Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 3
కీర్తనల గ్రంథము అధ్యాయము 3

1 *ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಲ್ಪಟ್ಟಿತು. * *ರಚನೆಗಾರ: ದಾವೀದ. *ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ.

2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ.

కీర్తనల గ్రంథము అధ్యాయము 3

3 ಆದರೆ ಯೆಹೋವನೇ, ನೀನೇ ನನ್ನ ಗುರಾಣಿ. ನೀನೇ ನನ್ನ ಗೌರವಕ್ಕೆ ಆಧಾರ. ನನ್ನನ್ನು ಜಯವೀರನನ್ನಾಗಿ ಮಾಡು.

4 ನಾನು ಯೆಹೋವನಿಗೆ ಪ್ರಾರ್ಥಿಸಲು, ಆತನು ತನ್ನ ಪವಿತ್ರ ಪರ್ವತದಿಂದ ಉತ್ತರಿಸುವನು.

5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು.

కీర్తనల గ్రంథము అధ్యాయము 3

6 ಸಾವಿರಾರು ಶತ್ರು ಸೈನಿಕರು ನನ್ನನ್ನು ಮುತ್ತಿಕೊಂಡರೂ ನನಗೆ ಭಯವಿಲ್ಲ.

7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.

8 ಯೆಹೋವನು ತನ್ನ ಜನರನ್ನು ರಕ್ಷಿಸಬಲ್ಲನು. ಯೆಹೋವನೇ, ದಯವಿಟ್ಟು ನಿನ್ನ ಜನರಿಗೆ ಒಳ್ಳೆಯದನ್ನು ಮಾಡು.