Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 91
కీర్తనల గ్రంథము అధ్యాయము 91

1 ಮಹೋನ್ನತನ ಮೊರೆಹೊಕ್ಕಿರುವವನು ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

2 ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ ನನ್ನ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.

3 ನಿನ್ನನ್ನು ಬೇಟೆಗಾರನ ಬಲೆಯಿಂದಲೂ ಮರಣಕರವಾದ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.

కీర్తనల గ్రంథము అధ్యాయము 91

4 ಆತನು ನಿನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸಿಕೊಳ್ಳುವನು. ಆತನ ರೆಕ್ಕೆಗಳನ್ನು ನೀನು ಆಶ್ರಯಿಸಿಕೊಳ್ಳುವೆ. ಆತನ ನಂಬಿಗಸ್ತಿಕೆಯು ನಿನಗೆ ಗುರಾಣಿಯೂ ಕೋಟೆಯೂ ಆಗಿದೆ.

5 ಇರುಳಲ್ಲಿ ನೀನು ಯಾವುದಕ್ಕೂ ಭಯಪಡಬೇಕಿಲ್ಲ; ಹಗಲಲ್ಲಿ ಶತ್ರುಗಳ ಬಾಣಗಳಿಗೂ ನೀನು ಹೆದರಬೇಕಿಲ್ಲ.

6 ಕತ್ತಲೆಯಲ್ಲಿ ಬರುವ ರೋಗಗಳಿಗಾಗಲಿ ಮಧ್ಯಾಹ್ನದಲ್ಲಿ ಬರುವ ಭಯಂಕರ ಕಾಯಿಲೆಗಳಿಗಾಗಲಿ ನೀನು ಹೆದರಬೇಕಿಲ್ಲ.

కీర్తనల గ్రంథము అధ్యాయము 91

7 ನೀನು ಸಾವಿರ ವೈರಿಗಳನ್ನು ಸೋಲಿಸುವೆ. ನಿನ್ನ ಬಲಗೈ ಹತ್ತುಸಾವಿರ ಶತ್ರು ಸೈನಿಕರನ್ನು ಸೋಲಿಸುವುದು. ನಿನ್ನ ಶತ್ರುಗಳಿಗೆ ನಿನ್ನನ್ನು ಮುಟ್ಟಲೂ ಸಾಧ್ಯವಾಗದು.

8 ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ದಂಡನೆಯಾಯಿತೆಂದು ತಿಳಿದುಕೊಳ್ಳುವೆ.

9 ಯಾಕೆಂದರೆ ನಿನ್ನ ಭರವಸವು ಯೆಹೋವನಲ್ಲಿಯೇ. ನಿನ್ನ ಆಶ್ರಯಸ್ಥಾನವು ಮಹೋನ್ನತನಾದ ದೇವರೇ.

కీర్తనల గ్రంథము అధ్యాయము 91

10 ಯಾವ ಕೇಡೂ ನಿನಗೆ ಸಂಭವಿಸದು. ನಿನ್ನ ಮನೆಯಲ್ಲಿ ಯಾವ ರೋಗಗಳೂ ಇರದು.

11 ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.

12 ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರುಗಳು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.

కీర్తనల గ్రంథము అధ్యాయము 91

13 ಸಿಂಹಗಳ ಮೇಲೆಯೂ ಮತ್ತು ವಿಷಸರ್ಪಗಳ ಮೇಲೆಯೂ ನಡೆಯಲು ನೀನು ಶಕ್ತನಾಗಿರುವೆ.

14 ಯೆಹೋವನು ಹೇಳುವುದೇನೆಂದರೆ: “ನನ್ನಲ್ಲಿ ಭರವಸವಿಡುವವನನ್ನು ರಕ್ಷಿಸುವೆನು; ನನ್ನ ಹೆಸರನ್ನು ಆರಾಧಿಸುವ ಭಕ್ತರನ್ನು ಸಂರಕ್ಷಿಸುವೆನು.

15 ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.

కీర్తనల గ్రంథము అధ్యాయము 91

16 ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”