Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 110
కీర్తనల గ్రంథము అధ్యాయము 110

1 *ಸ್ತುತಿಗೀತೆ. ರಚನೆಗಾರ: ದಾವೀದ. *ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ಶತ್ರುಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ಹೇಳಿದನು.

2 ಯೆಹೋವನು ನಿನ್ನ ರಾಜ್ಯವನ್ನು ಅಭಿವೃದ್ಧಿಪಡಿಸುವನು. ನಿನ್ನ ರಾಜ್ಯವು ಚೀಯೋನಿನಲ್ಲಿ ಆರಂಭಗೊಂಡು ನಿನ್ನ ಶತ್ರುಗಳ ದೇಶಗಳನ್ನು ಆವರಿಸಿಕೊಳ್ಳುವುದು.

కీర్తనల గ్రంథము అధ్యాయము 110

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.

4 ಯೆಹೋವನು ನನಗೆ, “ನೀನು ಸದಾಕಾಲ ಮೆಲ್ಕಿಜೆದೇಕನಂತಹ ಯಾಜಕನಾಗಿರುವೆ” ಎಂದು ವಾಗ್ದಾನ ಮಾಡಿದ್ದಾನೆ. ಆತನು ತನ್ನ ಮನಸ್ಸನ್ನು ಬದಲಾಯಿಸುವುದಿಲ್ಲ.

కీర్తనల గ్రంథము అధ్యాయము 110

5 ನನ್ನ ಯೆಹೋವನು ನಿನ್ನ ಬಲಗಡೆಯಲ್ಲಿದ್ದಾನೆ. ಆತನು ಕೋಪಗೊಂಡಾಗ ಇತರ ರಾಜರುಗಳನ್ನು ಸೋಲಿಸಿಬಿಡುವನು.

6 ಆತನು ಜನಾಂಗಗಳಿಗೆ ತೀರ್ಪು ಮಾಡುವನು. ರಣರಂಗವು ಅವರ ಹೆಣಗಳಿಂದ ತುಂಬಿಹೋಗುವುದು. ಬಲಿಷ್ಠ ರಾಷ್ಟ್ರಗಳ ನಾಯಕರನ್ನು ಆತನು ದಂಡಿಸುವನು.

7 ರಾಜನು ಮಾರ್ಗದಲ್ಲಿ ತೊರೆಯ ನೀರನ್ನು ಕುಡಿದು ಬಲ ಹೊಂದುವನು.