1. {#1ಪ್ರೀತಿ } [PS]ನಾನು ಮನುಷ್ಯರ ಭಾಷೆಗಳನ್ನಲ್ಲದೆ ದೇವದೂತರ ಭಾಷೆಗಳನ್ನು ಮಾತಾಡಬಹುದು. ಆದರೆ ನನ್ನಲ್ಲಿ ಪ್ರೀತಿಯಿಲ್ಲದಿದ್ದರೆ, ನಾನು ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ತಾಳ.
2. ಪ್ರವಾದಿಸುವ ವರ ನನಗಿರಬಹುದು; ದೇವರ ರಹಸ್ಯ ಸಂಗತಿಗಳನ್ನೆಲ್ಲಾ ಮತ್ತು ಜ್ಞಾನವನ್ನೆಲ್ಲಾ ನಾನು ಅರ್ಥಮಾಡಿಕೊಂಡಿರಬಹುದು ಮತ್ತು ಬೆಟ್ಟಗಳನ್ನು ಚಲಿಸಬಲ್ಲಂಥ ಮಹಾನಂಬಿಕೆ ನನಗಿರಬಹುದು. ಇವುಗಳೆಲ್ಲಾ ನನ್ನಲ್ಲಿ ಇದ್ದರೂ ಪ್ರೀತಿಯು ಇಲ್ಲದಿದ್ದರೆ, ನಾನು ನಿಷ್ಪ್ರಯೋಜಕನಾಗಿದ್ದೇನೆ.
3. ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ. [PE]
4. [PS]ಪ್ರೀತಿಯು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಅಸೂಯೆಪಡುವುದಿಲ್ಲ; ಹೊಗಳಿಕೊಳ್ಳುವುದಿಲ್ಲ; ಗರ್ವಪಡುವುದಿಲ್ಲ.
5. ಪ್ರೀತಿಯು ನಾಚಿಕೆಕರವಾದ ರೀತಿಯಲ್ಲಿ ವರ್ತಿಸುವುದಿಲ್ಲ; ಸ್ವಾರ್ಥಿಯಲ್ಲ ಮತ್ತು ಬೇಗನೆ ಕೋಪಗೊಳ್ಳುವುದಿಲ್ಲ; ತನಗಾದ ಅಪಕಾರಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
6. ಪ್ರೀತಿಯು ಕೆಟ್ಟದ್ದರ ಬಗ್ಗೆ ಸಂತೋಷಪಡದೆ ಸತ್ಯದ ಬಗ್ಗೆ ಸಂತೋಷಪಡುತ್ತದೆ.
7. ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ. [PE]
8. [PS]ಪ್ರೀತಿಯು ಎಂದಿಗೂ ಕೊನೆಗೊಳ್ಳುವುದಿಲ್ಲ. ಪ್ರವಾದಿಸುವ ವರಗಳಿವೆ, ಆದರೆ ಅವು ಕೊನೆಗೊಳ್ಳುತ್ತವೆ. ವಿವಿಧ ಭಾಷೆಗಳಲ್ಲಿ ಮಾತಾಡುವ ವರಗಳಿವೆ, ಆದರೆ ಆ ವರಗಳು ಕೊನೆಗೊಳ್ಳುತ್ತವೆ. ಜ್ಞಾನವೆಂಬ ವರವೂ ಇದೆ, ಆದರೆ ಅದೂ ಕೊನೆಗೊಳ್ಳುವುದು.
9. ಏಕೆಂದರೆ ನಮಗಿರುವ ಈ ಜ್ಞಾನವು ಮತ್ತು ಈ ಪ್ರವಾದನೆಗಳು ಸಂಪೂರ್ಣವಾದುವುಗಳಲ್ಲ.
10. ಆದರೆ ಸಂಪೂರ್ಣತೆಯು ಬಂದಾಗ ಸಂಪೂರ್ಣವಲ್ಲದವುಗಳು ಕೊನೆಗೊಳ್ಳುತ್ತವೆ. [PE]
11. [PS]ನಾನು ಬಾಲಕನಾಗಿದ್ದಾಗ ಬಾಲಕನಂತೆ ಮಾತಾಡಿದೆನು, ಆಲೋಚಿಸಿದೆನು, ಯೋಜನೆಗಳನ್ನು ಮಾಡಿದೆನು. ಆದರೆ ನಾನು ಪ್ರಾಯಸ್ಥನಾದ ಮೇಲೆ ಬಾಲ್ಯದ ನಡವಳಿಕೆಯನ್ನು ಬಿಟ್ಟುಬಿಟ್ಟೆನು.
12. ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
13. ಆದ್ದರಿಂದ ನಂಬಿಕೆ, ನಿರೀಕ್ಷೆ ಮತ್ತು ಪ್ರೀತಿ ಶಾಶ್ವತವಾದವುಗಳಾಗಿವೆ. ಆದರೆ ಇವುಗಳಲ್ಲಿ ಅತ್ಯುನ್ನತವಾದದ್ದು ಪ್ರೀತಿಯೇ. [PE]