1. {#1ಸಿನಾಯ್ ಬೆಟ್ಟದಲ್ಲಿ ಎಲೀಯನು } [PS]ರಾಜನಾದ ಅಹಾಬನು ಈಜೆಬೆಲಳಿಗೆ ಎಲೀಯನು ಮಾಡಿದ ಎಲ್ಲಾ ಕಾರ್ಯಗಳನ್ನು ಹೇಳಿದನು. ಎಲೀಯನು (ಬಾಳನ) ಪ್ರವಾದಿಗಳನ್ನೆಲ್ಲ ಖಡ್ಗದಿಂದ ಹೇಗೆ ಕೊಂದನೆಂಬುದನ್ನೂ ಅಹಾಬನು ಅವಳಿಗೆ ಹೇಳಿದನು.
2. ಆದ್ದರಿಂದ ಈಜೆಬೆಲಳು ಎಲೀಯನ ಬಳಿಗೆ ಒಬ್ಬ ಸಂದೇಶಕನನ್ನು ಕಳುಹಿಸಿದಳು. ಈಜೆಬೆಲಳು, “ನೀನು ಆ ಪ್ರವಾದಿಗಳನ್ನು ಕೊಂದುಹಾಕಿದಂತೆ ನಾಳೆಯ ದಿನ ನಾನು ಇದೇ ಸಮಯಕ್ಕೆ ಮುಂಚೆ, ನಿನ್ನನ್ನು ಕೊಂದುಹಾಕುವೆನೆಂದು ಪ್ರಮಾಣ ಮಾಡುತ್ತೇನೆ. ನಾನು ಈ ಕಾರ್ಯದಲ್ಲಿ ವಿಜಯಿಯಾಗದಿದ್ದಲ್ಲಿ, ದೇವರುಗಳು ನನ್ನನ್ನು ಕೊಲ್ಲಲಿ” ಎಂದು ಹೇಳಿದಳು. [PE]
3. [PS]ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.
4. ನಂತರ ಎಲೀಯನು ಮರಳುಗಾಡಿನಲ್ಲಿ ದಿನವೆಲ್ಲ ನಡೆದನು. ಎಲೀಯನು ಒಂದು ಪೊದೆಯ ಕೆಳಗೆ ಕುಳಿತುಕೊಂಡನು. ಅವನು ಸಾಯಲು ಇಚ್ಛಿಸಿ, “ಯೆಹೋವನೇ, ನನಗೆ ಜೀವನ ಸಾಕಾಗಿದೆ! ಸಾಯಲು ನನಗೆ ಅವಕಾಶ ಮಾಡು. ನಾನು ನನ್ನ ಪೂರ್ವಿಕರಿಗಿಂತಲೂ ಉತ್ತಮನೇನಲ್ಲ” ಎಂದು ಹೇಳಿದನು. [PE]
5. [PS]ನಂತರ ಎಲೀಯನು ಪೊದೆಯ ಕೆಳಗೆ ಮಲಗಿ ನಿದ್ದೆಹೋದನು. ದೂತನೊಬ್ಬನು ಎಲೀಯನ ಹತ್ತಿರಕ್ಕೆ ಬಂದು ಅವನನ್ನು ಸ್ಪರ್ಶಿಸಿ, “ಎದ್ದೇಳು! ಊಟಮಾಡು!” ಎಂದನು.
6. ಇದ್ದಲಿನ ಮೇಲೆ ಸುಟ್ಟ ಒಂದು ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಹತ್ತಿರದಲ್ಲಿ ಇದ್ದುದನ್ನು ಎಲೀಯನು ನೋಡಿದನು. ಎಲೀಯನು ರೊಟ್ಟಿಯನ್ನು ತಿಂದು ನೀರನ್ನು ಕುಡಿದನು. ನಂತರ ಅವನು ನಿದ್ದೆ ಮಾಡಿದನು. [PE]
7. [PS]ತರುವಾಯ ಯೆಹೋವನ ದೂತನು ಅವನ ಬಳಿಗೆ ಮತ್ತೆ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದೇಳು! ಊಟಮಾಡು! ನೀನು ಊಟ ಮಾಡದಿದ್ದರೆ, ಬಹುದೂರ ನೀನು ಪ್ರಯಾಣ ಮಾಡಬೇಕಾಗಿರುವುದರಿಂದ ನಿನ್ನಲ್ಲಿ ಸಾಕಷ್ಟು ಶಕ್ತಿಯಿರುವುದಿಲ್ಲ” ಎಂದು ಹೇಳಿದನು.
8. ಎಲೀಯನು ಎದ್ದು ಊಟಮಾಡಿ ನೀರನ್ನು ಕುಡಿದನು. ಎಲೀಯನು ನಲವತ್ತು ಹಗಲು ಮತ್ತು ರಾತ್ರಿ ಪ್ರಯಾಣ ಮಾಡಲು ಸಾಕಾಗುವಷ್ಟು ಶಕ್ತಿಯನ್ನು ಆ ಆಹಾರವು ನೀಡಿತು. ಅವನು ದೇವರ ಬೆಟ್ಟವಾದ ಹೋರೇಬ್‌ಗೆ ಹೋದನು.
9. ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. [PE]
10. [PS]ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು. [PE]
11. [PS]ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು. [PE][PS]ಆಗ ಯೆಹೋವನು ಎಲೀಯನಿಗೆ, “ಹೋಗು, ನನ್ನ ಎದುರಿಗೆ ಬೆಟ್ಟದ ಮೇಲೆ ನಿಲ್ಲು. ನಾನು ನಿನ್ನ ಬಳಿಯಲ್ಲಿ ಹಾದು ಹೋಗುತ್ತೇನೆ” ಎಂದು ಹೇಳಿದನು. ಆಗ ಬಿರುಗಾಳಿಯು ಬೀಸಿತು. ಆ ಬಿರುಗಾಳಿಯು ಬೆಟ್ಟಗಳನ್ನು ಸೀಳಿಹಾಕಿತು; ಅದು ದೊಡ್ಡ ಬಂಡೆಗಳನ್ನು ಯೆಹೋವನ ಎದುರಿನಲ್ಲಿ ಒಡೆದುಹಾಕಿತು. ಆದರೆ ಆ ಗಾಳಿಯೇ ಯೆಹೋವನಲ್ಲ! ಆ ಬಿರುಗಾಳಿಯ ನಂತರ ಅಲ್ಲಿ ಒಂದು ಭೂಕಂಪವುಂಟಾಯಿತು. ಆದರೆ ಆ ಭೂಕಂಪವು ಯೆಹೋವನಲ್ಲ.
12. ಭೂಕಂಪದ ನಂತರ ಅಲ್ಲಿ ಬೆಂಕಿ ಉಂಟಾಯಿತು. ಆದರೆ ಆ ಬೆಂಕಿಯೂ ಯೆಹೋವನಲ್ಲ. ಆ ಬೆಂಕಿಯ ನಂತರ ಸದ್ದಿಲ್ಲದ ಮೃದುವಾದ ಧ್ವನಿ ಉಂಟಾಯಿತು. [PE]
13.
14. [PS]ಎಲೀಯನಿಗೆ ಆ ಧ್ವನಿಯು ಕೇಳಿಸಿದಾಗ, ಅವನು ತನ್ನ ಮೇಲಂಗಿಯಿಂದ ಮುಖವನ್ನು ಮುಚ್ಚಿಕೊಂಡನು. ನಂತರ ಅವನು ಗುಹೆಯ ಹತ್ತಿರಕ್ಕೆ ಹೋಗಿ, ಅದರ ದ್ವಾರದಲ್ಲಿ ನಿಂತುಕೊಂಡನು. ಆಗ ಆ ಧ್ವನಿಯು, “ಎಲೀಯನೇ, ನೀನು ಏಕೆ ಇಲ್ಲಿರುವೆ?” ಎಂದು ಅವನನ್ನು ಕೇಳಿತು. [PE]
15. [PS]ಎಲೀಯನು, “ಸರ್ವಶಕ್ತನಾದ ಯೆಹೋವ ದೇವರೇ, ನಾನು ಯಾವಾಗಲೂ ನಿನ್ನ ಸೇವೆಯನ್ನು ಮಾಡಿದೆನು. ನಾನು ನನ್ನಿಂದ ಸಾಧ್ಯವಾದಷ್ಟು ಉತ್ತಮವಾಗಿ ನಿನ್ನ ಸೇವೆಯನ್ನು ಮಾಡಿದೆನು. ಆದರೆ ಇಸ್ರೇಲಿನ ಜನರು ನಿನ್ನೊಂದಿಗೆ ತಾವು ಮಾಡಿಕೊಂಡ ಒಡಂಬಡಿಕೆಯನ್ನು ಉಲ್ಲಂಘಿಸಿದರು. ಅವರು ನಿನ್ನ ಯಜ್ಞವೇದಿಕೆಗಳನ್ನು ನಾಶಪಡಿಸಿದರು. ಅವರು ನಿನ್ನ ಪ್ರವಾದಿಗಳನ್ನು ಕೊಂದುಹಾಕಿದರು. ಇನ್ನೂ ಜೀವಂತವಾಗಿರುವ ಪ್ರವಾದಿಯು ನಾನೊಬ್ಬನು ಮಾತ್ರ. ಅವರು ಈಗ ನನ್ನನ್ನೂ ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ!” ಎಂದು ಹೇಳಿದನು. [PE][PS]ಯೆಹೋವನು, “ನೀನು ಬಂದ ದಾರಿಯಿಂದ ಹಿಂತಿರುಗಿ ದಮಸ್ಕದ ಅರಣ್ಯಕ್ಕೆ ಹೋಗು. ಅಲ್ಲಿಂದ ದಮಸ್ಕಕ್ಕೆ ಹೋಗಿ, ಹಜಾಯೇಲನನ್ನು ಅರಾಮ್ಯರ ರಾಜನನ್ನಾಗಿ ಅಭಿಷೇಕಿಸು.
16. ನಂತರ ನಿಂಷಿಯ ಮಗನಾದ ಯೇಹುವನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸು. ಅಬೇಲ್ ಮೆಹೋಲದ ಶಾಫಾಟನ ಮಗನಾದ ಎಲೀಷನನ್ನು ನಿನ್ನ ಜಾಗದಲ್ಲಿ ಪ್ರವಾದಿಯನ್ನಾಗಿ ಅಭಿಷೇಕಿಸು.
17. ಹಜಾಯೇಲನು ಕೆಟ್ಟವರಾದ ಅನೇಕ ಜನರನ್ನು ಕೊಲ್ಲುತ್ತಾನೆ. ಹಜಾಯೇಲನ ಖಡ್ಗದಿಂದ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುತ್ತಾನೆ. ಯೇಹುವಿನಿಂದ ತಪ್ಪಿಸಿಕೊಂಡ ಆ ಕೆಟ್ಟ ಜನರನ್ನೆಲ್ಲ ಎಲೀಷನು ಕೊಲ್ಲುತ್ತಾನೆ.
18. ಎಲೀಯನೇ, ಇಸ್ರೇಲಿನಲ್ಲಿ ನಂಬಿಗಸ್ಥನಾದ ವ್ಯಕ್ತಿಯು ನೀನೊಬ್ಬನು ಮಾತ್ರ ಅಲ್ಲ. ಆ ದುಷ್ಟಜನರು ಅನೇಕ ಜನರನ್ನು ಕೊಲ್ಲುತ್ತಾರೆ. ಆದರೂ, ಅದಾದ ನಂತರ, ಬಾಳನಿಗೆ ಎಂದೆಂದೂ ಬಾಗಿ ನಮಸ್ಕರಿಸದಿರುವ ಏಳು ಸಾವಿರ ಜನರು ಇನ್ನೂ ಇಸ್ರೇಲಿನಲ್ಲಿ ವಾಸಮಾಡುತ್ತಿದ್ದಾರೆ! ಬಾಳನ ವಿಗ್ರಹಕ್ಕೆ ಎಂದೂ ಮುದ್ದಿಡದ ಆ ಏಳು ಸಾವಿರ ಜನರನ್ನು ನಾನು ಅಲ್ಲಿ ಉಳಿಸುವೆನು.” [PE]
19. {#1ಎಲೀಷನು ಪ್ರವಾದಿಯಾದನು } [PS]ಎಲೀಯನು ಆ ಸ್ಥಳದಿಂದ ಹೊರಟು ಶಾಫಾಟನ ಮಗನಾದ ಎಲೀಷನನ್ನು ಕಂಡುಹಿಡಿಯಲು ಹೋದನು. ಎಲೀಷನು ಹನ್ನೆರಡು ಜೋಡಿ ಎತ್ತುಗಳನ್ನು ತಂದು ಭೂಮಿಯನ್ನು ಉಳುತ್ತಿದ್ದನು. ಎಲೀಯನು ಬಂದಾಗ ಎಲೀಷನು ಹನ್ನೆರಡನೆಯ ಜೋಡಿಯಿಂದ ತಾನಾಗಿ ಭೂಮಿಯನ್ನು ಉಳುತ್ತಿದ್ದನು. ಎಲೀಯನು ಎಲೀಷನ ಹತ್ತಿರಕ್ಕೆ ಹೋಗಿ ತನ್ನ ಮೇಲಂಗಿಯನ್ನು ಎಲೀಷನಿಗೆ ತೊಡಿಸಿದನು.
20. ಎಲೀಷನು ತಕ್ಷಣ ತನ್ನ ಎತ್ತುಗಳನ್ನು ಬಿಟ್ಟು ಎಲೀಯನ ಹಿಂದೆ ಹೋದನು. ಎಲೀಷನು, “ನನ್ನ ತಾಯಿಗೆ ಮುದ್ದಿಟ್ಟು, ತಂದೆಗೆ ನಮಸ್ಕರಿಸಿ, ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಿದನು. [PE]
21. [PS]ಎಲೀಯನು, “ಸರಿ, ನಾನು ನಿನ್ನನ್ನು ತಡೆಯುವುದಿಲ್ಲ” ಎಂದು ಉತ್ತರಿಸಿದನು. [PE][PS]ನಂತರ ಎಲೀಷನು ಹೋಗಿ ತಾನು ಉಳುತ್ತಿದ್ದ ಎತ್ತುಗಳನ್ನು ವಧಿಸಿ, ಮಾಂಸವನ್ನು ನೊಗದಿಂದಲೇ ಬೇಯಿಸಿ ಜನರೆಲ್ಲರಿಗೆ ಔತಣವನ್ನು ಏರ್ಪಡಿಸಿದನು. ನಂತರ ಅವನು ಎಲೀಯನನ್ನು ಹಿಂಬಾಲಿಸಿ ಅವನ ಸಹಾಯಕನಾದನು. [PE]