Telugu బైబిల్
కీర్తనల గ్రంథము మొత్తం 150 అధ్యాయాలు
కీర్తనల గ్రంథము
కీర్తనల గ్రంథము అధ్యాయము 7
కీర్తనల గ్రంథము అధ్యాయము 7
1 *ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ರಚಿಸಲ್ಪಟ್ಟಿದೆ. * *ರಚನೆಗಾರ: ದಾವೀದ. *ನನ್ನ ದೇವರಾದ ಯೆಹೋವನೇ, ನಿನ್ನನ್ನೇ ಆಶ್ರಯಿಸಿಕೊಂಡಿರುವೆ. ನನ್ನನ್ನು ಹಿಂದಟ್ಟುತ್ತಿರುವವರಿಂದ ನನ್ನನ್ನು ತಪ್ಪಿಸಿ ಕಾಪಾಡು!
2 ನೀನು ನನಗೆ ಸಹಾಯ ಮಾಡದಿದ್ದರೆ, ಸಿಂಹದ ಬಾಯಿಗೆ ಸಿಕ್ಕಿಕೊಂಡಿರುವ ಪ್ರಾಣಿಯಂತಾಗುವೆನು; ರಕ್ಷಣೆಯೇ ಇಲ್ಲದವನಾಗಿ ಸೀಳಿಹಾಕಲ್ಪಡುವೆನು.
కీర్తనల గ్రంథము అధ్యాయము 7
3 ನನ್ನ ದೇವರಾದ ಯೆಹೋವನೇ, ನಾನು ಯಾವುದೇ ಅಪರಾಧವನ್ನು ಮಾಡಿದ್ದರೆ,
4 ಸ್ನೇಹಿತನೊಬ್ಬನಿಗೆ ಕೆಟ್ಟದ್ದೇನಾದರೂ ಮಾಡಿದ್ದರೆ, ಶತ್ರುವಿನಿಂದ ಅನ್ಯಾಯವಾಗಿ ಏನನ್ನಾದರೂ ದೋಚಿಕೊಂಡಿದ್ದರೆ,
5 ಇವುಗಳಲ್ಲಿ ನಾನು ಯಾವುದನ್ನೇ ಮಾಡಿದ್ದರೂ, ಶತ್ರುವು ನನ್ನನ್ನು ಹಿಂದಟ್ಟಿ ಬಂದು ನನ್ನನ್ನು ಹಿಡಿದು ನೆಲಕ್ಕೆ ಕೆಡವಿ ತುಳಿಯಲಿ; ನನ್ನ ಪ್ರಾಣವನ್ನು ಮಣ್ಣುಪಾಲು ಮಾಡಲಿ.
కీర్తనల గ్రంథము అధ్యాయము 7
6 ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!
7 ಜನಾಂಗಗಳನ್ನು ನಿನ್ನ ಸುತ್ತಲೂ ಸೇರಿಸಿ ನಿನ್ನ ಉನ್ನತಸ್ಥಾನದಲ್ಲಿ ಆಸೀನನಾಗು.
8 ಜನರಿಗೆ ನ್ಯಾಯತೀರಿಸು. ಯೆಹೋವನೇ, ನನಗೆ ನ್ಯಾಯತೀರಿಸು. ನನ್ನನ್ನು ನೀತಿವಂತನೆಂದೂ ನಿರಪರಾಧಿಯೆಂದೂ ನಿರೂಪಿಸು.
కీర్తనల గ్రంథము అధ్యాయము 7
9 ಕೆಟ್ಟವರನ್ನು ದಂಡಿಸು, ಒಳ್ಳೆಯವರಿಗೆ ಸಹಾಯಮಾಡು. ದೇವರೇ ನೀನು ಒಳ್ಳೆಯವನು; ಮನುಷ್ಯರ ಅಂತರಾಳವನ್ನು ನೀನು ಪರಿಶೋಧಿಸಬಲ್ಲೆ.
10 ನನ್ನ ಗುರಾಣಿಯು ದೇವರೇ. ಆತನು ಯಥಾರ್ಥವಂತರನ್ನು ರಕ್ಷಿಸುವನು.
11 ದೇವರು ನೀತಿವಂತನಾದ ನ್ಯಾಯಾಧೀಶನಾಗಿದ್ದಾನೆ. ಆತನು ದುಷ್ಟರ ವಿಷಯದಲ್ಲಿ ಯಾವಾಗಲೂ ಕೋಪವುಳ್ಳವನು.
కీర్తనల గ్రంథము అధ్యాయము 7
12 ಆತನು ತಾನು ಮಾಡಿದ ತೀರ್ಮಾನವನ್ನು ಬದಲಾಯಿಸುವುದಿಲ್ಲ.
13 ದುಷ್ಟರನ್ನು ಶಿಕ್ಷಿಸಲು ಆತನು ಸಿದ್ಧನಾಗಿದ್ದಾನೆ.[* ಆತನು … ಸಿದ್ಧನಾಗಿದ್ದಾನೆ ಅಕ್ಷರಶಃ, “ಆತನು ಹಿಂತಿರುಗಿಕೊಳ್ಳುವುದಿಲ್ಲ. ಆತನು ತನ್ನ ಖಡ್ಗವನ್ನು ಹರಿತಗೊಳಿಸುವನು. ಆತನು ತನ್ನ ಬಿಲ್ಲನ್ನು ಹೂಡಿ ಗುರಿಯಿಟ್ಟಿದ್ದಾನೆ. ಆತನು ಮರಣಕರವಾದ ಆಯುಧವನ್ನು ಸಿದ್ಧಗೊಳಿಸಿದ್ದಾನೆ. ಆತನು ತನ್ನ ಅಗ್ನಿಬಾಣಗಳನ್ನು ಮಾಡಿದ್ದಾನೆ.” ]
కీర్తనల గ్రంథము అధ్యాయము 7
14 ಕೆಲವರು ದುಷ್ಕೃತ್ಯಗಳನ್ನು ಮಾಡುವುದಕ್ಕಾಗಿಯೇ ಆಲೋಚಿಸುತ್ತಿರುವರು. ಅವರು ಸಂಚುಗಳನ್ನು ಮಾಡುತ್ತಾ ಸುಳ್ಳಾಡುವರು.
15 ಅವರು ಇತರರನ್ನು ಬಲೆಗೆ ಸಿಕ್ಕಿಸಿ ಕೇಡುಮಾಡಬೇಕೆಂದಿದ್ದಾರೆ; ಆದರೆ ತಾವೇ ಆ ಬಲೆಗಳಿಗೆ ಸಿಕ್ಕಿಕೊಳ್ಳುವರು.
16 ಅವರು ತಮ್ಮ ಕುಯುಕ್ತಿಗೆ ತಕ್ಕ ದಂಡನೆಯನ್ನು ಹೊಂದುವರು. ಅವರು ಇತರರ ವಿಷಯದಲ್ಲಿ ಕ್ರೂರವಾಗಿ ನಡೆದುಕೊಂಡರು. ಅವರು ಮಾಡಿದ ಹಿಂಸೆಯು ಅವರಿಗೇ ಸಂಭವಿಸುವುದು.
కీర్తనల గ్రంథము అధ్యాయము 7
17 ಯೆಹೋವನ ನ್ಯಾಯವಾದ ತೀರ್ಪಿಗಾಗಿ ಆತನನ್ನು ಕೊಂಡಾಡುವೆನು. ಮಹೋನ್ನತನಾದ ಯೆಹೋವನ ಹೆಸರನ್ನು ಸ್ತುತಿಸುವೆನು.