1. [PS]ವೃದ್ಧ ಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ
2. ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ. [PE]
3. {#1ವಿಧವೆಯರನ್ನು ಹೇಗೆ ಪೋಷಿಸಬೇಕೆಂಬ ನಿಯಮಗಳು } [PS]ದಿಕ್ಕಿಲ್ಲದ ವಿಧವೆಯರನ್ನು ಪರಿಪಾಲಿಸು.
4. ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.
5. ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಆ ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.
6. ಆದರೆ ವಿಧವೆಯಾದವಳು ತನ್ನ ಇಚ್ಛೆಪೂರೈಕೆಗಾಗಿ ತನ್ನ ಜೀವಿತವನ್ನು ಬಳಸಿಕೊಳ್ಳುವುದಾದರೆ ಅವಳು ಬದುಕಿದ್ದರೂ ಸತ್ತಂತೆಯೇ.
7. ಜನರು ನಿಂದೆನೆಗೆ ಗುರಿಯಾಗದಂತೆ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸು. ಆಗ ಯಾರೂ ಅವರನ್ನು ನಿಂದಿಸಲು ಸಾಧ್ಯವಿಲ್ಲ.
8. ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು. [PE]
9. [PS]ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ
10. ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು. [PE]
11. [PS]ಆದರೆ ಪ್ರಾಯದ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬಾರದು. ಅವರು ಕ್ರಿಸ್ತನಿಗೆ ತಮ್ಮನ್ನು ಒಪ್ಪಿಸಿಕೊಂಡಿದ್ದರೂ ದೈಹಿಕ ಬಯಕೆಗಳ ಒತ್ತಡದಿಂದ ಪದೇಪದೇ ಆತನಿಗೆ ವಿಮುಖರಾಗುತ್ತಾರೆ. ನಂತರ ಅವರು ಮತ್ತೆ ಮದುವೆಯಾಗಲು ಆಸಕ್ತರಾಗುತ್ತಾರೆ.
12. ತಾವು ಕೊಟ್ಟ ವಾಗ್ದಾನವನ್ನು ಮೀರಿದವರೆಂಬ ತೀರ್ಪು ಅವರಿಗಾಗುತ್ತದೆ.
13. ಇದಲ್ಲದೆ, ಅವರು ಮನೆಮನೆಗೆ ಅಲೆಯುತ್ತಾ ತಮ್ಮ ಕಾಲವನ್ನು ಕಳೆಯಲಾರಂಭಿಸುತ್ತಾರೆ; ಹರಟೆ ಮಾತುಗಳನ್ನಾಡುತ್ತಾ ಇತರರ ಜೀವನದಲ್ಲಿ ತಲೆಹಾಕಿ ಕಾಲಹರಣ ಮಾಡುತ್ತಾರೆ; ಹೇಳಬಾರದ ಸಂಗತಿಗಳನ್ನೆಲ್ಲ ಹೇಳುತ್ತಾರೆ.
14. ಆದ್ದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.
15. ಆದರೆ ಈಗಾಗಲೇ ಕೆಲವರು ತಮ್ಮ ದಾರಿಯನ್ನು ಬದಲಾಯಿಸಿ ಸೈತಾನನನ್ನು ಹಿಂಬಾಲಿಸಿದ್ದಾರೆ. [PE]
16.
17. [PS]ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆಯೇ ಅವರನ್ನು ಪರಿಪಾಲಿಸಲಿ. ಅವರನ್ನು ನೋಡಿಕೊಳ್ಳುವಂಥ ಜವಾಬ್ದಾರಿಯನ್ನು ಸಭೆಗೆ ಕೊಡಕೂಡದು. ಆಗ ದಿಕ್ಕಿಲ್ಲದ ವಿಧವೆಯರನ್ನು ನೋಡಿಕೊಳ್ಳಲು ಸಭೆಗೆ ಸಾಧ್ಯವಾಗುವುದು. [PE]{#1ಹಿರಿಯರ ಮತ್ತು ಇನ್ನಿತರ ವಿಷಯಗಳ ಕುರಿತು ಹೆಚ್ಚಿನ ಬೋಧನೆ } [PS]ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.
18. ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು”[✡ ಉಲ್ಲೇಖನ: ಧರ್ಮೋಪದೇಶ. 25:4. ಲೂಕ 10:7. ] ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ. [PE]
19. [PS]ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.
20. ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು. [PE]
21.
22. [PS]ನೀನು ಈ ಕಾರ್ಯಗಳನ್ನು ಮಾಡಬೇಕೆಂದು ದೇವರ, ಯೇಸು ಕ್ರಿಸ್ತನ ಮತ್ತು ಆರಿಸಲ್ಪಟ್ಟ ದೇವದೂತರ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುತ್ತೇನೆ. ಆದರೆ ಸತ್ಯವನ್ನು ತಿಳಿಯುವುದಕ್ಕಿಂತ ಮೊದಲೇ ಜನರಿಗೆ ತೀರ್ಪು ನೀಡಬೇಡ. ಯಾರಿಗೂ ಪಕ್ಷಪಾತ ತೋರಬೇಡ. [PE]
23. [PS]ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು. [PE]
24. [PS]ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ. [PE][PS]ಕೆಲವು ಜನರ ಪಾಪಗಳು ಎದ್ದುಕಾಣುತ್ತವೆ. ಅವರಿಗೆ ನ್ಯಾಯತೀರ್ಪಾಗುವುದೆಂಬುದನ್ನು ಅವರ ಪಾಪಗಳೇ ತೋರ್ಪಡಿಸುತ್ತವೆ. ಆದರೆ ಇತರ ಕೆಲವು ಜನರ ಪಾಪಗಳು ಸ್ವಲ್ಪಕಾಲದ ನಂತರ ತಿಳಿದುಬರುತ್ತವೆ.
25. ಹಾಗೆಯೇ, ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿವೆ. ಇನ್ನು ಕೆಲವರ ಒಳ್ಳೆಯ ಕಾರ್ಯಗಳು ಪ್ರಸಿದ್ಧವಾಗಿಲ್ಲದಿದ್ದರೂ ಅವು ಮರೆಯಾಗಿರಲು ಸಾಧ್ಯವಿಲ್ಲ. [PE]