పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు రెండవ గ్రంథము
1.
2. [PS]ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು. [PE]{#1ಯೆಹೂದದ ಅರಸನಾದ ಆಸ } [PS]ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು.
3. ಮೂರ್ತಿಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು.
4. “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು.
5. ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
6. ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು. [PE]
7.
8. [PS]ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು. [PE]
9. [PS]ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು. [PE][PS]ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು.
10. ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು. [PE]
11.
12. [PS]ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು. [PE][PS]ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು.
13. ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು.
14. ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು.
15. ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು. [PE]
మొత్తం 36 అధ్యాయాలు, ఎంపిక చేయబడింది అధ్యాయము 14 / 36
1 2 ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು. {#1ಯೆಹೂದದ ಅರಸನಾದ ಆಸ } ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ಇದ್ದನು. 3 ಮೂರ್ತಿಪೂಜೆಗಾಗಿ ಮಾಡಿದ ಯಜ್ಞವೇದಿಕೆಗಳನ್ನು ತೆಗೆದುಹಾಕಿಸಿದನು. ವಿಗ್ರಹಾರಾಧಕರ ಪೂಜಾಸ್ಥಳಗಳನ್ನು, ಸ್ಮಾರಕಕಲ್ಲುಗಳನ್ನು ಒಡೆದು ಹಾಳುಮಾಡಿಸಿದನು. ಅಶೇರಸ್ತಂಭಗಳನ್ನು ತುಂಡು ಮಾಡಿಸಿದನು. 4 “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು. 5 ಯೆಹೂದ ದೇಶದ ಪಟ್ಟಣಗಳಲ್ಲಿದ್ದ ಎಲ್ಲಾ ವಿಗ್ರಹಗಳನ್ನೂ ಪೂಜಾಸ್ಥಳಗಳನ್ನೂ ಕಿತ್ತುಹಾಕಿಸಿದನು. ಆತನ ಆಳ್ವಿಕೆಯಲ್ಲಿ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು. 6 ಆ ಕಾಲದಲ್ಲಿ ಆಸನು ಯೆಹೂದ ಪ್ರಾಂತ್ಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಆಸನ ಆಳ್ವಿಕೆಯಲ್ಲಿ ಯುದ್ಧವೇ ಇರಲಿಲ್ಲ. ಯಾಕೆಂದರೆ ಯೆಹೋವನು ಅವನಿಗೆ ಸಮಾಧಾನವನ್ನು ಅನುಗ್ರಹಿಸಿದ್ದನು. 7 8 ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು. 9 ಆಸನ ಬಳಿ ಮೂರು ಲಕ್ಷ ಸೈನಿಕರಿದ್ದರು, ಯೆಹೂದಕುಲದ ಇವರು ಗುರಾಣಿಗಳನ್ನೂ ಬರ್ಜಿಗಳನ್ನೂ ಬಳಸಬಲ್ಲವರಾಗಿದ್ದರು. ಇವರಲ್ಲದೆ ಬೆನ್ಯಾಮೀನ್ ಕುಲದಿಂದ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಸೈನಿಕರಿದ್ದರು. ಇವರು ಸಣ್ಣ ಗುರಾಣಿಗಳನ್ನೂ ಬಿಲ್ಲುಬಾಣಗಳನ್ನೂ ಬಳಸಬಲ್ಲವರಾಗಿದ್ದರು. ಇವರೆಲ್ಲರೂ ರಣವೀರರಾಗಿದ್ದರು. ಇಥಿಯೋಪಿಯಾ ದೇಶದ ಜೆರಹನು ಆಸನ ಮೇಲೆ ಯುದ್ಧಮಾಡಲು ಬಂದನು. ಅವನೊಡನೆ ಹತ್ತು ಲಕ್ಷ ಸೈನಿಕರಿದ್ದರು; ಮೂನ್ನೂರು ರಥಗಳಿದ್ದವು. ಅವನ ಸೈನ್ಯವು ಮಾರೇಷದ ತನಕ ಬಂದಿತ್ತು. 10 ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು. 11 12 ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು. ಆಗ ಯೆಹೂದ ದೇಶದ ಆಸನ ಸೈನ್ಯವು ಇಥಿಯೋಪಿಯಾದ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡಿದನು. 13 ಆಸನ ಸೈನಿಕರು ಇಥಿಯೋಪಿಯಾದ ಸೈನ್ಯವನ್ನು ಗೆರಾರಿನ ತನಕ ಹಿಂದಟ್ಟಿಕೊಂಡು ಹೋದರು. ಅವರು ಮತ್ತೆ ಸೈನ್ಯವನ್ನು ಕಟ್ಟಿ ಯುದ್ಧಮಾಡಲು ಸಾಧ್ಯವಾಗದಷ್ಟು ಸೈನಿಕರು ಸತ್ತರು. ಅವರ ಬಲವನ್ನು ಮುರಿಯಲು ಯೆಹೋವನು ತನ್ನ ಸೈನ್ಯವನ್ನು ಬಳಸಿಕೊಂಡನು. 14 ಆಸನು ತನ್ನ ಸೈನ್ಯದೊಡನೆ ಗೆರಾರಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿಬಿಟ್ಟನು. ಅವುಗಳಲ್ಲಿ ವಾಸಿಸುವ ಜನರು ಯೆಹೋವನಿಗೆ ಭಯಪಟ್ಟರು. ಆ ಪಟ್ಟಣಗಳಲ್ಲಿ ಇದ್ದ ನಿಕ್ಷೇಪಗಳನ್ನು ಆಸನ ಸೈನಿಕರು ದೋಚಿದರು. 15 ಆಸನ ಸೈನಿಕರು ಕುರುಬರ ಪಾಳೆಯವನ್ನು ಧ್ವಂಸಮಾಡಿ ಅನೇಕಾನೇಕ ಕುರಿಗಳನ್ನೂ ಒಂಟೆಗಳನ್ನೂ ಸೂರೆಮಾಡಿ ಜೆರುಸಲೇಮಿಗೆ ತಂದರು.
మొత్తం 36 అధ్యాయాలు, ఎంపిక చేయబడింది అధ్యాయము 14 / 36
×

Alert

×

Telugu Letters Keypad References