Telugu బైబిల్
యోహాను సువార్త మొత్తం 21 అధ్యాయాలు
యోహాను సువార్త
యోహాను సువార్త అధ్యాయము 7
యోహాను సువార్త అధ్యాయము 7
1 {#1ಯೇಸು ಮತ್ತು ಆತನ ಸಹೋದರರು } ಇದಾದ ಮೇಲೆ, ಯೇಸು ಗಲಿಲಾಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿದನು. ಜುದೇಯದಲ್ಲಿ ಸಂಚರಿಸಲು ಯೇಸುವಿಗೆ ಇಷ್ಟವಿರಲಿಲ್ಲ. ಏಕೆಂದರೆ ಅಲ್ಲಿನ ಯೆಹೂದ್ಯರು ಆತನನ್ನು ಕೊಲ್ಲಲು ಅವಕಾಶಕ್ಕಾಗಿ ಕಾಯುತ್ತಿದ್ದರು.
2 ಆಗ ಯೆಹೂದ್ಯರ ಪರ್ಣಕುಟೀರಗಳ ಹಬ್ಬದ ಸಮಯವಾಗಿತ್ತು.
3 ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.
యోహాను సువార్త అధ్యాయము 7
4 ತನ್ನ ಬಗ್ಗೆ ಜನರಿಗೆ ತಿಳಿಯಬೇಕೆಂದು ಅಪೇಕ್ಷಿಸುವವನು ತಾನು ಮಾಡುವ ಕಾರ್ಯಗಳನ್ನು ಮರೆಮಾಡಕೂಡದು. ನಿನ್ನನ್ನು ಈ ಲೋಕಕ್ಕೆ ತೋರಿಸಿಕೊ. ನೀನು ಮಾಡುವ ಕಾರ್ಯಗಳನ್ನು ಅವರು ನೋಡಲಿ” ಎಂದು ಹೇಳಿದರು.
5 (ಯೇಸುವಿನ ಸಹೋದರರು ಸಹ ಆತನನ್ನು ನಂಬಲಿಲ್ಲ.)
6 ಯೇಸು ತನ್ನ ಸಹೋದರರಿಗೆ, “ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ. ನಿಮಗಾದರೋ ಹೋಗಲು ಎಲ್ಲಾ ಸಮಯವೂ ಸರಿಯಾಗಿರುತ್ತದೆ.
యోహాను సువార్త అధ్యాయము 7
7 ಈ ಲೋಕವು ನಿಮ್ಮನ್ನು ದ್ವೇಷಿಸಲಾರದು. ಆದರೆ ಈ ಲೋಕವು ನನ್ನನ್ನು ದ್ವೇಷಿಸುತ್ತದೆ. ಏಕೆಂದರೆ ನಾನು ಈ ಲೋಕದ ಜನರಿಗೆ, ಅವರು ಮಾಡುತ್ತಿರುವುದು ಕೆಟ್ಟಕಾರ್ಯಗಳೆಂದು ಹೇಳುವೆನು.
8 ಆದ್ದರಿಂದ ನೀವು ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ನನಗೆ ಸರಿಯಾದ ಸಮಯವು ಇನ್ನೂ ಬಂದಿಲ್ಲ” ಎಂದು ಹೇಳಿದನು.
9 ಯೇಸು ಹೀಗೆ ಹೇಳಿ ಗಲಿಲಾಯದಲ್ಲೇ ಉಳಿದುಕೊಂಡನು.
10 ಆದ್ದರಿಂದ ಯೇಸುವಿನ ಸಹೋದರರು ಹಬ್ಬಕ್ಕಾಗಿ ಹೊರಟರು. ಅವರು ಹೋದನಂತರ ಆತನು ಸಹ ಗುಟ್ಟಾಗಿಹೋದನು.
యోహాను సువార్త అధ్యాయము 7
11 ಹಬ್ಬದಲ್ಲಿ ಯೆಹೂದ್ಯರು, “ಆತನು ಎಲ್ಲಿದ್ದಾನೆ” ಎಂದು ಕೇಳುತ್ತಾ ಆತನಿಗಾಗಿ ಹುಡುಕುತ್ತಿದ್ದರು.
12 ಅಲ್ಲಿ ಜನರ ದೊಡ್ಡ ಗುಂಪೊಂದು ನೆರೆದಿದ್ದಿತು. ಆ ಜನರಲ್ಲಿ ಅನೇಕರು ಯೇಸುವಿನ ಬಗ್ಗೆ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಿದ್ದರು. “ಆತನು ಒಳ್ಳೆಯವನು” ಎಂದು ಕೆಲವರು ಹೇಳಿದರು. ಇತರರು, “ಇಲ್ಲ, ಆತನು ಜನರನ್ನು ಮೋಸಗೊಳಿಸುತ್ತಿದ್ದಾನೆ” ಎಂದು ಟೀಕಿಸಿದರು.
13 ಆದರೆ ಯೇಸುವಿನ ಬಗ್ಗೆ ಬಹಿರಂಗವಾಗಿ ಮಾತಾಡಲು ಆ ಜನರಲ್ಲಿ ಯಾರಿಗೂ ಸಾಕಷ್ಟು ಧೈರ್ಯವಿರಲಿಲ್ಲ. ಜನರು ಯೆಹೂದ್ಯ ನಾಯಕರುಗಳಿಗೆ ಹೆದರಿಕೊಂಡಿದ್ದರು.
యోహాను సువార్త అధ్యాయము 7
14 {#1ಯೆಹೂದ್ಯರ ಹಬ್ಬದಲ್ಲಿ ಯೇಸುವಿನ ಉಪದೇಶ } ಹಬ್ಬದಲ್ಲಿ ಸುಮಾರು ಅರ್ಧಭಾಗ ಮುಗಿದುಹೋಗಿತ್ತು. ಆಗ ಯೇಸು ದೇವಾಲಯಕ್ಕೆ ಹೋಗಿ ಉಪದೇಶಿಸಲು ಆರಂಭಿಸಿದನು.
15 ಯೆಹೂದ್ಯರಿಗೆ ಆಶ್ಚರ್ಯವಾಯಿತು. “ಈ ಮನುಷ್ಯನು ಎಂದೂ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲಿಲ್ಲ. ಇವನು ಇಷ್ಟೆಲ್ಲವನ್ನೂ ಹೇಗೆ ಕಲಿತನು?” ಎಂದು ವಿಚಾರಿಸತೊಡಗಿದರು.
16 ಯೇಸು, “ನಾನು ಉಪದೇಶಿಸುವ ಸಂಗತಿಗಳು ನನ್ನ ಸ್ವಂತವಾದವುಗಳಲ್ಲ. ನನ್ನ ಉಪದೇಶವು ನನ್ನನ್ನು ಕಳುಹಿಸಿದಾತನಿಂದ (ದೇವರು) ಬರುತ್ತದೆ.
యోహాను సువార్త అధ్యాయము 7
17 ದೇವರು ಅಪೇಕ್ಷಿಸುವುದನ್ನು ಮಾಡಬಯಸುವವನಿಗೆ ನನ್ನ ಉಪದೇಶವು ದೇವರಿಂದ ಬಂದದ್ದೇ ಹೊರತು ನನ್ನ ಸ್ವಂತದ್ದಲ್ಲವೆಂದು ಗೊತ್ತಾಗುವುದು.
18 ತನ್ನ ಸ್ವಂತ ಆಲೋಚನೆಗಳನ್ನು ಉಪದೇಶಿಸುವವನು, ತನಗೇ ಘನತೆಯನ್ನು ಉಂಟುಮಾಡಿಕೊಳ್ಳಲು ಪ್ರಯತ್ನಿಸುತ್ತಾನೆ. ಆದರೆ ತನ್ನನ್ನು ಕಳುಹಿಸಿದಾತನಿಗೆ ಘನತೆಯನ್ನು ಉಂಟುಮಾಡಲು ಪ್ರಯತ್ನಿಸುವವನು ಸತ್ಯವನ್ನೇ ಹೇಳುತ್ತಾನೆ. ಆತನಲ್ಲಿ ಯಾವ ಸುಳ್ಳೂ ಇಲ್ಲ.
19 ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟನು. ಹೌದಲ್ಲವೇ? ಆದರೆ ನಿಮ್ಮಲ್ಲಿ ಒಬ್ಬರೂ ಧರ್ಮಶಾಸ್ತ್ರಕ್ಕೆ ವಿಧೇಯರಾಗುತ್ತಿಲ್ಲ. ನೀವು ನನ್ನನ್ನು ಕೊಲ್ಲಲು ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದು ಉತ್ತರಕೊಟ್ಟನು.
యోహాను సువార్త అధ్యాయము 7
20
21 ಜನರು, “ದೆವ್ವವು ನಿನ್ನೊಳಗೆ ಸೇರಿಕೊಂಡು ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ! ನಾವು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ” ಎಂದು ಉತ್ತರಕೊಟ್ಟರು. ಯೇಸು ಅವರಿಗೆ, “ನಾನು ಮಾಡಿದ ಒಂದು ಅದ್ಭುತಕಾರ್ಯವನ್ನು ಕಂಡು ನೀವೆಲ್ಲರೂ ಆಶ್ಚರ್ಯಗೊಂಡಿದ್ದೀರಿ.
22 ಮೋಶೆಯು ನಿಮಗೆ ಸುನ್ನತಿಯ ಬಗ್ಗೆ ಕಟ್ಟಳೆಯನ್ನು ಕೊಟ್ಟನು. (ಆದರೆ ನಿಜವಾಗಿಯೂ ಸುನ್ನತಿ ಎಂಬ ಸಂಸ್ಕಾರವನ್ನು ನಿಮಗೆ ಕೊಟ್ಟವನು ಮೋಶೆಯಲ್ಲ. ಅವನಿಗಿಂತ ಮೊದಲೇ ಜೀವಿಸಿದ್ದ ನಮ್ಮ ಜನರಿಂದ ಈ ಸಂಸ್ಕಾರವು ಬಂದಿದೆ.) ಆದ್ದರಿಂದ ಕೆಲವೊಮ್ಮೆ ನೀವು ಸಬ್ಬತ್‌ದಿನದಲ್ಲಿ ಮಗುವಿಗೆ ಸುನ್ನತಿಮಾಡುತ್ತೀರಿ.
యోహాను సువార్త అధ్యాయము 7
23 ಒಬ್ಬ ವ್ಯಕ್ತಿಯು ಮೋಶೆಯ ಕಟ್ಟಳೆಗೆ ವಿಧೇಯನಾಗುವುದಕ್ಕಾಗಿ ಸಬ್ಬತ್‌ದಿನದಂದು ಸುನ್ನತಿ ಮಾಡಬಹುದು ಎಂಬುದನ್ನು ಇದು ತೋರಿಸುತ್ತದೆ. ಹೀಗಿರುವಲ್ಲಿ, ಸಬ್ಬತ್‌ದಿನದಂದು ಒಬ್ಬನ ಇಡೀ ದೇಹವನ್ನು ಗುಣಪಡಿಸಿದ್ದಕ್ಕೋಸ್ಕರ ನೀವು ಏಕೆ ಕೋಪಗೊಂಡಿದ್ದೀರಿ?
24 ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.
25 {#1ಯೇಸುವೇ ಕ್ರಿಸ್ತನೋ? } ಬಳಿಕ, ಜೆರುಸಲೇಮಿನಲ್ಲಿ ವಾಸವಾಗಿದ್ದ ಕೆಲವರು, “ಅವರು ಕೊಲ್ಲಲು ಪ್ರಯತ್ನಿಸುತ್ತಿರುವುದು ಈ ವ್ಯಕ್ತಿಯನ್ನೇ
యోహాను సువార్త అధ్యాయము 7
26 ಆದರೆ ಇವನು ಪ್ರತಿಯೊಬ್ಬರಿಗೂ ಕಾಣುವ ಮತ್ತು ಕೇಳುವ ಸ್ಥಳದಲ್ಲಿ ಉಪದೇಶಿಸುತ್ತಿದ್ದಾನೆ. ಅಲ್ಲದೆ ಉಪದೇಶ ಮಾಡದಂತೆ ಯಾರೂ ಅವನನ್ನು ತಡೆಯುತ್ತಿಲ್ಲ. ಒಂದುವೇಳೆ ಈತನೇ ಕ್ರಿಸ್ತನು ಎಂಬ ನಿರ್ಧಾರಕ್ಕೆ ನಾಯಕರುಗಳು ಬಂದಿರಬಹುದು.
27 ಆದರೆ ಈ ಮನುಷ್ಯನ ಮನೆಯು ಎಲ್ಲಿದೆ ಎಂಬುದು ನಮಗೆ ಗೊತ್ತಿದೆ. ಅಲ್ಲದೆ, ಕ್ರಿಸ್ತನು ಬಂದಾಗ, ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿಯುವುದಿಲ್ಲ” ಎಂದು ಮಾತಾಡಿಕೊಂಡರು.
28 ಯೇಸುವು ದೇವಾಲಯದಲ್ಲಿ ಇನ್ನೂ ಉಪದೇಶಿಸುತ್ತಾ, “ಹೌದು, ನಿಮಗೆ ನನ್ನ ಬಗ್ಗೆ ಗೊತ್ತಿದೆ, ನಾನು ಎಲ್ಲಿಂದ ಬಂದೆನೆಂಬುದೂ ನಿಮಗೆ ತಿಳಿದಿದೆ. ಆದರೆ ನಾನು ಬಂದಿರುವುದು ನನ್ನ ಸ್ವಂತ ಅಧಿಕಾರದಿಂದಲ್ಲ. ಸತ್ಯಸ್ವರೂಪನು ನನ್ನನ್ನು ಕಳುಹಿಸಿದ್ದಾನೆ. ನಿಮಗೆ ಆತನು ಗೊತ್ತಿಲ್ಲ.
యోహాను సువార్త అధ్యాయము 7
29 ಆದರೆ ನಾನು ಆತನನ್ನು ಬಲ್ಲೆನು. ನಾನು ಆತನಿಂದಲೇ ಬಂದೆನು ಮತ್ತು ಆತನೇ ನನ್ನನ್ನು ಕಳುಹಿಸಿದನು” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.
30 ಇದನ್ನು ಕೇಳಿ ಜನರು ಆತನನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸುವಿನ ಮೇಲೆ ಕೈಹಾಕಲು ಯಾರಿಗೂ ಸಾಧ್ಯವಿರಲಿಲ್ಲ, ಏಕೆಂದರೆ ಯೇಸುವನ್ನು ಕೊಲ್ಲಲು ಇನ್ನೂ ಸರಿಯಾದ ಸಮಯ ಬಂದಿರಲಿಲ್ಲ.
31 ಆದರೆ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅವರು, “ಕ್ರಿಸ್ತನು ಬರುತ್ತಾನೆಂದು ನಾವು ಎದುರು ನೋಡುತ್ತಿದ್ದೇವೆ. ಕ್ರಿಸ್ತನು ಬಂದಾಗ, ಈ ಮನುಷ್ಯನು (ಯೇಸು) ಮಾಡಿರುವುದಕ್ಕಿಂತಲೂ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೇ? ಇಲ್ಲ! ಆದ್ದರಿಂದ ಈತನೇ ಕ್ರಿಸ್ತನಿರಬೇಕು” ಎಂದರು.
యోహాను సువార్త అధ్యాయము 7
32 {#1ಯೇಸುವನ್ನು ಬಂಧಿಸಲು ಯೆಹೂದ್ಯರ ಪ್ರಯತ್ನ } ಯೇಸುವಿನ ಬಗ್ಗೆ ಜನರು ಹೇಳುತ್ತಿದ್ದ ಈ ಸಂಗತಿಗಳನ್ನು ಫರಿಸಾಯರು ಕೇಳಿದರು. ಆದ್ದರಿಂದ ಮಹಾಯಾಜಕರು ಮತ್ತು ಫರಿಸಾಯರು ಯೇಸುವನ್ನು ಬಂಧಿಸುವುದಕ್ಕಾಗಿ ದೇವಾಲಯದ ಸಿಪಾಯಿಗಳಲ್ಲಿ ಕೆಲವರನ್ನು ಕಳುಹಿಸಿದರು.
33 ಆಗ ಯೇಸು, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿರುತ್ತೇನೆ. ಬಳಿಕ, ನನ್ನನ್ನು ಕಳುಹಿಸಿದಾತನ ಬಳಿಗೆ ನಾನು ಹಿಂತಿರುಗಿ ಹೋಗುತ್ತೇನೆ.
34 ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.
యోహాను సువార్త అధ్యాయము 7
35 ಯೆಹೂದ್ಯರು, “ಇವನನ್ನು ನಾವು ಕಂಡುಕೊಳ್ಳಲಾಗದಂತೆ ಇವನು ಎಲ್ಲಿಗೆ ಹೋಗುವನು? ನಮ್ಮವರು ವಾಸವಾಗಿರುವ ಗ್ರೀಕ್ ಜನರ ಪಟ್ಟಣಗಳಿಗೆ ಹೋಗಿ ಗ್ರೀಕರಿಗೆ ಉಪದೇಶಿಸುವನೇ?
36 ಇವನು (ಯೇಸು), ‘ನೀವು ನನ್ನನ್ನು ಹುಡುಕುವಿರಿ, ಆದರೆ ನೀವು ನನ್ನನ್ನು ಕಂಡುಕೊಳ್ಳುವುದಿಲ್ಲ’ ಎನ್ನುತ್ತಾನೆ. ಅಲ್ಲದೆ ಇವನು, ‘ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎನ್ನುತ್ತಾನೆ. ಇದರರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
యోహాను సువార్త అధ్యాయము 7
37 {#1ಪವಿತ್ರಾತ್ಮನ ಬಗ್ಗೆ ಉಪದೇಶ } ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38 ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.
39 ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.
యోహాను సువార్త అధ్యాయము 7
40 {#1ಯೇಸುವಿನ ಬಗ್ಗೆ ಜನರ ವಾದವಿವಾದ }
41 ಈ ಸಂಗತಿಗಳನ್ನು ಕೇಳಿದ ಜನರಲ್ಲಿ ಕೆಲವರು, “ಈ ಮನುಷ್ಯನು ನಿಜವಾಗಿಯೂ ಪ್ರವಾದಿ” ಎಂದರು. “ಆತನೇ ಕ್ರಿಸ್ತನು” ಎಂದು ಇನ್ನು ಕೆಲವರು ಹೇಳಿದರು. ಮತ್ತೆ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದಿಲ್ಲ.
42 ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು.
యోహాను సువార్త అధ్యాయము 7
43 ಹೀಗೆ ಯೇಸುವಿನ ಕುರಿತು ಜನರಲ್ಲಿ ಭೇದ ಉಂಟಾಯಿತು.
44 ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಬಂಧಿಸಲು ಯಾರೂ ಪ್ರಯತ್ನಿಸಲಿಲ್ಲ.
45 {#1ಯೆಹೂದ್ಯನಾಯಕರ ಅಪನಂಬಿಕೆ }
46 ದೇವಾಲಯದ ಸಿಪಾಯಿಗಳು ಹಿಂತಿರುಗಿದಾಗ, ಮಹಾಯಾಜಕರು ಮತ್ತು ಫರಿಸಾಯರು ಅವರಿಗೆ, “ನೀವು ಅವನನ್ನು ಏಕೆ ಹಿಡಿದುಕೊಂಡು ಬರಲಿಲ್ಲ?” ಎಂದು ಕೇಳಿದರು.
యోహాను సువార్త అధ్యాయము 7
47 ದೇವಾಲಯದ ಸಿಪಾಯಿಗಳು, “ಈತನಂತೆ ಆಶ್ಚರ್ಯಕರವಾದ ಸಂಗತಿಗಳನ್ನು ಬೇರೆ ಯಾರೂ ಹೇಳಿಲ್ಲ” ಎಂದು ಉತ್ತರಕೊಟ್ಟರು. ಫರಿಸಾಯರು, “ಹಾಗಾದರೆ, ಯೇಸು ನಿಮ್ಮನ್ನು ಸಹ ಮರುಳುಗೊಳಿಸುತ್ತಿದ್ದಾನೆ!
48 ನಾಯಕರಲ್ಲಿ ಯಾರಾದರೂ ಯೇಸುವಿನಲ್ಲಿ ನಂಬಿಕೆ ಇಟ್ಟಿದ್ದಾರೋ? ಇಲ್ಲ! ಫರಿಸಾಯರಾದ ನಮ್ಮಲ್ಲಿ ಯಾರಾದರೂ ಆತನನ್ನು ನಂಬಿದ್ದಾರೋ? ಇಲ್ಲ!
49 ಆದರೆ ಹೊರಗಿನ ಜನರಿಗೆ ಧರ್ಮಶಾಸ್ತ್ರದ ಬಗ್ಗೆ ಏನೂ ಗೊತ್ತಿಲ್ಲ. ಅವರು ದೇವರ ಶಾಪಕ್ಕೆ ಒಳಗಾಗಿದ್ದಾರೆ!” ಎಂದು ಉತ್ತರಕೊಟ್ಟರು.
యోహాను సువార్త అధ్యాయము 7
50 ಆದರೆ ಆ ಗುಂಪಿನಲ್ಲಿ ನಿಕೊದೇಮನು ಇದ್ದನು. ಮೊದಲೊಮ್ಮೆ ಯೇಸುವನ್ನು ನೋಡಲು ಹೋಗಿದ್ದವನು ಇವನೇ.
51 ನಿಕೊದೇಮನು, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ ತೀರ್ಪು ನೀಡಲು ನಮ್ಮ ಧರ್ಮಶಾಸ್ತ್ರವು ಸಮ್ಮತಿಸುವುದಿಲ್ಲ. ಆತನು ಮಾಡಿರುವುದನ್ನು ನಾವು ತಿಳಿದುಕೊಳ್ಳುವವರೆಗೆ ಆತನಿಗೆ ತೀರ್ಪು ಮಾಡಲಾಗದು” ಎಂದು ಹೇಳಿದನು.
52 ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.
యోహాను సువార్త అధ్యాయము 7
53 ಬಳಿಕ ಅವರೆಲ್ಲರೂ ತಮ್ಮತಮ್ಮ ಮನೆಗಳಿಗೆ ಹೊರಟುಹೋದರು.