Telugu బైబిల్

కీర్తనల గ్రంథము మొత్తం 150 అధ్యాయాలు

కీర్తనల గ్రంథము

కీర్తనల గ్రంథము అధ్యాయము 98
కీర్తనల గ్రంథము అధ్యాయము 98

1 *ಸ್ತುತಿಗೀತೆ. *ಯೆಹೋವನಿಗೆ ಹೊಸಹಾಡನ್ನು ಹಾಡಿರಿ. ಆತನು ಅಮೋಘವಾದ ಕಾರ್ಯಗಳನ್ನು ಮಾಡಿದ್ದಾನೆ! ಆತನ ಬಲಗೈಯೂ ಪರಿಶುದ್ಧ ಬಾಹುವೂ ಆತನಿಗೆ ಜಯವನ್ನು ಉಂಟುಮಾಡಿವೆ.

2 ಯೆಹೋವನು ತನ್ನ ರಕ್ಷಣಾಶಕ್ತಿಯನ್ನು ಜನಾಂಗಗಳಿಗೆ ತೋರಿದನು. ಆತನು ತನ್ನ ನೀತಿಯನ್ನು ಅವರಿಗೆ ಪ್ರಕಟಿಸಿದ್ದಾನೆ.

కీర్తనల గ్రంథము అధ్యాయము 98

3 ಇಸ್ರೇಲರ ಕಡೆಗಿದ್ದ ಆತನ ಪ್ರೀತಿಸತ್ಯತೆಗಳನ್ನು ಆತನ ಜನರು ಜ್ಞಾಪಿಸಿಕೊಂಡಿದ್ದಾರೆ. ದೂರದೇಶಗಳ ಜನರು ನಮ್ಮ ದೇವರ ರಕ್ಷಣಾಶಕ್ತಿಯನ್ನು ಕಂಡಿದ್ದಾರೆ.

4 ಭೂನಿವಾಸಿಗಳೆಲ್ಲರೇ, ಯೆಹೋವನಿಗೆ ಆನಂದ ಘೋಷಮಾಡಿರಿ. ಆತನಿಗೆ ಸ್ತುತಿಗೀತೆಗಳನ್ನು ಹಾಡಿರಿ!

5 ಹಾರ್ಪ್‌ವಾದ್ಯಗಳೊಡನೆ, ಯೆಹೋವನನ್ನು ಕೊಂಡಾಡಿರಿ. ಹಾರ್ಪ್‌ವಾದ್ಯಗಳನ್ನು ನುಡಿಸುತ್ತಾ ಆತನನ್ನು ಸುತ್ತಿಸಿರಿ.

కీర్తనల గ్రంథము అధ్యాయము 98

6 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದಿರಿ. ನಮ್ಮ ರಾಜನಾದ ಯೆಹೋವನಿಗೆ ಆನಂದಘೋಷ ಮಾಡಿರಿ!

7 ಸಮುದ್ರವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಗಟ್ಟಿಯಾಗಿ ಹಾಡಲಿ.

8 ನದಿಗಳೇ, ಚಪ್ಪಾಳೆ ತಟ್ಟಿರಿ! ಬೆಟ್ಟಗಳೇ, ಒಟ್ಟಾಗಿ ಹಾಡಿರಿ!

కీర్తనల గ్రంథము అధ్యాయము 98

9 ಯೆಹೋವನ ಎದುರಿನಲ್ಲಿ ಹಾಡಿರಿ, ಯಾಕೆಂದರೆ ಆತನು ಭೂಲೋಕವನ್ನು ಆಳಲು[* ಆಳಲು ಅಥವಾ ನ್ಯಾಯತೀರಿಸಲು ] ಬರುತ್ತಿದ್ದಾನೆ. ಆತನು ಪ್ರಪಂಚವನ್ನು ನ್ಯಾಯವಾಗಿ ಆಳುತ್ತಾನೆ. ಆತನು ಜನರನ್ನು ನೀತಿಯಿಂದ ಆಳುತ್ತಾನೆ.