Telugu బైబిల్
కీర్తనల గ్రంథము మొత్తం 150 అధ్యాయాలు
కీర్తనల గ్రంథము
కీర్తనల గ్రంథము అధ్యాయము 46
కీర్తనల గ్రంథము అధ్యాయము 46
1 *ರಚನೆಗಾರರು: ಕೋರಹೀಯರು. *ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
2 ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
3 ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
కీర్తనల గ్రంథము అధ్యాయము 46
4 ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ ದೇವನಗರವನ್ನು ಸಂತೋಷಪಡಿಸುತ್ತದೆ.
5 ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ. ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
6 ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ; ಭೂಮಿಯು ಕರಗಿಹೋಗುವುದು.
కీర్తనల గ్రంథము అధ్యాయము 46
7 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
8 ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ; ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ[* ಗುರಾಣಿಗಳನ್ನು ಅಥವಾ ರಥಗಳನ್ನು. ] ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
కీర్తనల గ్రంథము అధ్యాయము 46
10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ! ನಾನು ಜನಾಂಗಗಳನ್ನು ಸೋಲಿಸುವೆನು! ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ. ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.