Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 1
కీర్తనల గ్రంథము అధ్యాయము 1

1 *(ಕೀರ್ತನೆಗಳು 1-41) *ಯಾವನು ದುಷ್ಟರ ಮಾರ್ಗವನ್ನು ಅನುಸರಿಸದೆ, ಪಾಪಿಗಳಂತೆ ಜೀವಿಸದೆ, ದೇವರಿಗೆ ಅವಿಧೇಯರಾದ ಜನರೊಂದಿಗೆ ಸೇರದೆ ಇರುವನೋ ಅವನೇ ಭಾಗ್ಯವಂತನು.

2 ನೀತಿವಂತನಾದ ಅವನು ಯೆಹೋವನ ಧರ್ಮಶಾಸ್ತ್ರದಲ್ಲಿ ಆನಂದಿಸುತ್ತಾ ಅದನ್ನೇ ಹಗಲಿರುಳು ಧ್ಯಾನಿಸುವನು.

కీర్తనల గ్రంథము అధ్యాయము 1

3 ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಹುಲುಸಾಗಿ ಬೆಳೆದಿರುವ ಮರದಂತಿರುವನು. ಆ ಮರವು ತಕ್ಕಕಾಲದಲ್ಲಿ ಫಲಿಸುವುದು; ಬಾಡದ ಎಲೆಗಳಿಂದ ಯಾವಾಗಲೂ ತುಂಬಿರುವುದು; ಅಂತೆಯೇ ಅವನ ಕಾರ್ಯಗಳೆಲ್ಲಾ ಸಫಲವಾಗುವವು.

4 ದುಷ್ಟರಾದರೋ ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತಿರುವರು.

కీర్తనల గ్రంథము అధ్యాయము 1

5 ನ್ಯಾಯತೀರ್ಪಿನ ಕಾಲ ಬಂದಾಗ ದುಷ್ಟರಿಗೆ ಅಪರಾಧಿಗಳೆಂದು ತೀರ್ಪಾಗುವುದು. ಪಾಪಿಗಳಿಗೆ ನೀತಿವಂತರ ಮಧ್ಯದಲ್ಲಿ ಸ್ಥಳವಿರುವುದಿಲ್ಲ.

6 ಯೆಹೋವನು ನೀತಿವಂತರನ್ನು ಸಂರಕ್ಷಿಸುವನು; ದುಷ್ಟರನ್ನಾದರೊ ನಾಶಪಡಿಸುವನು.