Telugu బైబిల్
కీర్తనల గ్రంథము మొత్తం 150 అధ్యాయాలు
కీర్తనల గ్రంథము
కీర్తనల గ్రంథము అధ్యాయము 129
కీర్తనల గ్రంథము అధ్యాయము 129
1 *ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ. *ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಇಸ್ರೇಲೇ, ಆ ಶತ್ರುಗಳ ಬಗ್ಗೆ ನಮಗೆ ಹೇಳು.
2 ನನ್ನ ಜೀವಮಾನವೆಲ್ಲಾ ನನಗೆ ಅನೇಕ ಶತ್ರುಗಳಿದ್ದರು. ಆದರೆ ಅವರೆಂದೂ ಗೆಲ್ಲಲಿಲ್ಲ.
3 ನನ್ನ ಬೆನ್ನಿನ ಮೇಲೆ ಹೊಡೆದು ಹೊಲವನ್ನು ಉಳುವಂತೆ ಗಾಯ ಮಾಡಿದರು.
కీర్తనల గ్రంథము అధ్యాయము 129
4 ಆದರೆ ನೀತಿಸ್ವರೂಪನಾದ ಯೆಹೋವನು ಹಗ್ಗಗಳನ್ನು ಕತ್ತರಿಸಿ ಆ ದುಷ್ಟರಿಂದ ನನ್ನನ್ನು ಬಿಡುಗಡೆ ಮಾಡಿದನು.
5 ಚೀಯೋನನ್ನು ದ್ವೇಷಿಸಿದ ಜನರು ಸೋತುಹೋದರು. ಅವರು ಹೋರಾಟವನ್ನು ನಿಲ್ಲಿಸಿ ಓಡಿಹೋದರು.
6 ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದರು. ಅದು ಬೆಳೆಯುವುದಕ್ಕಿಂತ ಮೊದಲೇ ಒಣಗಿಹೋಗುವುದು.
కీర్తనల గ్రంథము అధ్యాయము 129
7 ಅದನ್ನು ಕೊಯ್ಯುವವನ ಹಿಡಿಯೂ ತುಂಬುವುದಿಲ್ಲ ಸಿವುಡು ಕಟ್ಟುವವನ ಉಡಿಲೂ ತುಂಬುವುದಿಲ್ಲ.
8 ಅವರ ಸಮೀಪದಲ್ಲಿ ನಡೆದುಹೋಗುವವರು, “ಯೆಹೋವನು ನಿಮ್ಮನ್ನು ಆಶೀರ್ವದಿಸಲಿ” ಎಂದು ಹೇಳುವುದಿಲ್ಲ. “ಯೆಹೋವನ ಹೆಸರಿನಲ್ಲಿ ನಿಮಗೆ ಆಶೀರ್ವಾದವಾಗಲಿ” ಎಂದು ಜನರು ಅವರನ್ನು ಆಶೀರ್ವದಿಸುವುದಿಲ್ಲ.