Telugu బైబిల్
రోమీయులకు మొత్తం 16 అధ్యాయాలు
రోమీయులకు
రోమీయులకు అధ్యాయము 12
రోమీయులకు అధ్యాయము 12
1 {#1ನಿಮ್ಮ ಜೀವಿತಗಳನ್ನು ದೇವರಿಗೆ ಕೊಡಿರಿ } ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.
2 ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.
రోమీయులకు అధ్యాయము 12
3 ದೇವರು ನನಗೆ ವಿಶೇಷವಾದ ಒಂದು ವರವನ್ನು ಕೊಟ್ಟಿದ್ದಾನೆ. ಆದಕಾರಣವೇ, ನಿಮ್ಮಲ್ಲಿರುವ ಪ್ರತಿಯೊಬ್ಬರಿಗೂ ಈ ಸಂಗತಿಗಳನ್ನು ತಿಳಿಸುತ್ತಿದ್ದೇನೆ. ನೀವು ನಿಮ್ಮ ನಿಜವಾದ ಯೋಗ್ಯತೆಗಿಂತಲೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಬೇಡಿ. ನೀವು ನಿಮ್ಮ ವಿಷಯದಲ್ಲಿ ಏನು ಭಾವಿಸಿಕೊಂಡರೂ ಆ ಭಾವನೆಯು ನಿಮ್ಮ ನಿಜವಾದ ಯೋಗ್ಯತೆಗೆ ಸರಿಸಮಾನವಾಗಿರಬೇಕು. ದೇವರು ನಿಮಗೆ ಎಂಥ ನಂಬಿಕೆಯನ್ನು ಕೊಟ್ಟಿದ್ದಾನೋ ಆ ನಂಬಿಕೆಗೆ ತಕ್ಕಂತೆ ನಿಮ್ಮ ವಿಷಯದಲ್ಲಿ ಭಾವಿಸಿಕೊಳ್ಳಿರಿ.
రోమీయులకు అధ్యాయము 12
4 ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ.
5 ಹೀಗೆ ನಮ್ಮಲ್ಲಿ ಅನೇಕರಿದ್ದರೂ ಕ್ರಿಸ್ತನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ನಾವು ಆ ದೇಹದ ಅಂಗಗಳಾಗಿದ್ದೇವೆ. ಆ ದೇಹದ ಪ್ರತಿಯೊಂದು ಅಂಗವು ಇತರ ಅಂಗಗಳಿಗೂ ಸೇರಿಕೊಂಡಿದೆ.
6 ನಾವೆಲ್ಲರೂ ಬೇರೆಬೇರೆ ವರಗಳನ್ನು ಹೊಂದಿದ್ದೇವೆ. ದೇವರು ನಮಗೆ ಕೊಟ್ಟಿರುವ ಕೃಪೆಯಿಂದಲೇ ಪ್ರತಿಯೊಂದು ವರವು ಬಂದಿದೆ. ಪ್ರವಾದಿಸುವ ವರವನ್ನು ಹೊಂದಿರುವವನು ತನಗಿರುವ ನಂಬಿಕೆಯೊಂದಿಗೆ ಆ ವರವನ್ನು ಉಪಯೋಗಿಸಬೇಕು.
రోమీయులకు అధ్యాయము 12
7 ಸೇವೆಮಾಡುವ ವರವನ್ನು ಹೊಂದಿರುವವನು ಸೇವೆಮಾಡಬೇಕು.
8 ಉಪದೇಶಮಾಡುವ ವರವನ್ನು ಹೊಂದಿರುವವನು ಉಪದೇಶ ಮಾಡಬೇಕು. ಸಂತೈಸುವ ವರವನ್ನು ಹೊಂದಿರುವವನು ಬೇರೆಯವರನ್ನು ಸಂತೈಸಬೇಕು. ದಾನಮಾಡುವ ವರವನ್ನು ಹೊಂದಿರುವವನು ಉದಾರವಾಗಿ ಕೊಡಬೇಕು. ನಾಯಕತ್ವದ ವರವನ್ನು ಹೊಂದಿರುವವನು ನಾಯಕತ್ವವನ್ನು ವಹಿಸಿಕೊಂಡಿರುವಾಗ ಕಷ್ಟಪಟ್ಟು ದುಡಿಯಬೇಕು. ಕನಿಕರವನ್ನು ತೋರುವ ವರವನ್ನು ಹೊಂದಿರುವವನು ಆನಂದದಿಂದ ಆ ಕಾರ್ಯವನ್ನು ಮಾಡಬೇಕು.
రోమీయులకు అధ్యాయము 12
9 ನಿಮ್ಮ ಪ್ರೀತಿಯು ಯಥಾರ್ಥವಾಗಿರಲಿ. ದುಷ್ಕೃತ್ಯಗಳನ್ನು ದ್ವೇಷಿಸಿರಿ. ಒಳ್ಳೆಯ ಕಾರ್ಯಗಳನ್ನು ಮಾತ್ರ ಮಾಡಿರಿ.
10 ಸಹೋದರ ಸಹೋದರಿಯರೆಂಬ ಅನ್ಯೋನ್ಯಭಾವದಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ. ನೀವು ನಿಮಗೋಸ್ಕರ ಬಯಸುವ ಮರ್ಯಾದೆಗಿಂತಲೂ ಹೆಚ್ಚು ಮರ್ಯಾದೆಯನ್ನು ನಿಮ್ಮ ಸಹೋದರ ಸಹೋದರಿಯರಿಗೆ ಕೊಡಿರಿ.
11 ನೀವು ಪ್ರಭುವಿಗೋಸ್ಕರ ಸೇವೆಮಾಡುವುದು ಅಗತ್ಯವಿರುವಾಗ ಸೋಮಾರಿಗಳಾಗಿರಬೇಡಿರಿ. ಆತ್ಮಿಕವಾದ ಉತ್ಸಾಹದಿಂದ ಆತನ ಸೇವೆಮಾಡಿರಿ.
రోమీయులకు అధ్యాయము 12
12 ನಿಮಗೆ ನಿರೀಕ್ಷೆಯಿರುವುದರಿಂದ ಸಂತೋಷವಾಗಿರಿ. ನಿಮಗೆ ಸಂಕಟಗಳಿರುವಾಗ ತಾಳ್ಮೆಯಿಂದಿರಿ. ಎಲ್ಲಾ ಸಮಯದಲ್ಲಿ ಪ್ರಾರ್ಥಿಸಿರಿ.
13 ಕೊರತೆಯಲ್ಲಿರುವ ದೇವಜನರಿಗೆ ಸಹಾಯ ಮಾಡಿರಿ. ಅತಿಥಿಸತ್ಕಾರದ ಅಗತ್ಯವಿರುವವರನ್ನು ಗುರುತಿಸಿ, ನಿಮ್ಮ ಮನೆಗಳಿಗೆ ಆಹ್ವಾನಿಸಿರಿ.
14 ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.
15 ಸಂತೋಷಪಡುವವರ ಸಂಗಡ ಸಂತೋಷಪಡಿರಿ. ದುಃಖಪಡುವವರೊಂದಿಗೆ ದುಃಖಪಡಿರಿ.
రోమీయులకు అధ్యాయము 12
16 ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
17 ಯಾವನಾದರು ನಿಮಗೆ ಕೇಡುಮಾಡಿದರೆ, ಅದಕ್ಕೆ ಪ್ರತಿಯಾಗಿ ಅವನಿಗೆ ಕೇಡುಮಾಡಬೇಡಿ. ಎಲ್ಲಾ ಜನರು ಒಳ್ಳೆಯದೆಂದು ಯೋಚಿಸುವ ಕಾರ್ಯಗಳನ್ನು ಮಾಡಲು ಪ್ರಯತ್ನಿಸಿರಿ.
18 ಎಲ್ಲಾ ಜನರೊಂದಿಗೆ ಶಾಂತಿಯಿಂದ ಜೀವಿಸಲು ನಿಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಪ್ರಯತ್ನಿಸಿರಿ.
రోమీయులకు అధ్యాయము 12
19 ನನ್ನ ಸ್ನೇಹಿತರೇ, ನಿಮಗೆ ಕೇಡುಮಾಡುವ ಜನರನ್ನು ದಂಡಿಸಲು ಪ್ರಯತ್ನಿಸಬೇಡಿ. ದೇವರು ತನ್ನ ಕೋಪದಿಂದ ಅವರನ್ನು ದಂಡಿಸುವವರೆಗೆ ಕಾದುಕೊಂಡಿರಿ. “ನಾನೇ ದಂಡಿಸುವವನು; ನಾನೇ ಜನರಿಗೆ ಮುಯ್ಯಿತೀರಿಸುವವನು ಎಂದು ಪ್ರಭುವು ಹೇಳುತ್ತಾನೆ”[✡ ಉಲ್ಲೇಖನ: ಧರ್ಮೋಪದೇಶ. 32: 35. ] ಎಂಬುದಾಗಿ ಬರೆಯಲ್ಪಟ್ಟಿದೆ.
20 ನೀವು ಮಾಡಬೇಕಾದದ್ದೇನೆಂದರೆ, “ನಿಮ್ಮ ವೈರಿಯು ಹಸಿವೆಗೊಂಡಿದ್ದರೆ, ಅವನಿಗೆ ಊಟ ಕೊಡಿರಿ. ನಿಮ್ಮ ವೈರಿಯು ಬಾಯಾರಿದ್ದರೆ, ಅವನಿಗೆ ಕುಡಿಯಲು ನೀರು ಕೊಡಿರಿ. ನೀವು ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.”--ಜ್ಞಾನೋಕ್ತಿಗಳು 25:21-22--
రోమీయులకు అధ్యాయము 12
21 ಕೆಟ್ಟತನವು ನಿಮ್ಮನ್ನು ಸೋಲಿಸುವುದಕ್ಕೆ ಅವಕಾಶಕೊಡದೆ ಒಳ್ಳೆಯದನ್ನು ಮಾಡುವುದರ ಮೂಲಕವಾಗಿ ಕೆಟ್ಟತನವನ್ನು ಸೋಲಿಸಿರಿ.