Telugu బైబిల్

పరమగీతము మొత్తం 8 అధ్యాయాలు

పరమగీతము

పరమగీతము అధ్యాయము 3
పరమగీతము అధ్యాయము 3

1 {#1ಪ್ರಿಯತಮೆ } ರಾತ್ರಿಯಲ್ಲಿಯೂ ನನ್ನ ಪ್ರಾಣಪ್ರಿಯನಿಗಾಗಿ ಹಾಸಿಗೆಯ ಮೇಲೆ ಹುಡುಕಿದೆನು. ಎಷ್ಟು ಹುಡುಕಿದರೂ ಅವನು ಸಿಕ್ಕಲಿಲ್ಲ.

2 ಈಗ ನಾನು ಎದ್ದು ನಗರದಲ್ಲೆಲ್ಲಾ ಸುತ್ತಾಡುವೆನು. ನನ್ನ ಪ್ರಿಯನಿಗಾಗಿ ಬೀದಿಗಳಲ್ಲಿಯೂ ಚೌಕಗಳಲ್ಲಿಯೂ ಹುಡುಕುವೆನು. ನಾನು ಅವನಿಗಾಗಿ ಹುಡುಕಿದೆ, ಆದರೆ ಅವನು ಸಿಕ್ಕಲಿಲ್ಲ.

పరమగీతము అధ్యాయము 3

3 ನಗರದಲ್ಲಿ ಗಸ್ತು ತಿರುಗುವ ಕಾವಲುಗಾರರನ್ನು ಕಂಡು, “ನನ್ನ ಪ್ರಿಯನನ್ನು ನೋಡಿದಿರಾ?” ಎಂದು ಕೇಳಿದೆನು.

4 ಅಲ್ಲಿಂದ ಸ್ವಲ್ಪದೂರ ಹೋದಾಗ, ನನ್ನ ಪ್ರಿಯನನ್ನು ಕಂಡು ಅಪ್ಪಿಕೊಂಡೆ. ನನ್ನ ತಾಯಿಯ ಮನೆಗೆ, ಅಂದರೆ ನನ್ನನ್ನು ಹೆತ್ತವಳ ಕೋಣೆಗೆ ಸೇರುವತನಕ ಅವನನ್ನು ಬಿಡದೆ ಹಿಡಿದುಕೊಂಡೇ ಹೋದೆನು.

పరమగీతము అధ్యాయము 3

5 {#1ಪ್ರಿಯತಮೆ ಸ್ತ್ರೀಯರಿಗೆ } ಜೆರುಸಲೇಮಿನ ಸ್ತ್ರೀಯರೇ, ತಕ್ಕಕಾಲಕ್ಕೆ ಮೊದಲೇ ಪ್ರೀತಿಯನ್ನು ಹುಟ್ಟಿಸಿ, ಬೆಳೆಯಿಸುವುದಿಲ್ಲವೆಂದು ಜಿಂಕೆಗಳ ಮೇಲೆಯೂ ಕಾಡುಹುಲ್ಲೆಗಳ ಮೇಲೆಯೂ ನನಗೆ ಪ್ರಮಾಣಮಾಡಿರಿ.

6 {#1ಜೆರುಸಲೇಮಿನ ಸ್ತ್ರೀಯರ ಮಾತುಗಳು } [+ ಮಹಾ ಜನಸಮೂಹದೊಡನೆ] ಅಡವಿಯಿಂದ ಬರುತ್ತಿರುವ ಈ ಸ್ತ್ರೀ ಯಾರು? ಗೋಲರಸ, ಧೂಪ, ವರ್ತಕರ ಸಕಲ ಸುಗಂಧ ದ್ರವ್ಯಗಳನ್ನು ಸುಡುವಾಗ ಮೇಲೇರುವ ಹೊಗೆಯಂತೆ ಧೂಳು ಮೇಲೇರುತ್ತಿದೆ.

పరమగీతము అధ్యాయము 3

7 ನೋಡಿ, ಅದು ಸೊಲೋಮೋನನ ಪಲ್ಲಕ್ಕಿ. ಅದರ ಸುತ್ತಲೂ ಅರವತ್ತು ಮಂದಿ ಸೈನಿಕರಿದ್ದಾರೆ. ಅವರು ಇಸ್ರೇಲಿನ ಸೈನಿಕರು!

8 ಯುದ್ಧವೀರರಾದ ಅವರು ಕೈಯಲ್ಲಿ ಕತ್ತಿ ಹಿಡಿದಿದ್ದಾರೆ; ರಾತ್ರಿಯ ಅಪಾಯದ ನಿಮಿತ್ತ ಅವರು ಸೊಂಟಕ್ಕೆ ಕತ್ತಿ ಕಟ್ಟಿಕೊಂಡಿದ್ದಾರೆ.

పరమగీతము అధ్యాయము 3

9 ರಾಜನಾದ ಸೊಲೊಮೋನನು ತನಗೋಸ್ಕರ ಪಲ್ಲಕ್ಕಿಯನ್ನು ಲೆಬನೋನಿನ ದೇವದಾರು ಮರದಿಂದ ಮಾಡಿಸಿದ್ದಾನೆ.

10 ಅದರ ಕಂಬಗಳನ್ನು ಬೆಳ್ಳಿಯಿಂದಲೂ ಅದರ ಅಡ್ಡಕಂಬಗಳನ್ನು ಚಿನ್ನದಿಂದಲೂ ಮಾಡಲಾಗಿದೆ. ಅದರ ಆಸನವನ್ನು ನೇರಳೆ ಬಣ್ಣದ ಬಟ್ಟೆಯಿಂದ ಹೊದಿಸಲಾಗಿದೆ. ಆ ಬಟ್ಟೆಯನ್ನು ಜೆರುಸಲೇಮಿನ ಸ್ತ್ರೀಯರು ಕಸೂತಿ ಕೆಲಸದಿಂದ ಅಲಂಕರಿಸಿದ್ದಾರೆ.

పరమగీతము అధ్యాయము 3

11 ಚೀಯೋನಿನ ಸ್ತ್ರೀಯರೇ, ಹೊರಗೆ ಹೋಗಿ ರಾಜನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಲ್ಲಿ ಹೃದಯವು ಹರ್ಷಗೊಂಡಿದ್ದಾಗ ಅವನ ತಾಯಿ ತಲೆಗಿಟ್ಟ ಕಿರೀಟವನ್ನು ಧರಿಸಿಕೊಂಡಿದ್ದಾನೆ.