Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 21
కీర్తనల గ్రంథము అధ్యాయము 21

1 *ರಚನೆಗಾರ: ದಾವೀದ. *ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು.

2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ.

3 ನೀನು ರಾಜನನ್ನು ಬಹಳವಾಗಿ ಆಶೀರ್ವದಿಸಿರುವೆ. ಅವನ ತಲೆಗೆ ಬಂಗಾರದ ಕಿರೀಟವನ್ನು ತೊಡಿಸಿರುವೆ.

కీర్తనల గ్రంథము అధ్యాయము 21

4 ಅವನು ದೀರ್ಘಾಯುಷ್ಯವನ್ನು ಕೇಳಿಕೊಂಡಾಗ ನೀನು ದಯಪಾಲಿಸಿದೆ. ದೇವರೇ, ನೀನು ರಾಜನಿಗೆ ಶಾಶ್ವತವಾದ ಜೀವಿತವನ್ನು ಅನುಗ್ರಹಿಸಿದೆ.

5 ನೀನು ರಾಜನಿಗೆ ಜಯವನ್ನು ದೊರಕಿಸಿ ಅವನಿಗೆ ಗೌರವವನ್ನೂ ಹೊಗಳಿಕೆಯನ್ನೂ ಬರಮಾಡಿದೆ.

6 ನೀನು ರಾಜನಿಗೆ ಶಾಶ್ವತವಾದ ಆಶೀರ್ವಾದವನ್ನು ಕೊಟ್ಟಿರುವೆ. ಅವನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡುವನು.

కీర్తనల గ్రంథము అధ్యాయము 21

7 ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.

8 ದೇವರೇ, ನಿನ್ನ ಬಲಿಷ್ಠತನವನ್ನು ನಿನ್ನ ಶತ್ರುಗಳಿಗೆಲ್ಲ ನೀನು ತೋರಿಸುವೆ. ನೀನು ದ್ವೇಷಿಸುವವರನ್ನು ನಿನ್ನ ಶಕ್ತಿಯು ಸೋಲಿಸುವುದು.

9 ಯೆಹೋವನೇ, ನೀನು ರಾಜನೊಂದಿರುವಾಗ ಅವನು ಉರಿಯುವ ಕುಲಿಮೆಯಂತಿರುವನು. ಅವನ ಕೋಪವು ಧಗಧಗಿಸುವ ಬೆಂಕಿಯಂತೆ ಸುಡುವುದು; ಅವನು ಶತ್ರುಗಳನ್ನು ನಾಶಮಾಡುವನು.

కీర్తనల గ్రంథము అధ్యాయము 21

10 ಅವನ ಶತ್ರುಗಳ ಕುಟುಂಬಗಳು ನಾಶವಾಗುತ್ತವೆ; ಅವು ಭೂಮಿಯ ಮೇಲೆ ಇಲ್ಲವಾಗುತ್ತವೆ.

11 ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.

12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.

కీర్తనల గ్రంథము అధ్యాయము 21

13 ಯೆಹೋವನೇ, ನಿನ್ನ ಪರಾಕ್ರಮಕ್ಕಾಗಿ ನಿನ್ನನ್ನು ಕೊಂಡಾಡುವೆನು. ನಿನ್ನ ಮಹತ್ವದ ಬಗ್ಗೆ ವಾದ್ಯ ನುಡಿಸುತ್ತಾ ಹಾಡುವೆವು.