1. {#1ಯೆಹೂದದ ಅರಸನಾದ ಯೆಹೋಷಾಫಾಟನು } [PS]ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.
2. ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು. [PE]
3. [PS]ಯೆಹೋವನು ಯೆಹೋಷಾಫಾಟನೊಂದಿಗೆ ಇದ್ದನು; ಯಾಕೆಂದರೆ ಯೆಹೋಷಾಫಾಟನು ತನ್ನ ಯೌವನ ಕಾಲದಲ್ಲಿಯೆ ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಜೀವಿಸಿದನು. ಅವನು ಬಾಳನ ಪೂಜೆಯನ್ನು ಮಾಡಲಿಲ್ಲ.
4. ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.
5. ಯೆಹೋವನು ಯೆಹೋಷಾಫಾಟನಿಗಾಗಿ ರಾಜ್ಯದ ಅಧಿಕಾರವನ್ನು ಸ್ಥಿರಪಡಿಸಿದನು. ಯೆಹೂದದ ಜನರೆಲ್ಲರು ಅವನಿಗೆ ಕಾಣಿಕೆಗಳನ್ನು ತಂದುಕೊಟ್ಟರು. ಆದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ದೊರಕಿತು.
6. ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು.[* ಯೆಹೋವ … ಕೊಂಡಿತು ಅಕ್ಷರಶಃ, “ದೇವರ ಮಾರ್ಗಗಳಲ್ಲಿ ನಡೆಯಲು ಅವನು ಬಹಳ ಹೆಮ್ಮೆಯುಳ್ಳವನಾಗಿದ್ದನು.” ] ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು. [PE]
7. [PS]ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಎಲ್ಲಾ ಪಟ್ಟಣಗಳಿಗೆ ನಾಯಕರನ್ನು ಕಳುಹಿಸಿ ಜನರಿಗೆ ದೇವರ ವಿಧಿನಿಯಮಗಳು ಬೋಧಿಸಲ್ಪಡುವಂತೆ ಮಾಡಿದನು. ಆ ನಾಯಕರು ಯಾರೆಂದರೆ: ಬೆನ್ಹೈಲ್, ಓಬದ್ಯ, ಜೆಕರ್ಯನೆತನೇಲ್ ಮತ್ತು ಮೀಕಾಯ.
8. ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.
9. ಇವರೆಲ್ಲಾ ಯೆಹೂದದ ಜನರಿಗೆ [BKS]ಯೆಹೋವನ ಧರ್ಮೋಪದೇಶ[BKE] ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು. [PE]
10. [PS]ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.
11. ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು. [PE]
12. [PS]ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ದೊಡ್ಡ ಅರಸನಾದನು. ಅವನು ಯೆಹೂದ ದೇಶದಲ್ಲೆಲ್ಲಾ ಕೋಟೆಗಳನ್ನು ಕಟ್ಟಿಸಿದನು. ಉಗ್ರಾಣ ನಗರಗಳನ್ನು ಕಟ್ಟಿಸಿದನು.
13. ಅವುಗಳಲ್ಲಿ ಬೇಕಾದ ಸಾಮಾಗ್ರಿಗಳನ್ನು ಸಂಗ್ರಹಿಸಿಟ್ಟನು. ಜೆರುಸಲೇಮಿನಲ್ಲಿ ನುರಿತ ಸೈನ್ಯವನ್ನು ಇರಿಸಿದನು.
14. ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. [PE][PBR] [LS]ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. [LE]
15. [LS] ಯೆಹೋಹಾನಾನನು ಎರಡು ಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. [LE]
16. [LS] ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು. [LE]
17. [LS] ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ. [LE]
18. [LS] ಯೆಹೋಜಾಬಾದನು ಒಂದುಲಕ್ಷ ಎಂಭತ್ತು ಸಾವಿರ ಸೈನಿಕರಿಗೆ ಸೇನಾಪತಿಯಾಗಿದ್ದನು. [LE][PBR]
19. [MS] ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು. [ME]