Telugu బైబిల్
యెషయా గ్రంథము మొత్తం 66 అధ్యాయాలు
యెషయా గ్రంథము
యెషయా గ్రంథము అధ్యాయము 12
యెషయా గ్రంథము అధ్యాయము 12
1 {#1ದೇವರಿಗೆ ಸ್ತೋತ್ರದ ಹಾಡು } ಆ ಸಮಯದಲ್ಲಿ ನೀನು ಹೀಗೆನ್ನುವೆ: “ಯೆಹೋವನೇ, ನಾನು ನಿನ್ನನ್ನು ಸ್ತುತಿಸುವೆ! ನೀನು ನನ್ನ ಮೇಲೆ ಕೋಪಿಸಿಕೊಂಡಿರುವೆ. ಆದರೆ ಈಗ ನೀನು ನನ್ನ ಮೇಲೆ ಕೋಪಗೊಳ್ಳಬೇಡ! ನಿನ್ನ ಪ್ರೀತಿಯನ್ನು ನನ್ನ ಮೇಲೆ ತೋರಿಸು.
2 ದೇವರು ನನ್ನನ್ನು ರಕ್ಷಿಸುತ್ತಾನೆ. ಆತನಲ್ಲಿ ಭರವಸವಿಟ್ಟಿದ್ದೇನೆ. ಆದ್ದರಿಂದ ನಾನು ಭಯಪಡೆನು. ಆತನು ನನ್ನನ್ನು ರಕ್ಷಿಸುತ್ತಾನೆ. ಯೆಹೋವನೇ ನನ್ನ ಬಲವು. ಆತನು ನನ್ನನ್ನು ರಕ್ಷಿಸುತ್ತಾನೆ. ನಾನು ಆತನಿಗೆ ಸ್ತೋತ್ರಗಾನ ಹಾಡುವೆನು.”
యెషయా గ్రంథము అధ్యాయము 12
3 ರಕ್ಷಣೆಯೆಂಬ ಬುಗ್ಗೆಯಿಂದ ನೀರನ್ನು ತೆಗೆದುಕೊ. ಆಗ ನೀನು ಸಂತೋಷಗೊಳ್ಳುವೆ.
4 ಆಗ ನೀನು, “ಯೆಹೋವನಿಗೆ ಸ್ತೋತ್ರವಾಗಲಿ, ಆತನ ಹೆಸರಿನ ಮಹತ್ವವನ್ನು ವರ್ಣಿಸಿರಿ! ಆತನು ಜನಾಂಗಗಳಲ್ಲಿ ಮಾಡಿದ ಕಾರ್ಯಗಳನ್ನು ಸಾರಿರಿ. ಆತನ ಹೆಸರು ಮಹೋನ್ನತವೆಂದು ಜ್ಞಾಪಕಪಡಿಸಿರಿ!” ಎಂದು ಹೇಳುವೆ.
యెషయా గ్రంథము అధ్యాయము 12
5 ಯೆಹೋವನಿಗೆ ಸ್ತೋತ್ರಗಾನ ಹಾಡಿರಿ. ಯಾಕೆಂದರೆ ಆತನು ಮಹಾಕಾರ್ಯಗಳನ್ನು ನಡೆಸಿದ್ದಾನೆ. ದೇವರ ಬಗ್ಗೆ ಎಲ್ಲರಿಗೂ ಪ್ರಕಟಿಸಿರಿ. ಇಡೀ ಲೋಕಕ್ಕೆ ಸಾರಿರಿ. ಎಲ್ಲಾ ಜನರು ಇದನ್ನು ತಿಳಿಯಲಿ.
6 ಚೀಯೋನಿನ ನಿವಾಸಿಗಳೇ, ಇದರ ವಿಷಯವಾಗಿ ಹರ್ಷಧ್ವನಿ ಮಾಡಿರಿ. ಇಸ್ರೇಲರ ಪರಿಶುದ್ಧನು ನಿಮ್ಮೊಂದಿಗೆ ಬಲವಾಗಿದ್ದಾನೆ. ಆದ್ದರಿಂದ ಹರ್ಷಿಸಿರಿ.