Telugu బైబిల్
కీర్తనల గ్రంథము మొత్తం 150 అధ్యాయాలు
కీర్తనల గ్రంథము
కీర్తనల గ్రంథము అధ్యాయము 95
కీర్తనల గ్రంథము అధ్యాయము 95
1 ಬನ್ನಿರಿ, ನಾವು ಯೆಹೋವನನ್ನು ಸ್ತುತಿಸೋಣ! ನಮಗೆ ಬಂಡೆಯಾಗಿರುವಾತನನ್ನು ಕೊಂಡಾಡೋಣ.
2 ಆತನಿಗೆ ಕೃತಜ್ಞತಾಸುತ್ತಿ ಮಾಡೋಣ. ಸ್ತುತಿಗೀತೆಗಳೊಡನೆ ಆನಂದಘೋಷ ಮಾಡೋಣ.
3 ಯಾಕೆಂದರೆ ಯೆಹೋವನು ಮಹಾದೇವರಾಗಿದ್ದಾನೆ! ಆತನು ದೇವರುಗಳಿಗೆಲ್ಲಾ ಮಹಾರಾಜನಾಗಿದ್ದಾನೆ.
కీర్తనల గ్రంథము అధ్యాయము 95
4 ಭೂಮಿಯ ಆಳವೂ ಉನ್ನತೋನ್ನತವಾದ ಶಿಖರಗಳೂ ಆತನವೇ.
5 ಸಮುದ್ರವು ಆತನದೇ, ಅದನ್ನು ಸೃಷ್ಟಿಸಿದಾತನು ಆತನೇ. ಭೂಮಿಯೂ ಆತನ ಕೈಕೆಲಸವೇ.
6 ಬನ್ನಿರಿ, ಆತನಿಗೆ ಅಡ್ಡಬಿದ್ದು ಆರಾಧಿಸೋಣ. ನಮ್ಮನ್ನು ಸೃಷ್ಟಿಸಿದ ಯೆಹೋವನನ್ನು ಕೊಂಡಾಡೋಣ.
7 ನಮ್ಮ ದೇವರು ಆತನೇ, ನಾವು ಆತನವರೇ. ಆತನ ಸ್ವರಕ್ಕೆ ಕಿವಿಗೊಡುವುದಾದರೆ ಇಂದೇ ನಾವು ಆತನ ಮಂದೆಯಾಗುತ್ತೇವೆ.
కీర్తనల గ్రంథము అధ్యాయము 95
8 ದೇವರು ಹೀಗೆನ್ನುತ್ತಾನೆ: “ನೀವು ಮೆರೀಬಾದಲ್ಲಿಯೂ ಮಸ್ಸಾ ಮರುಭೂಮಿಯಲ್ಲಿಯೂ ಮಾಡಿದಂತೆ ಮೊಂಡತನ ಮಾಡಬೇಡಿ.
9 ನಿಮ್ಮ ಪೂರ್ವಿಕರು ನನ್ನನ್ನು ಪರೀಕ್ಷಿಸಿದರು. ನನ್ನ ಮಹತ್ಕಾರ್ಯಗಳನ್ನು ನೋಡಿದ್ದರೂ ನನ್ನನ್ನು ಪರೀಕ್ಷಿಸಿದರು.
10 ನಲವತ್ತು ವರ್ಷಗಳ ಕಾಲ ನಾನು ಅವರೊಂದಿಗೆ ತಾಳ್ಮೆಯಿಂದಿದ್ದೆನು, ಅವರು ನಂಬಿಗಸ್ತರಲ್ಲವೆಂದು ನನಗೆ ತಿಳಿದಿತ್ತು. ಅವರು ನನ್ನ ಉಪದೇಶಗಳನ್ನು ಅನುಸರಿಸಲಿಲ್ಲ.
కీర్తనల గ్రంథము అధ్యాయము 95
11 ಆದ್ದರಿಂದ ನಾನು ಕೋಪಗೊಂಡು ನನ್ನ ವಿಶ್ರಾಂತಿಯ ನಾಡನ್ನು ಅವರು ಪ್ರವೇಶಿಸಕೂಡದೆಂದು ನಾನು ಪ್ರಮಾಣ ಮಾಡಿದೆನು.”