Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 101
కీర్తనల గ్రంథము అధ్యాయము 101

1 *ರಚನೆಗಾರ: ದಾವೀದ. *ಆತನ ಪ್ರೀತಿಯನ್ನೂ ನೀತಿಯನ್ನೂ ಹಾಡಿಹರಸುವೆನು. ಯೆಹೋವನೇ, ನಿನಗೆ ಗಾಯನ ಮಾಡುವೆನು.

2 ನಾನು ಎಚ್ಚರಿಕೆಯಿಂದ ಪರಿಶುದ್ಧನಾಗಿ ಜೀವಿಸುವೆನು; ನನ್ನ ಮನೆಯಲ್ಲೂ ಪರಿಶುದ್ಧನಾಗಿರುವೆನು. ನೀನು ನನ್ನ ಬಳಿಗೆ ಬರುವುದು ಯಾವಾಗ?

3 ನನ್ನ ಎದುರಿನಲ್ಲಿ ಯಾವ ವಿಗ್ರಹಗಳೂ ಇಲ್ಲ. ನಿನಗೆ ದ್ರೋಹಮಾಡುವವರು ನನಗೆ ಅಸಹ್ಯ. ನಾನು ಅವರಂತೆ ಮಾಡುವುದಿಲ್ಲ!

కీర్తనల గ్రంథము అధ్యాయము 101

4 ನಾನು ನಿನಗೆ ಯಥಾರ್ಥನಾಗಿರುವೆನು; ದುಷ್ಕೃತ್ಯಗಳನ್ನು ಮಾಡುವುದಿಲ್ಲ.

5 ನೆರೆಯವನ ಕುರಿತು ಗುಟ್ಟಾಗಿ ಚಾಡಿ ಹೇಳುವವನನ್ನು ನಾನು ತಡೆಯುವೆನು. ಗರ್ವಪಡುವುದಕ್ಕಾಗಲಿ ತಮ್ಮನ್ನೇ ಉತ್ತಮರೆಂದು ಭಾವಿಸಿಕೊಳ್ಳುವುದಕ್ಕಾಗಲಿ ನಾನು ಅವರಿಗೆ ಅವಕಾಶ ಕೊಡುವುದಿಲ್ಲ.

కీర్తనల గ్రంథము అధ్యాయము 101

6 ನಂಬಿಗಸ್ತರಿಗಾಗಿ ದೇಶದಲ್ಲೆಲ್ಲಾ ಹುಡುಕಿ ನೋಡುತ್ತೇನೆ. ನನ್ನ ಸೇವೆಗೆ ಅವರನ್ನೇ ನೇಮಿಸಿಕೊಳ್ಳುವೆನು. ಪರಿಶುದ್ಧರು ಮಾತ್ರ ನನ್ನ ಸೇವಕರಾಗಿರಲು ಸಾಧ್ಯ.

7 ನನ್ನ ಮನೆಯಲ್ಲಿ ವಾಸಿಸುವ ಸುಳ್ಳುಗಾರರಿಗೆ ಅವಕಾಶ ಕೊಡುವುದಿಲ್ಲ. ನನ್ನ ಸಮೀಪದಲ್ಲಿ ಇರುವುದಕ್ಕೂ ನಾನು ಅವರಿಗೆ ಆಸ್ಪದ ಕೊಡುವುದಿಲ್ಲ.

కీర్తనల గ్రంథము అధ్యాయము 101

8 ಈ ದೇಶದಲ್ಲಿರುವ ದುಷ್ಟರನ್ನು ನಾನು ನಾಶಮಾಡುತ್ತೇನೆ. ಯೆಹೋವನ ಪಟ್ಟಣದಿಂದ ಕೆಡುಕರನ್ನು ಓಡಿಸುತ್ತೇನೆ.