పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు మొదటి గ్రంథము
1. [PS]ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು.
2. ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು.
3. ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು. [PE]
4. [PS]ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು.
5. ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.
6. ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು.
7. ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು. [PE]
8. {#1ದಾವೀದನ ಕೃತಜ್ಞತಾಸ್ತುತಿ } [QS]ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, [QE][QS2]ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. [QE]
9. [QS]ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. [QE][QS2]ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ. [QE]
10. [QS]ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; [QE][QS2]ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ. [QE]
11. [QS]ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; [QE][QS2]ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ. [QE]
12. [QS]ಆತನ ಸೇವಕನಾದ ಇಸ್ರೇಲನ ಸಂತತಿಯವರೇ, [QE][QS2]ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ, [QE]
13. [QS]ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ [QE][QS2]ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ. [QE]
14. [QS]ಯೆಹೋವನೇ ನಮ್ಮ ದೇವರು. [QE][QS2]ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. [QE]
15. [QS]ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. [QE][QS2]ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು. [QE]
16. [QS]ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. [QE][QS2]ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ. [QE]
17. [QS]ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. [QE][QS2]ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ. [QE]
18. [QS]ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. [QE][QS2]ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು. [QE][PBR]
19. [QS]ಆತನು “ನಿಮಗೆ ಈ ದೇಶವನ್ನು ಕೊಡುವೆನು; [QE][QS2]ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವುದು” ಎಂದು ಹೇಳಿದನು. [QE]
20. [QS]ಅವರು ಒಂದು ದೇಶದಿಂದ ಇನ್ನೊಂದಕ್ಕೂ [QE][QS2]ಒಂದು ರಾಜ್ಯದಿಂದ ಇನ್ನೊಂದಕ್ಕೂ ಹೋದರು. [QE]
21. [QS]ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. [QE][QS2]ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು. [QE]
22. [QS]ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; [QE][QS2]ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು. [QE]
23. [QS]ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; [QE][QS2]ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. [QE]
24. [QS]ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. [QE][QS2]ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. [QE]
25. [QS]ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. [QE][QS2]ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು. [QE]
26. [QS]ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. [QE][QS2]ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು. [QE]
27. [QS]ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ [QE][QS2]ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ. [QE]
28. [QS]ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ [QE][QS2]ಎಂದು ಹೇಳಿ ಆತನನ್ನು ಘನಪಡಿಸಿರಿ. [QE]
29. [QS]ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. [QE][QS2]ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; [QE][QS2]ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ. [QE]
30. [QS]ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! [QE][QS2]ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು. [QE]
31. [QS]ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” [QE][QS2]ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. [QE]
32. [QS]ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, [QE][QS2]ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ. [QE]
33. [QS]ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. [QE][QS2]ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ. [QE]
34. [QS]ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. [QE][QS2]ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು. [QE]
35. [QS]“ರಕ್ಷಕನಾದ ಯೆಹೋವನೇ, [QE][QS2]ನಮ್ಮನ್ನು ರಕ್ಷಿಸು; [QE][QS]ನಮ್ಮನ್ನು ಒಂದುಗೂಡಿಸು; [QE][QS2]ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. [QE][QS]ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. [QE][QS2]ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ. [QE]
36. [QS]ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; [QE][QS2]ನಿರಂತರವೂ ಕೊಂಡಾಡಲ್ಪಡಲಿ! [QE][PBR]
37. [PS]ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು. [PE][PS]ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು.
38. ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು. [PE]
39. [PS]ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು.
40. ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು.
41. (41-42)ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು. [PE]
42.
43. [PS]ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು. [PE]
మొత్తం 29 అధ్యాయాలు, ఎంపిక చేయబడింది అధ్యాయము 16 / 29
1 ಲೇವಿಯರು ಒಡಂಬಡಿಕೆಯ ಪೆಟ್ಟಿಗೆಯನ್ನು ತಂದು ಅದಕ್ಕಾಗಿ ದಾವೀದನು ನಿರ್ಮಿಸಿದ್ದ ಗುಡಾರದೊಳಗೆ ಇಟ್ಟರು. ಅನಂತರ ಸರ್ವಾಂಗಹೋಮ ಮತ್ತು ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸಿದರು. 2 ದಾವೀದನು ಯಜ್ಞಗಳನ್ನು ಸಮರ್ಪಿಸಿದ ಬಳಿಕ ಯೆಹೋವನ ಹೆಸರಿನಲ್ಲಿ ಇಸ್ರೇಲರನ್ನು ಆಶೀರ್ವದಿಸಿದನು. 3 ಅನಂತರ ಅಲ್ಲಿ ನೆರೆದಿದ್ದ ಪ್ರತಿಯೊಬ್ಬ ಇಸ್ರೇಲಿನ ಗಂಡಸಿಗೆ ಮತ್ತು ಹೆಂಗಸಿಗೆ ಒಂದು ರೊಟ್ಟಿಯನ್ನೂ ಸ್ವಲ್ಪ ಖರ್ಜೂರವನ್ನೂ ಒಣದ್ರಾಕ್ಷಿಯನ್ನೂ ಕೊಟ್ಟನು. 4 ದಾವೀದನು ಕೆಲವು ಮಂದಿ ಯಾಜಕರನ್ನು ಒಡಂಬಡಿಕೆಯ ಪೆಟ್ಟಿಗೆಯ ಸೇವೆಮಾಡುವುದಕ್ಕಾಗಿ ನೇಮಿಸಿದನು. ಇಸ್ರೇಲರ ದೇವರಾದ ಯೆಹೋವನಿಗೆ ಸ್ತೋತ್ರ ಸಲ್ಲಿಸುವುದು ಮತ್ತು ಆತನನ್ನು ಕೊಂಡಾಡುವುದೇ ಇವರ ಕೆಲಸವಾಗಿತ್ತು. 5 ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು. 6 ಬೆನಾಯನೂ ಯೆಹಜೀಯೇಲನೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಬಳಿಯಲ್ಲಿ ತುತ್ತೂರಿಗಳನ್ನು ಯಾವಾಗಲೂ ಊದುವ ಯಾಜಕರಾಗಿದ್ದರು. 7 ಈ ವ್ಯವಸ್ಥೆಯನ್ನು ದಾವೀದನು ಪ್ರಥಮ ಬಾರಿಗೆ ಆಸಾಫನಿಗೂ ಅವನ ಸೋದರರಿಗೂ ಯೆಹೋವನ ಸ್ತೋತ್ರವನ್ನು ಹಾಡುವ ಕೆಲಸಕ್ಕಾಗಿ ನೇಮಿಸಿದನು. 8 {#1ದಾವೀದನ ಕೃತಜ್ಞತಾಸ್ತುತಿ } ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 9 ಯೆಹೋವನಿಗೆ ಗಾನ ಮಾಡಿರಿ, ಆತನಿಗೆ ಸ್ತುತಿಗೀತೆ ಹಾಡಿರಿ. ಆತನ ಅದ್ಭುತಕಾರ್ಯಗಳನ್ನು ಧ್ಯಾನಿಸಿರಿ. 10 ಯೆಹೋವನ ಪರಿಶುದ್ಧನಾಮದಲ್ಲಿ ಹಿಗ್ಗಿರಿ; ಆತನ ದರ್ಶನಕ್ಕಾಗಿ ಬರುವವರೇ, ಸಂತೋಷಪಡಿರಿ. 11 ಯೆಹೋವನನ್ನೂ ಆತನ ಬಲವನ್ನೂ ಆಶ್ರಯಿಸಿರಿ; ಯಾವಾಗಲೂ ಆತನ ದರ್ಶನವನ್ನು ಅಪೇಕ್ಷಿಸಿರಿ. 12 ಆತನ ಸೇವಕನಾದ ಇಸ್ರೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ಸಂತತಿಯವರೇ, 13 ಆತನ ಅದ್ಭುತಕಾರ್ಯಗಳನ್ನೂ ಮಹತ್ಕಾರ್ಯಗಳನ್ನೂ ನ್ಯಾಯನಿರ್ಣಯಗಳನ್ನೂ ಜ್ಞಾಪಿಸಿಕೊಳ್ಳಿರಿ. 14 ಯೆಹೋವನೇ ನಮ್ಮ ದೇವರು. ಆತನ ನ್ಯಾಯವಿಧಿಗಳು ಭೂಲೋಕದಲ್ಲೆಲ್ಲಾ ಇವೆ. 15 ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು. 16 ಯೆಹೋವನು ಅಬ್ರಹಾಮನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿರಿ. ಆತನು ಇಸಾಕನಿಗೆ ಮಾಡಿದ ವಾಗ್ದಾನವನ್ನು ಜ್ಞಾಪಕಕ್ಕೆ ತನ್ನಿರಿ. 17 ಯೆಹೋವನು ಯಾಕೋಬನಿಗೆ ಕಟ್ಟಳೆಗಳನ್ನು ಅನುಗ್ರಹಿಸಿದನು. ಅದು ಇಸ್ರೇಲರೊಂದಿಗಿನ ನಿರಂತರವಾದ ಒಡಂಬಡಿಕೆ. 18 ಯೆಹೋವನು ಇಸ್ರೇಲರಿಗೆ, “ನಾನು ನಿಮಗೆ ಕಾನಾನ್ ದೇಶವನ್ನು ಕೊಡುವೆನು. ಆ ವಾಗ್ದತ್ತ ದೇಶವು ನಿಮ್ಮದಾಗುವುದು” ಎಂದು ಹೇಳಿದನು. 19 ಆತನು “ನಿಮಗೆ ಈ ದೇಶವನ್ನು ಕೊಡುವೆನು; ಅದು ನಿಮ್ಮ ಸಂತತಿಯವರಿಗೆ ಸ್ವಾಸ್ತ್ಯವಾಗಿರುವುದು” ಎಂದು ಹೇಳಿದನು. 20 ಅವರು ಒಂದು ದೇಶದಿಂದ ಇನ್ನೊಂದಕ್ಕೂ ಒಂದು ರಾಜ್ಯದಿಂದ ಇನ್ನೊಂದಕ್ಕೂ ಹೋದರು. 21 ಆದರೆ ಅವರಿಗೆ ಕೇಡುಮಾಡಲು ಯೆಹೋವನು ಯಾರಿಗೂ ಅವಕಾಶಕೊಡಲಿಲ್ಲ. ಅವರನ್ನು ಬಾಧಿಸದಂತೆ ಆತನು ಅರಸರುಗಳಿಗೆ ಎಚ್ಚರಿಕೆ ಕೊಟ್ಟನು. 22 ಯೆಹೋವನು ಆ ರಾಜರಿಗೆ, “ನಾನು ಆರಿಸಿಕೊಂಡ ಜನಾಂಗಕ್ಕೆ ಉಪದ್ರವ ಕೊಡಬೇಡಿ; ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” ಎಂದು ಹೇಳಿದನು. 23 ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ. 24 ಯೆಹೋವನ ಮಹಿಮೆಯನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. ಸರ್ವಜನರಲ್ಲಿ ಆತನ ಅದ್ಭುತಕಾರ್ಯಗಳನ್ನು ಪ್ರಸಿದ್ಧಪಡಿಸಿರಿ. 25 ಯೆಹೋವನು ದೊಡ್ಡವನೂ ಸ್ತುತಿಗೆ ಪಾತ್ರನೂ ಆಗಿದ್ದಾನೆ. ಎಲ್ಲಾ ದೇವರುಗಳಲ್ಲಿ ಯೆಹೋವನೇ ಭಯಂಕರನು. 26 ಯಾಕೆಂದರೆ ಜನಾಂಗಗಳಲ್ಲಿರುವ ಬೇರೆ ದೇವರುಗಳೆಲ್ಲಾ ಜಡಮೂರ್ತಿಗಳೇ. ಯೆಹೋವನಾದರೋ ಆಕಾಶಮಂಡಲವನ್ನು ಸೃಷ್ಟಿಸಿದಾತನು. 27 ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ. 28 ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ ಯೆಹೋವನವೇ ಎಂದು ಹೇಳಿ ಆತನನ್ನು ಘನಪಡಿಸಿರಿ. 29 ಯೆಹೋವನ ಮಹಿಮೆಯನ್ನು ಕೊಂಡಾಡಿರಿ; ಆತನ ಹೆಸರಿಗೆ ಘನತೆಯನ್ನು ಸಲ್ಲಿಸಿರಿ. ನಿಮ್ಮ ಕಾಣಿಕೆಗಳನ್ನು ಆತನ ಬಳಿಗೆ ತನ್ನಿರಿ; ಆತನ ಪರಿಶುದ್ಧ ನಾಮವನ್ನು ಆರಾಧಿಸಿರಿ. 30 ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು. 31 ಭೂಮ್ಯಾಕಾಶಗಳು ಹರ್ಷಿಸಲಿ! “ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ” ಎಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ. 32 ಸಮುದ್ರವೂ ಅದರೊಳಗಿರುವದೆಲ್ಲವೂ ಆರ್ಭಟಿಸಲಿ, ಹೊಲಗದ್ದೆಗಳು ತಮ್ಮ ಹರ್ಷವನ್ನು ವ್ಯಕ್ತಪಡಿಸಲಿ. 33 ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ. 34 ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ. ಆತನು ಒಳ್ಳೆಯವನು. ಆತನ ಪ್ರೀತಿಯು ಸದಾಕಾಲಕ್ಕೂ ಇರುವದು. 35 “ರಕ್ಷಕನಾದ ಯೆಹೋವನೇ, ನಮ್ಮನ್ನು ರಕ್ಷಿಸು; ನಮ್ಮನ್ನು ಒಂದುಗೂಡಿಸು; ಅನ್ಯಜನಾಂಗಗಳಿಂದ ನಮ್ಮನ್ನು ರಕ್ಷಿಸು. ಆಗ ನಾವು ನಿನ್ನ ಪರಿಶುದ್ಧ ನಾಮವನ್ನು ಕೀರ್ತಿಸುವೆವು. ನಮ್ಮ ಹಾಡುಗಳಿಂದ ನಿನ್ನನ್ನು ಘನಪಡಿಸುವೆವು” ಎಂದು ಆತನಿಗೆ ಹೇಳಿರಿ. 36 ಇಸ್ರೇಲರ ದೇವರಾದ ಯೆಹೋವನು ಸದಾಕಾಲವೂ ಘನಹೊಂದಲಿ; ನಿರಂತರವೂ ಕೊಂಡಾಡಲ್ಪಡಲಿ! 37 ಇಸ್ರೇಲರೆಲ್ಲರೂ ಯೆಹೋವನನ್ನು ಸ್ತುತಿಸಿ “ಆಮೆನ್” ಅಂದರು. ಆಗ ದಾವೀದನು ಆಸಾಫನನ್ನೂ ಅವನ ಸಹೋದರರನ್ನೂ ಒಡಂಬಡಿಕೆಯ ಪೆಟ್ಟಿಗೆಯ ಮುಂದೆ ಪ್ರತಿನಿತ್ಯ ಸೇವೆಮಾಡಲು ಅಲ್ಲಿರಿಸಿದನು. 38 ಅವರೊಂದಿಗೆ ಸೇವೆಮಾಡಲು ಓಬೇದೆದೋಮನನ್ನೂ ಇತರ ಅರವತ್ತೆಂಟು ಮಂದಿ ಲೇವಿಯರನ್ನೂ ಅಲ್ಲಿರಿಸಿದನು. ಓಬೇದೆದೋಮ್ ಮತ್ತು ಹೋಸ ಎಂಬವರು ಕಾವಲುಗಾರರಾಗಿದ್ದರು. ಓಬೇದೆದೋಮನು ಯೆದುತೂನನ ಮಗನಾಗಿದ್ದನು. 39 ಗಿಬ್ಯೋನಿನ ಉನ್ನತಸ್ಥಳದಲ್ಲಿದ್ದ ದೇವದರ್ಶನ ಗುಡಾರದಲ್ಲಿ ಸೇವೆಮಾಡಲು ದಾವೀದನು ಚಾದೋಕನನ್ನು ಮತ್ತು ಇತರ ಯಾಜಕರನ್ನು ನೇಮಿಸಿದನು. 40 ಪ್ರತಿ ಮುಂಜಾನೆ ಮತ್ತು ಸಂಧ್ಯಾಕಾಲಗಳಲ್ಲಿ ಚಾದೋಕನು ಮತ್ತು ಇತರ ಯಾಜಕರು ಸರ್ವಾಂಗಹೋಮವನ್ನು ಯಜ್ಞವೇದಿಕೆಯ ಮೇಲೆ ಸಮರ್ಪಿಸುತ್ತಿದ್ದರು. ಇಸ್ರೇಲರಿಗೆ ಕೊಡಲ್ಪಟ್ಟಿದ್ದ ಕಟ್ಟಳೆಗಳಿಗನುಸಾರವಾಗಿ ಅವರು ಮಾಡಿದರು. 41 (41-42)ಹೇಮಾನ್ ಮತ್ತು ಯೆದುತೂನ್ ಅವರೊಂದಿಗಿದ್ದು ತುತ್ತೂರಿಯನ್ನೂದುತ್ತಾ ತಾಳ ಬಾರಿಸುತ್ತಾ ಇತರ ವಾದ್ಯಗಳನ್ನು ನುಡಿಸುತ್ತಾ ಯೆಹೋವನಿಗೆ ಸ್ತುತಿಗೀತೆಗಳನ್ನು ಹಾಡಿದರು. ಯೆದುತೂನನ ಮಕ್ಕಳು ದ್ವಾರಪಾಲಕರಾಗಿದ್ದರು. 42 43 ಆ ಕಾರ್ಯವು ಮುಗಿದ ಬಳಿಕ ಎಲ್ಲಾ ಇಸ್ರೇಲರು ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸಲು ತನ್ನ ಮನೆಗೆ ಹೋದನು.
మొత్తం 29 అధ్యాయాలు, ఎంపిక చేయబడింది అధ్యాయము 16 / 29
×

Alert

×

Telugu Letters Keypad References