Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 36
కీర్తనల గ్రంథము అధ్యాయము 36

1 *ರಚನೆಗಾರ: ದಾವೀದ. *ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.

2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ.

కీర్తనల గ్రంథము అధ్యాయము 36

3 ಅವನ ಮಾತುಗಳು ಕೇವಲ ಸುಳ್ಳುಗಳಾಗಿವೆ. ಅವನು ಜ್ಞಾನಿಯಾಗುವುದೂ ಇಲ್ಲ, ಒಳ್ಳೆಯದನ್ನು ಕಲಿತುಕೊಳ್ಳುವುದೂ ಇಲ್ಲ.

4 ರಾತ್ರಿಯಲ್ಲಿ, ಅವನು ಕೇಡನ್ನೇ ಆಲೋಚಿಸುವನು. ಮರುದಿನ ಮುಂಜಾನೆ ಎದ್ದಾಗ, ಒಳ್ಳೆಯದನ್ನು ಮಾಡದೆ ಕೇಡನ್ನು ಮಾಡಲು ಸಿದ್ಧನಾಗಿರುವನು.

5 ಯೆಹೋವನೇ, ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ. ನಿನ್ನ ನಂಬಿಗಸ್ತಿಕೆಯು ಮೇಘಗಳಿಗಿಂತಲೂ ಎತ್ತರವಾಗಿದೆ.

కీర్తనల గ్రంథము అధ్యాయము 36

6 ನಿನ್ನ ನೀತಿಯು ಅತ್ಯುನ್ನತವಾದ ಬೆಟ್ಟಕ್ಕಿಂತಲೂ ಎತ್ತರವಾಗಿದೆ. ನಿನ್ನ ನ್ಯಾಯವು ಮಹಾಸಾಗರಕ್ಕಿಂತಲೂ ಆಳವಾಗಿದೆ. ಯೆಹೋವನೇ, ಮನುಷ್ಯರನ್ನೂ ಪ್ರಾಣಿಗಳನ್ನೂ ಕಾಪಾಡುವಾತನು ನೀನೇ.

7 ನಿನ್ನ ಶಾಶ್ವತವಾದ ಪ್ರೀತಿಗಿಂತ ಅಮೂಲ್ಯವಾದದ್ದು ಬೇರೊಂದಿಲ್ಲ. ಜನರೂ ದೇವದೂತರೂ ನಿನ್ನನ್ನೇ ಆಶ್ರಯಿಸಿಕೊಳ್ಳುವರು.

కీర్తనల గ్రంథము అధ్యాయము 36

8 ನಿನ್ನ ಆಲಯದ ಸಮೃದ್ಧಿಯಿಂದ ಅವರು ನವಚೈತನ್ಯವನ್ನು ಪಡೆದುಕೊಳ್ಳುವರು. ನಿನ್ನ ಶ್ರೇಷ್ಠ ನದಿಯಲ್ಲಿ ಕುಡಿಯಲು ಅವರಿಗೆ ಆಸ್ಪದನೀಡು.

9 ಜೀವಬುಗ್ಗೆಯು ನಿನ್ನ ಬಳಿಯಿಂದ ಹರಿಯುವುದು! ನಾವು ಬೆಳಕನ್ನು ನೋಡುವುದು ನಿನ್ನ ಬೆಳಕಿನಿಂದಲೇ.

10 ನಿನ್ನನ್ನು ಅರಿತುಕೊಂಡವರ ಮೇಲೆ ನಿನ್ನ ಪ್ರೀತಿಯು ನೆಲೆಸಿರಲಿ. ಯಥಾರ್ಥವಂತರಿಗೆ ಒಳ್ಳೆಯದನ್ನು ಮಾಡು.

కీర్తనల గ్రంథము అధ్యాయము 36

11 ಗರ್ವಿಷ್ಠರ ಬಲೆಗೆ ನನ್ನನ್ನು ಬೀಳಿಸಬೇಡ; ದುಷ್ಟರ ಕೈಹಿಡಿತಕ್ಕೆ ನನ್ನನ್ನು ಸಿಕ್ಕಿಸಬೇಡ.

12 “ದುಷ್ಟರು ಬಿದ್ದು ಜಜ್ಜಲ್ಪಟ್ಟದ್ದು ಇಲ್ಲಿಯೇ. ಅವರು ಮತ್ತೆಂದಿಗೂ ಮೇಲೇಳುವುದಿಲ್ಲ” ಎಂದು ಅವರ ಸಮಾಧಿಯ ಮೇಲೆ ಬರೆಯಿಸು.