1.
2. [PS]ನಾನು ಕ್ರಿಸ್ತನ ಮಾದರಿಯನ್ನು ಅನುಸರಿಸುವಂತೆ ನೀವೂ ನನ್ನ ಮಾದರಿಯನ್ನು ಅನುಸರಿಸಿರಿ. [PE]{#1ಅಧಿಕಾರಕ್ಕೆ ಅಧೀನರಾಗಿರಿ } [PS]ನೀವು ಎಲ್ಲಾ ವಿಷಯಗಳಲ್ಲಿ ನನ್ನನ್ನು ಜ್ಞಾಪಿಸಿಕೊಳುವುದರಿಂದ ನಿಮ್ಮನ್ನು ಹೊಗಳುತ್ತೇನೆ. ನಾನು ನಿಮಗೆ ಕೊಟ್ಟ ಉಪದೇಶಗಳನ್ನು ನೀವು ಸೂಕ್ಷ್ಮವಾಗಿ ಅನುಸರಿಸುತ್ತಿದ್ದೀರಿ.
3. ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರುಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ. [PE]
4. [PS]ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.
5. ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.
6. ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. [PE]
7. [PS]ಆದರೆ ಪುರುಷನು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬಾರದು. ಏಕೆಂದರೆ, ಪುರುಷನು ದೇವರ ಸ್ವರೂಪವಾಗಿದ್ದಾನೆ ಮತ್ತು ದೇವರ ಪ್ರಭಾವವಾಗಿದ್ದಾನೆ. ಆದರೆ ಸ್ತ್ರೀಯು ಪುರುಷನ ಪ್ರಭಾವವಾಗಿದ್ದಾಳೆ.
8. ಪುರುಷನು ಸ್ತ್ರೀಯಿಂದ ಬಂದಿಲ್ಲ: ಸ್ತ್ರೀಯು ಪುರುಷನಿಂದ ಬಂದಳು.
9. ಪುರುಷನು ಸೃಷ್ಟಿಸಲ್ಪಟ್ಟದ್ದು ಸ್ತ್ರೀಗೋಸ್ಕರವಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರ ಸೃಷ್ಟಿಸಲ್ಪಟ್ಟಳು.
10. ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. [PE]
11. [PS]ಆದರೆ ಪ್ರಭುವಿನ ದೃಷ್ಟಿಯಲ್ಲಿ ಸ್ತ್ರೀಯು ಪುರುಷನಿಗೆ ಎಷ್ಟು ಮುಖ್ಯವೋ ಪುರುಷನೂ ಸ್ತ್ರೀಗೆ ಅಷ್ಟೇ ಮುಖ್ಯ.
12. ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ. [PE]
13. [PS]ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.
14. ಮನುಷ್ಯನ ಸ್ವಭಾವವೇ ತಿಳಿಸುವಂತೆ ಉದ್ದನೆಯ ಕೂದಲನ್ನು ಹೊಂದಿರುವುದು ಪುರುಷನಿಗೆ ಅವಮಾನಕರವಾಗಿದೆ.
15. ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.
16. ಕೆಲವು ಜನರು ಇದರ ಬಗ್ಗೆ ಇನ್ನೂ ವಾದಮಾಡಬಯಸಬಹುದು. ಆದರೆ ಈ ಸಂಪ್ರದಾಯವು ನಮ್ಮಲ್ಲಾಗಲಿ ದೇವರ ಸಭೆಗಳಲ್ಲಾಗಲಿ ಇಲ್ಲ. [PE]
17. {#1ಪ್ರಭುವಿನ ರಾತ್ರಿಭೋಜನ } [PS]ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ.
18. ಮೊದಲನೆಯದಾಗಿ, ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಪಂಗಡಗಳಿರುವುದಾಗಿ ಕೇಳಿದ್ದೇನೆ. ಇದು ನಿಜವೆಂದು ಸ್ವಲ್ಪಮಟ್ಟಿಗೆ ನಂಬುತ್ತೇನೆ.
19. (ನಿಮ್ಮಲ್ಲಿ ಭಿನ್ನಾಭಿಪ್ರಾಯಗಳಿರುವುದು ಸಹಜ. ನಿಮ್ಮಲ್ಲಿ ಯಾರು ನಿಜವಾಗಿಯೂ ಒಳ್ಳೆಯದನ್ನು ಮಾಡುತ್ತಿದ್ದಾರೆ ಎಂಬುದನ್ನು ಇದು ಸ್ಪಷ್ಟಪಡಿಸುತ್ತದೆ.) [PE]
20. [PS]ನೀವೆಲ್ಲರೂ ಒಟ್ಟಾಗಿ ಸೇರಿದಾಗ ನೀವು ಮಾಡುವಂಥದ್ದು ನಿಜವಾಗಿಯೂ ಪ್ರಭುವಿನ ರಾತ್ರಿಭೋಜನವಲ್ಲ.
21. ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.
22. ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ. [PE]
23. [PS]ನಾನು ಪ್ರಭುವಿನಿಂದ ಹೊಂದಿಕೊಂಡದ್ದನ್ನೇ ನಿಮಗೆ ಉಪದೇಶಿಸಿದೆನು. ಅದೇನೆಂದರೆ: ಯೇಸುವನ್ನು ಕೊಲ್ಲುವುದಕ್ಕಾಗಿ ಒಪ್ಪಿಸಿಕೊಟ್ಟ ರಾತ್ರಿಯಲ್ಲಿ, ಆತನು ರೊಟ್ಟಿಯನ್ನು ತೆಗೆದುಕೊಂಡು,
24. ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.
25. ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, “ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
26. ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಕುಡಿಯುವಾಗಲೆಲ್ಲಾ ಪ್ರಭುವಿನ ಮರಣವನ್ನು ಆತನು ಬರುವ ತನಕ ಪ್ರಚುರಪಡಿಸುತ್ತೀರಿ. [PE]
27. [PS]ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.
28. ಪ್ರತಿಯೊಬ್ಬ ವ್ಯಕ್ತಿಯು ರೊಟ್ಟಿಯನ್ನು ತಿನ್ನುವುದಕ್ಕಿಂತಲೂ ಪಾತ್ರೆಯಲ್ಲಿ ಕುಡಿಯುವುದಕ್ಕಿಂತಲೂ ಮುಂಚಿತವಾಗಿ ತನ್ನ ಹೃದಯವನ್ನು ಪರಿಶೀಲಿಸಿಕೊಳ್ಳಬೇಕು.
29. ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.
30. ಆದಕಾರಣವೇ, ನಿಮ್ಮ ಸಭೆಯಲ್ಲಿರುವ ಅನೇಕರು ರೋಗಿಗಳೂ ಬಲಹೀನರೂ ಆಗಿದ್ದಾರೆ ಮತ್ತು ಅನೇಕರು ಸತ್ತು ಹೋದರು.
31. ಆದರೆ ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.
32. ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ. [PE]
33. [PS]ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.
34. ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ. [PE]