Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 84
కీర్తనల గ్రంథము అధ్యాయము 84

1 *ರಚನೆಗಾರರು: ಕೋರಹೀಯರು. *ಸೇನಾಧೀಶ್ವರನಾದ ಯೆಹೋವನೇ, ನಿನ್ನ ಆಲಯವು ಎಷ್ಟೋ ರಮ್ಯವಾಗಿದೆ.

2 ಯೆಹೋವನೇ, ನಿನ್ನ ಆಲಯದೊಳಗೆ ಪ್ರವೇಶಿಸಲು ಕಾತುರಗೊಂಡಿರುವೆ. ನನ್ನ ಅಂಗಾಂಗಗಳೆಲ್ಲಾ ಚೈತನ್ಯಸ್ವರೂಪನಾದ ದೇವರೊಂದಿಗೆ ಇರಲು ಬಯಸುತ್ತಿವೆ.

3 ಸೇನಾಧೀಶ್ವರನಾದ ಯೆಹೋವನೇ, ನನ್ನ ರಾಜನೇ, ನನ್ನ ದೇವರೇ, ಗುಬ್ಬಚ್ಚಿಗಳಿಗೂ ಪಾರಿವಾಳಗಳಿಗೂ ನಿನ್ನ ಆಲಯದಲ್ಲಿ ಗೂಡುಗಳಿವೆ. ನಿನ್ನ ಯಜ್ಞವೇದಿಕೆಯ ಸಮೀಪದಲ್ಲಿಯೇ ಗೂಡು ಕಟ್ಟಿಕೊಂಡು ಮರಿ ಮಾಡುತ್ತವೆ.

కీర్తనల గ్రంథము అధ్యాయము 84

4 ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು.

5 ನಿನ್ನ ಶಕ್ತಿಯನ್ನೇ ಆಶ್ರಯಿಸಿಕೊಂಡು ಚೀಯೋನ್ ಪರ್ವತಕ್ಕೆ ಯಾತ್ರಿಕರಾಗಿ ಬರಲು ಬಯಸುವವರು ಎಷ್ಟೋ ಭಾಗ್ಯವಂತರು.

6 ಒರತೆಯನ್ನಾಗಿ ಮಾಡಿರುವ ಬಾಕಾ ಕಣಿವೆಯ ಮೂಲಕ ಅವರು ಪ್ರಯಾಣಮಾಡುವರು. ಮುಂಗಾರು ಮಳೆಯು ಅದನ್ನು ನೀರಿನ ತೊರೆಗಳಿಂದ ಸಮೃದ್ಧಿಗೊಳಿಸುವುದು.

కీర్తనల గ్రంథము అధ్యాయము 84

7 ಜನರು ದೇವರನ್ನು ಸಂದರ್ಶಿಸಲು ಊರಿಂದ ಊರಿಗೆ ಪ್ರಯಾಣ ಮಾಡುತ್ತಾ ಚೀಯೋನಿಗೆ ಬರುವರು.

8 ಸೇನಾಧೀಶ್ವರ ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡು. ಯಾಕೋಬನ ದೇವರೇ, ನನ್ನ ಮೊರೆಯನ್ನು ಕೇಳು.

9 ದೇವರೇ, ನಮಗೆ ಗುರಾಣಿಯಾಗಿರುವವನನ್ನು ನೋಡು. ನೀನು ಅಭಿಷೇಕಿಸಿದವನಿಗೆ ಕರುಣೆತೋರು.

కీర్తనల గ్రంథము అధ్యాయము 84

10 ಬೇರೊಂದು ಸ್ಥಳದಲ್ಲಿ ಸಾವಿರ ದಿನಗಳಿರುವುದಕ್ಕಿಂತಲೂ ನಿನ್ನ ಆಲಯದಲ್ಲಿ ಒಂದು ದಿನವಿರುವುದೇ ಉತ್ತಮ. ದುಷ್ಟರ ಮನೆಯಲ್ಲಿ ವಾಸಿಸುವುದಕ್ಕಿಂತಲೂ ನನ್ನ ದೇವರ ಆಲಯದಲ್ಲಿ ದ್ವಾರಪಾಲಕನಾಗಿರುವುದೇ ಉತ್ತಮ.[* ದುಷ್ಟರ … ಉತ್ತಮ ಅಥವಾ “ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲ ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುವುದೇ ಉತ್ತಮ.” ]

కీర్తనల గ్రంథము అధ్యాయము 84

11 ಯೆಹೋವ ದೇವರು ನಮ್ಮ ಸಂರಕ್ಷಕನೂ ಮಹಿಮಾ ಪೂರ್ಣನಾದ ರಾಜನೂ ಆಗಿದ್ದಾನೆ.[† ಸಂರಕ್ಷಕನೂ … ರಾಜನೂ ಆಗಿದ್ದಾನೆ ಅಕ್ಷರಶಃ, “ಸೂರ್ಯ ಮತ್ತು ಗುರಾಣಿ.” ] ಯೆಹೋವನು ನಮಗೆ ದಯೆಯನ್ನೂ ಘನತೆಯನ್ನೂ ಅನುಗ್ರಹಿಸುವನು. ಆತನು ಎಲ್ಲಾ ಒಳ್ಳೆಯವುಗಳನ್ನು ತನ್ನ ಭಕ್ತರಿಗೆ ಕೊಡುವನು.

12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ!