పవిత్ర బైబిల్

ఈజీ టు రీడ్ వెర్షన్ (ERV) - తెలుగు
2 తిమోతికి
1.
2. [PS]ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು. [PE]
3. [PS]ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. [PE][PS]ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ. [PE]{#1ಕೃತಜ್ಞತಾಸ್ತುತಿ ಮತ್ತು ಪ್ರೋತ್ಸಾಹ } [PS]ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.
4. ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು.
5. ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ.
6. ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ.
7. ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು. [PE]
8.
9. [PS]ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ. [PE][PS]ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು.
10. ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು. [PE]
11. [PS]ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು.
12. ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು. [PE]
13. [PS]ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ.
14. ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ. [PE]
15. [PS]ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ.
16. ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.
17. ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು.
18. ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ. [PE]
మొత్తం 4 అధ్యాయాలు, ఎంపిక చేయబడింది అధ్యాయము 1 / 4
1 2 3 4
1 2 ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ದೇವರ ಚಿತ್ತಾನುಸಾರವಾಗಿ ನಾನು ಅಪೊಸ್ತಲನಾದೆನು. ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನವನ್ನು ಜನರಿಗೆ ತಿಳಿಯಪಡಿಸಲು ದೇವರು ನಮ್ಮನ್ನು ಕಳುಹಿಸಿದನು. 3 ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ. {#1ಕೃತಜ್ಞತಾಸ್ತುತಿ ಮತ್ತು ಪ್ರೋತ್ಸಾಹ } ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ. 4 ನೀನು ನನಗಾಗಿ ಕಣ್ಣೀರು ಸುರಿಸಿದ್ದು ನನ್ನ ನೆನಪಿನಲ್ಲಿದೆ. ನಿನ್ನನ್ನು ನೋಡಬೇಕೆಂದು ಬಹಳ ಆಸೆಯಾಗಿದೆ. ನಿನ್ನನ್ನು ನೋಡಿದಾಗ ನನ್ನಲ್ಲಿ ಆನಂದವು ತುಂಬಿಹೋಗುವುದು. 5 ನಿನ್ನ ನಿಜವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ಆ ವಿಧವಾದ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲೂ ನಿನ್ನ ತಾಯಿಯಾದ ಯೂನಿಕೆಯಲ್ಲೂ ಇತ್ತು. ಈಗ ಅದೇ ನಂಬಿಕೆಯು ನಿನ್ನಲ್ಲಿಯೂ ಇದೆಯೆಂದು ನನಗೆ ತಿಳಿದಿದೆ. 6 ದೇವರು ನಿನಗೆ ದಯಪಾಲಿಸಿರುವ ವರವನ್ನು ನೀನು ನೆನಪು ಮಾಡಿಕೊಳ್ಳಬೇಕೆಂದು ನಾನು ಅಪೇಕ್ಷಿಸುವುದು ಈ ಕಾರಣದಿಂದಲೇ. ನಾನು ನನ್ನ ಕೈಗಳನ್ನು ನಿನ್ನ ಮೇಲಿಟ್ಟಾಗ ಆತನು ನಿನಗೆ ಆ ವರವನ್ನು ದಯಪಾಲಿಸಿದನು. ಬೆಂಕಿಯ ಕಿಡಿಯು ಪ್ರಜ್ವಲವಾಗಿ ದಟ್ಟವಾದ ಬೆಂಕಿಯಾಗುವಂತೆ ನಿನ್ನ ವರವನ್ನು ಉಪಯೋಗಿಸುತ್ತಾ ಅದನ್ನು ಅಧಿಕಗೊಳಿಸಬೇಕೆಂಬುದು ನನ್ನ ಅಪೇಕ್ಷೆ. 7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು. 8 9 ನಮ್ಮ ಪ್ರಭುವಾದ ಯೇಸುವನ್ನು ಕುರಿತು ಜನರಿಗೆ ತಿಳಿಸುವುದಕ್ಕಾಗಲಿ ಪ್ರಭುವಿಗಾಗಿ ಸೆರೆಯಲ್ಲಿರುವ ನನ್ನ ವಿಷಯದಲ್ಲಾಗಲಿ ನಾಚಿಕೆಪಟ್ಟುಕೊಳ್ಳಬೇಡ. ಅದಕ್ಕೆ ಬದಲಾಗಿ ಸುವಾರ್ತೆಗೋಸ್ಕರ ನನ್ನೊಡನೆ ಸಂಕಟವನ್ನು ಅನುಭವಿಸು. ಅದಕ್ಕೆ ಬೇಕಾದ ಶಕ್ತಿಯನ್ನು ದೇವರೇ ನಮಗೆ ದಯಪಾಲಿಸುತ್ತಾನೆ. ಆತನು ನಮ್ಮನ್ನು ರಕ್ಷಿಸಿ, ತನ್ನ ಪವಿತ್ರ ಜನರಾಗಿರುವುದಕ್ಕಾಗಿ ನಮ್ಮನ್ನು ಕರೆದನು. ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದ ಹೀಗಾಯಿತು ಎಂದಲ್ಲ. ಆತನು ತನ್ನ ಸಂಕಲ್ಪಕ್ಕನುಸಾರವಾಗಿ ಮತ್ತು ಕೃಪೆಗನುಸಾರವಾಗಿ ನಮ್ಮನ್ನು ರಕ್ಷಿಸಿ ತನ್ನವರನ್ನಾಗಿ ಮಾಡಿದನು. ಅನಾದಿಕಾಲದಲ್ಲಿಯೇ ಈ ಕೃಪೆಯು ಕ್ರಿಸ್ತ ಯೇಸುವಿನ ಮೂಲಕ ನಮಗೆ ದೊರೆಯಿತು. 10 ಆ ಕೃಪೆಯನ್ನು ಈವರೆಗೆ ನಮಗೆ ತೋರ್ಪಡಿಸಿರಲಿಲ್ಲ. ನಮ್ಮ ರಕ್ಷಕನಾದ ಕ್ರಿಸ್ತ ಯೇಸು ಪ್ರತ್ಯಕ್ಷನಾದಾಗ ಅದನ್ನು ನಮಗೆ ತೋರಿಸಲಾಯಿತು. ಯೇಸು ಮರಣವನ್ನು ನಾಶಪಡಿಸಿ, ನಮಗೆ ಜೀವಮಾರ್ಗವನ್ನು ಸುವಾರ್ತೆಯ ಮೂಲಕ ತೋರಿದನು. 11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು. 12 ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು. 13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ. 14 ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ. 15 ಏಷ್ಯಾ ದೇಶದಲ್ಲಿರುವವರೆಲ್ಲರೂ ನನ್ನನ್ನು ತೊರೆದಿರುವರೆಂಬುದು ನಿನಗೆ ತಿಳಿದಿದೆ. ಪುಗೇಲನೂ, ಹೆರ್ಮೊಗೇನನೂ ನನ್ನನ್ನು ತೊರೆದಿದ್ದಾರೆ. 16 ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ. 17 ಅವನು ರೋಮಿಗೆ ಬಂದಾಗ, ಬಹಳ ಹುಡುಕಾಡಿ ನನ್ನನ್ನು ಸಂಧಿಸಿದನು. 18 ಆ ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.
మొత్తం 4 అధ్యాయాలు, ఎంపిక చేయబడింది అధ్యాయము 1 / 4
1 2 3 4
×

Alert

×

Telugu Letters Keypad References