1. [PS]ರೆಹಬ್ಬಾಮನು ಜೆರುಸಲೇಮಿಗೆ ಬಂದು ಯೆಹೂದ ಮತ್ತು ಬೆನ್ಯಾಮೀನ್ ಕುಲದ ಒಂದು ಲಕ್ಷ ಎಂಭತ್ತುಸಾವಿರ ಮಂದಿ ನುರಿತ ಸೈನಿಕರನ್ನು ಒಟ್ಟು ಸೇರಿಸಿದನು. ಇಸ್ರೇಲರೊಂದಿಗೆ ಯುದ್ಧಮಾಡಿ ಅವರ ರಾಜ್ಯವನ್ನು ಮತ್ತೆ ಪಡೆದುಕೊಳ್ಳಬೇಕೆಂಬುದೇ ಅವನ ಉದ್ದೇಶವಾಗಿತ್ತು.
2. ಆದರೆ ಯೆಹೋವನ ಮನುಷ್ಯನಾದ ಶೆಮಾಯನಿಗೆ ಯೆಹೋವನ ಸಂದೇಶವು ಬಂತು,
3. “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು:
4. ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ. [PE]
5. {#1ಯೆಹೂದವನ್ನು ರೆಹಬ್ಬಾಮನು ಬಲಗೊಳಿಸಿದ್ದು } [PS]ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು.
6. ಬೆತ್ಲೆಹೇಮ್, ಏತಾಮ್, ತೆಕೋವ,
7. ಬೇತ್ಚೂರ್, ಸೋಕೋ, ಅದುಲ್ಲಾಮ್,
8. ಗತ್, ಮಾರೇಷ, ಜೀಫ್,
9. ಅದೋರೈಮ್, ಲಾಕೀಷ್, ಅಜೇಕ.
10. ಚೊರ್ಗ, ಅಯ್ಯಾಲೋನ್ ಮತ್ತು ಹೆಬ್ರೋನ್ ಎಂಬ ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತದ ಪಟ್ಟಣಗಳನ್ನು ದುರಸ್ತಿಪಡಿಸಿ ಭದ್ರಪಡಿಸಲಾಯಿತು.
11. ರೆಹಬ್ಬಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು.
12. ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು. [PE]
13. [PS]ಇಸ್ರೇಲ್ ಪ್ರಾಂತ್ಯದಲ್ಲಿದ್ದ ಯಾಜಕರೂ ಲೇವಿಯರೂ ರೆಹಬ್ಬಾಮನನ್ನು ಸೇರಿಕೊಂಡರು.
14. ಲೇವಿಯರು ತಮಗಿದ್ದ ಗೊಮಾಳಗಳನ್ನೂ ಹೊಲಗದ್ದೆಗಳನ್ನೂ ಬಿಟ್ಟು ಯೆಹೂದಕ್ಕೂ ಮತ್ತು ಜೆರುಸಲೇಮಿಗೂ ಬಂದರು. ಯಾಜಕರಾಗಿ ಸೇವೆಮಾಡಲು ಯಾರೊಬ್ಬಾಮನು ಮತ್ತು ಅವನ ಮಕ್ಕಳು ಲೇವಿಯರಿಗೆ ಅನುಮತಿ ಕೊಡಲಿಲ್ಲವಾದ್ದರಿಂದ ಲೇವಿಯರು ಹೀಗೆ ಮಾಡಿದರು. [PE]
15. [PS]ಯಾರೊಬ್ಬಾಮನು ತನಗೆ ಬೇಕಾದ ಯಾಜಕರನ್ನು ಆರಿಸಿ ತಾನು ಮಾಡಿಸಿದ ಬಸವನ ಮತ್ತು ಆಡುಗಳ ಪ್ರತಿಮೆಗಳನ್ನು ಉನ್ನತಸ್ಥಳಗಳಲ್ಲಿ ಪ್ರತಿಷ್ಠಾಪಿಸಿ ಆರಾಧಿಸಲು ನೇಮಿಸಿದನು.
16. ಲೇವಿಯರು ಇಸ್ರೇಲನ್ನು ಬಿಟ್ಟುಬಂದ ಬಳಿಕ ಇಸ್ರೇಲರಲ್ಲಿ ದೇವರಾದ ಯೆಹೋವನಿಗೆ ನಂಬಿಗಸ್ತರಾಗಿ ಸೇವಿಸುವವರು ಜೆರುಸಲೇಮ್ ನಗರಕ್ಕೆ ಬಂದು ದೇವರಿಗೆ ಯಜ್ಞಗಳನ್ನು ಅರ್ಪಿಸಿ ಆರಾಧಿಸಿದರು.
17. ಅವರೆಲ್ಲ ಯೆಹೂದ ರಾಜ್ಯವನ್ನು ಬಲಗೊಳಿಸಿದರು ಮತ್ತು ಸೊಲೊಮೋನನ ಮಗನಾದ ರೆಹಬ್ಬಾಮನೊಂದಿಗೆ ಮೂರು ವರ್ಷವಿದ್ದರು. ಯಾಕೆಂದರೆ ಅವರು ಈ ವರ್ಷಗಳಲ್ಲಿ ದಾವೀದನಂತೆ ಮತ್ತು ಸೊಲೊಮೋನನಂತೆ ದೇವರ ಮಾರ್ಗದಲ್ಲಿ ನಡೆಯುತ್ತಿದ್ದರು. [PE]
18. {#1ರೆಹಬ್ಬಾಮನ ಕುಟುಂಬ } [PS]ರೆಹಬ್ಬಾಮನು ಯೆರೀಮೋತನ ಮಗಳಾದ ಮಹ್ಲತ್ ಎಂಬಾಕೆಯನ್ನು ಮದುವೆಯಾದನು. ಆಕೆಯ ತಾಯಿಯ ಹೆಸರು ಅಬೀಹೈಲ್. ಯೆರೀಮೋತನು ದಾವೀದನ ಮಗನಾಗಿದ್ದನು. ಅಬೀಹೈಲಳು ಇಷಯನ ಮಗನಾದ ಎಲೀಯಾಬನ ಮಗಳು.
19. ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್.
20. ಆಮೇಲೆ ರೆಹಬ್ಬಾಮನು ಅಬ್ಷಾಲೋಮನ ಮಗಳಾದ ಮಾಕಳನ್ನು ಮದುವೆಯಾದನು. ಆಕೆಯು ಅವನಿಂದ ಅಬೀಯ, ಅತ್ತ್ಯೆ, ಜೀಜ ಮತ್ತು ಶೆಲೋಮೀತ್ ಎಂಬ ಮಕ್ಕಳನ್ನು ಹೆತ್ತಳು.
21. ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮೊಮ್ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು. [PE]
22. [PS]ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.
23. ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು. [PE]