Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 67
కీర్తనల గ్రంథము అధ్యాయము 67

1 *ಸ್ತುತಿಗೀತೆ. *ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.

2 ದೇವರೇ, ಸರ್ವಭೂನಿವಾಸಿಗಳು ನಿನ್ನನ್ನು ತಿಳಿದುಕೊಳ್ಳಲಿ. ಜನರಿಗೆ ನಿನ್ನಿಂದಾಗುವ ರಕ್ಷಣೆಯನ್ನು ಸರ್ವಜನಾಂಗಗಳೂ ಕಾಣಲಿ.

3 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!

కీర్తనల గ్రంథము అధ్యాయము 67

4 ಎಲ್ಲಾ ಜನಾಂಗಗಳು ಸಂತೋಷದಿಂದ ಉಲ್ಲಾಸಿಸಲಿ. ಯಾಕೆಂದರೆ ಜನರಿಗೆ ನ್ಯಾಯವಾದ ತೀರ್ಪುಮಾಡುವಾತನು ನೀನೇ; ಪ್ರತಿಯೊಂದು ಜನಾಂಗವನ್ನು ಆಳುವಾತನು ನೀನೇ.

5 ದೇವರೇ, ಜನಾಂಗಗಳು ನಿನ್ನನ್ನು ಕೊಂಡಾಡಲಿ! ಸರ್ವಜನರೆಲ್ಲರೂ ನಿನ್ನನ್ನು ಸ್ತುತಿಸಲಿ!

6 ದೇವರೇ, ನಮ್ಮ ದೇವರೇ, ನಮ್ಮನ್ನು ಆಶೀರ್ವದಿಸು. ನಮ್ಮ ಭೂಮಿಯು ಮಹಾಸುಗ್ಗಿಯನ್ನು ಕೊಡಲಿ.

కీర్తనల గ్రంథము అధ్యాయము 67

7 ಆತನು ನಮ್ಮನ್ನು ಆಶೀರ್ವದಿಸಲಿ. ಸರ್ವಭೂನಿವಾಸಿಗಳೆಲ್ಲರೂ ಆತನಲ್ಲಿ ಭಯಭಕ್ತಿವುಳ್ಳವರಾಗಲಿ.