಯಾವಾಗಲೂ ಇತರ ದೇವರುಗಳ ಹಿಂದೆ ಹೇಗೆ ಹೋಗೋಣ ಎಂದು ಮಾರ್ಗವನ್ನು ಹುಡುಕುತ್ತಿದ್ದಾರೆ. ಅವರಿಗೆ ಯೆಹೋವನ ಪರಿಚಯವಿಲ್ಲ.

హొషేయ అధ్యాయము 5

5 ಇಸ್ರೇಲಿನ ಹೆಮ್ಮೆಯು ಅವರಿಗೆ ವಿರುದ್ಧವಾಗಿ ಸಾಕ್ಷಿನೀಡುತ್ತದೆ. ಇಸ್ರೇಲ್ ಮತ್ತು ಎಫ್ರಾಯೀಮ್ ತಮ್ಮ ಪಾಪಗಳಿಂದಲೇ ಮುಗ್ಗರಿಸುವರು. ಯೆಹೂದವೂ ಅವರೊಂದಿಗೆಯೇ ಮುಗ್ಗರಿಸುವದು.

6 “ಜನರ ನಾಯಕರು ಯೆಹೋವನನ್ನು ಹುಡುಕಾಡುವರು. ಅವರು ತಮ್ಮ ಕುರಿದನಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗುವರು. ಆದರೆ ಅವರು ಯೆಹೋವನನ್ನು ಕಂಡುಕೊಳ್ಳುವದಿಲ್ಲ. ಯಾಕೆಂದರೆ ಆತನು ಅವರನ್ನು ಬಿಟ್ಟುಹೋಗಿರುತ್ತಾನೆ.

7 ಅವರು ಯೆಹೋವನಿಗೆ ನಂಬಿಗಸ್ತರಾಗಿರಲಿಲ್ಲ. ಅವರ ಮಕ್ಕಳು ಅನ್ಯರಿಗೆ ಹುಟ್ಟಿದ್ದಾರೆ. ಆದ್ದರಿಂದ ಈಗ ಆತನು ಅವರನ್ನೂ ಅವರ ದೇಶವನ್ನೂ ತಿರುಗಿ ನಾಶಮಾಡುವನು.”

హొషేయ అధ్యాయము 5

8 {#1ಇಸ್ರೇಲಿನ ನಾಶನದ ಪ್ರವಾದನೆ } “ಗಿಬ್ಯದಲ್ಲಿ ಕೊಂಬನ್ನೂದು, ರಾಮದಲ್ಲಿ ತುತ್ತೂರಿಯನ್ನೂದು. ಬೇತಾವೆನಿನಲ್ಲಿ ಎಚ್ಚರಿಕೆಯನ್ನು ನೀಡು. ಬೆನ್ಯಾಮೀನನೇ, ವೈರಿಯು ನಿನ್ನ ಹಿಂದೆಯೇ ಇದ್ದಾನೆ.

9 ಶಿಕ್ಷೆಯು ವಿಧಿಸಲ್ಪಡುವಾಗ ಎಫ್ರಾಯೀಮ್ ಬರಿದಾಗುವದು. ಇದು ಖಂಡಿತವಾಗಿಯೂ ನೆರವೇರುವದೆಂದು ಯೆಹೋವನಾದ ನಾನು ಇಸ್ರೇಲ್ ಕುಟುಂಬಗಳಿಗೆ ತಿಳಿಸುತ್ತಿದ್ದೇನೆ.

హొషేయ అధ్యాయము 5

10 ಯೆಹೂದದ ನಾಯಕರು ಪರರ ಆಸ್ತಿಯನ್ನು ದೋಚುವ ಕಳ್ಳರಂತಿದ್ದಾರೆ. ಯೆಹೋವನಾದ ನಾನು ಅವರ ಮೇಲೆ ನನ್ನ ಕೋಪವನ್ನು ನೀರಿನಂತೆ ಸುರಿಸುವೆನು.

11 ಎಫ್ರಾಯೀಮ್ ಶಿಕ್ಷಿಸಲ್ಪಡುವನು. ಅವನು ದ್ರಾಕ್ಷಿಹಣ್ಣಿನಂತೆ ನಜ್ಜುಗುಜ್ಜಾಗುವನು. ಕಾರಣವೇನೆಂದರೆ, ಅವನು ಹೊಲಸನ್ನು ಹಿಂಬಾಲಿಸಲು ತೀರ್ಮಾನಿಸಿದ್ದಾನೆ.

హొషేయ అధ్యాయము 5

12 ನಾನು ಎಫ್ರಾಯೀಮನನ್ನು ನಾಶಮಾಡುವೆನು, ನುಸಿಯು ಬಟ್ಟೆಯನ್ನು ನಾಶಮಾಡುವ ರೀತಿಯಲ್ಲಿ, ಮರದ ತುಂಡನ್ನು ಗೆದ್ದಲು ನಾಶಮಾಡುವಂತೆ ಯೆಹೂದವನ್ನು ನಾಶಮಾಡುವೆನು.

13 ಎಫ್ರಾಯೀಮು ತನ್ನ ವ್ಯಾಧಿಯನ್ನು ನೋಡಿದನು. ಯೆಹೂದವು ತನ್ನ ಗಾಯಗಳನ್ನು ನೋಡಿದನು. ಆಮೇಲೆ ಸಹಾಯಕ್ಕಾಗಿ ಅಶ್ಶೂರ್ಯರ ಬಳಿಗೆ ಹೋದರು. ಆ ಮಹಾ ಅರಸನ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಆದರೆ ಆ ಅರಸನು ನಿಮ್ಮನ್ನು ಗುಣಮಾಡನು. ನಿಮ್ಮ ಗಾಯಗಳನ್ನು ಗುಣಮಾಡಲು ಸಾಧ್ಯವಿಲ್ಲ.

హొషేయ అధ్యాయము 5

14 ಯಾಕೆಂದರೆ ನಾನು ಎಫ್ರಾಯೀಮನಿಗೆ ಸಿಂಹದಂತಿರುವೆನು. ಯೆಹೂದ ಜನಾಂಗದವರಿಗೆ ನಾನು ಪ್ರಾಯದ ಸಿಂಹದಂತಿರುವೆನು. ಹೌದು, ಯೆಹೋವನಾದ ನಾನು ಅವರನ್ನು ಹರಿದು ಚೂರುಚೂರಾಗಿ ಮಾಡುವೆನು. ನಾನು ಅವರನ್ನು ಎತ್ತಿಕೊಂಡು ಹೋಗುವೆನು. ಯಾರೂ ಅವರನ್ನು ನನ್ನಿಂದ ರಕ್ಷಿಸಲಾರರು.

15 ಜನರು ತಮ್ಮ ದೋಷವನ್ನು ಒಪ್ಪಿಕೊಳ್ಳುವ ತನಕ ನಾನು ನನ್ನ ಸ್ಥಳಕ್ಕೆ ಹಿಂತಿರುಗಿ ಹೋಗುವೆನು, ಅವರು ನನ್ನನ್ನು ಹುಡುಕುವರು. ಹೌದು, ತಮ್ಮ ಸಂಕಟದಲ್ಲಿ ನನ್ನನ್ನು ಹುಡುಕಲು ಅತಿಯಾಗಿ ಪ್ರಯತ್ನಿಸುವರು.”