Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 63
కీర్తనల గ్రంథము అధ్యాయము 63

1 *ದಾವೀದನು ಯೆಹೂದದ ಅರಣ್ಯದಲ್ಲಿದ್ದಾಗ ರಚಿಸಲ್ಪಟ್ಟಿತು. ರಚನೆಗಾರ: ದಾವೀದ. *ದೇವರೇ, ನೀನೇ ನನ್ನ ದೇವರು. ನಿನಗಾಗಿ ಕುತೂಹಲದಿಂದ ಎದುರು ನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂಮಿಯಂತೆ ನನ್ನ ಆತ್ಮವು ನಿನಗಾಗಿ ಬಾಯಾರಿದೆ; ನನ್ನ ದೇಹವು ನಿನಗಾಗಿ ಬಯಸಿದೆ.

2 ಹೌದು, ನಿನ್ನನ್ನು ನಿನ್ನ ಆಲಯದಲ್ಲಿ ನೋಡಿದ್ದೇನೆ, ನಿನ್ನ ಶಕ್ತಿಯನ್ನೂ ಮಹಿಮೆಯನ್ನೂ ಕಂಡಿದ್ದೇನೆ.

కీర్తనల గ్రంథము అధ్యాయము 63

3 ನಿನ್ನ ಪ್ರೀತಿಯು ಜೀವಕ್ಕಿಂತಲೂ ಶ್ರೇಷ್ಠ. ನನ್ನ ತುಟಿಗಳು ನಿನ್ನನ್ನು ಕೊಂಡಾಡುತ್ತವೆ.

4 ಹೌದು, ನನ್ನ ಜೀವಮಾನವೆಲ್ಲಾ ನಿನ್ನನ್ನು ಕೊಂಡಾಡುವೆನು. ನಿನ್ನ ಹೆಸರಿನಲ್ಲಿ ಕೈಮುಗಿದು ಪ್ರಾರ್ಥಿಸುವೆನು.

5 ಮೃಷ್ಟಾನ್ನವನ್ನು ತಿಂದಿರುವವನಂತೆ ತೃಪ್ತನಾಗಿರುವೆನು. ನನ್ನ ಬಾಯಿ ನಿನ್ನನ್ನು ಕೊಂಡಾಡುವುದು.

కీర్తనల గ్రంథము అధ్యాయము 63

6 ಹಾಸಿಗೆಯು ಮೇಲೆ ಮಲಗಿರುವಾಗಲೂ ನಿನ್ನನ್ನು ಜ್ಞಾಪಿಸಿಕೊಳ್ಳುವೆನು. ಮಧ್ಯರಾತ್ರಿಯಲ್ಲಿಯೂ ನಿನ್ನನ್ನು ನೆನಸಿಕೊಳ್ಳುವೆನು.

7 ನಿಜವಾಗಿಯೂ ನೀನೇ ನನಗೆ ಸಹಾಯಕ. ನಿನ್ನ ರೆಕ್ಕೆಗಳ ಮರೆಯಲ್ಲಿ ಆನಂದಘೋಷ ಮಾಡುವೆನು.

8 ನನ್ನ ಆತ್ಮವು ನಿನ್ನನ್ನು ಅಂಟಿಕೊಂಡಿರುವುದು. ನಿನ್ನ ಬಲಗೈ ನನ್ನ ಕೈಹಿಡಿದು ನಡೆಸುವುದು.

కీర్తనల గ్రంథము అధ్యాయము 63

9 ನನ್ನನ್ನು ಕೊಲ್ಲಬೇಕೆಂದಿರುವವರು ಪಾತಾಳಕ್ಕೆ ಇಳಿದುಹೋಗುವರು.

10 ಅವರು ಖಡ್ಗಗಳಿಂದ ಕೊಲ್ಲಲ್ಪಡುವರು. ಅವರ ಶವಗಳು ನರಿಗಳ ಪಾಲಾಗುವವು.

11 ರಾಜನಾದರೋ ತನ್ನ ದೇವರಲ್ಲಿಯೇ ಸಂತೋಷಿಸುವನು. ಹರಕೆಹೊತ್ತು ಅವನಿಗೆ ವಿಧೇಯರಾಗಿರುವವರು ದೇವರನ್ನು ಕೊಂಡಾಡುವರು, ಯಾಕೆಂದರೆ ಆ ಸುಳ್ಳುಗರರನ್ನೆಲ್ಲಾ ಆತನು ಸೋಲಿಸಿದ್ದಾನೆ.