Telugu బైబిల్
కీర్తనల గ్రంథము మొత్తం 150 అధ్యాయాలు
కీర్తనల గ్రంథము
కీర్తనల గ్రంథము అధ్యాయము 2
కీర్తనల గ్రంథము అధ్యాయము 2
1 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?
2 ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.
3 “ದೇವರಿಗೂ ಆತನು ಅಭಿಷೇಕಿಸಿದ ರಾಜನಿಗೂ ವಿರೋಧವಾಗಿ ದಂಗೆ ಎದ್ದು ಸ್ವತಂತ್ರರಾಗೋಣ” ಎಂದು ಅವರು ಮಾತಾಡಿಕೊಳ್ಳುತ್ತಿದ್ದಾರೆ.
కీర్తనల గ్రంథము అధ్యాయము 2
4 ಆದರೆ ಒಡೆಯನೂ ಪರಲೋಕದ ರಾಜನೂ ಅವರನ್ನು ನೋಡಿ ನಗುವನು; ಆತನು ಅವರನ್ನು ಪರಿಹಾಸ್ಯಮಾಡುವನು.
5 (5-6)“ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು.
కీర్తనల గ్రంథము అధ్యాయము 2
6
7 ಯೆಹೋವನ ಒಡಂಬಡಿಕೆಯ ಕುರಿತು ಹೇಳುತ್ತಿರುವೆ. ಆತನು ನನಗೆ, “ಈ ಹೊತ್ತು ನಾನು ನಿನಗೆ ತಂದೆಯಾದೆ! ನೀನೇ ನನ್ನ ಮಗನು.
8 ನೀನು ಕೇಳಿಕೊಂಡರೆ ಅನ್ಯಜನಾಂಗಗಳನ್ನು ನಿನಗೆ ಅಧೀನಪಡಿಸುವೆನು. ಭೂಮಿಯ ಮೇಲಿರುವ ಜನರೆಲ್ಲರೂ ನಿನ್ನವರಾಗುವರು!
9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು.
కీర్తనల గ్రంథము అధ్యాయము 2
10 ಆದ್ದರಿಂದ ರಾಜರುಗಳೇ, ವಿವೇಕಿಗಳಾಗಿರಿ. ಅಧಿಪತಿಗಳೇ, ಬುದ್ಧಿಮಾತುಗಳಿಗೆ ಕಿವಿಗೊಡಿರಿ.
11 ಯೆಹೋವನಿಗೆ ಭಯಭಕ್ತಿಯಿಂದ ವಿಧೇಯರಾಗಿರಿ, ನಡುಗುತ್ತಾ ಉಲ್ಲಾಸಪಡಿರಿ.
12 ಆತನ ಮಗನಿಗೆ ನಂಬಿಗಸ್ತರಾಗಿರಿ, ಇಲ್ಲವಾದರೆ ಆತನ ಕೋಪವು ಬೇಗನೆ ತೋರಿಬಂದು ನಿಮ್ಮನ್ನು ನಾಶಪಡಿಸುವುದು. ಯೆಹೋವನನ್ನು ಆಶ್ರಯಿಸಿಕೊಂಡಿರುವವರು ಭಾಗ್ಯವಂತರೇ ಸರಿ!