పవిత్ర బైబిల్

ఈజీ టు రీడ్ వెర్షన్ (ERV) - తెలుగు
దినవృత్తాంతములు రెండవ గ్రంథము
1. {#1ಯೆಹೂದದ ಅರಸನಾದ ಉಜ್ಜೀಯ } [PS]ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ.
2. ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು. [PE]
3. [PS]ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು.
4. ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು.
5. ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು. [PE]
6. [PS]ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿ ಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
7. ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು.
8. ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು. [PE]
9. [PS]ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು.
10. ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು. [PE]
11. [PS]ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು.
12. ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು.
13. ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು.
14. ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು.
15. ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು. [PE]
16. [PS]ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು.
17. ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ,
18. “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು. [PE]
19. [PS]ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು.
20. ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು.
21. ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾವುನು ಪ್ರಜಾಪಾಲನೆ ಮಾಡಿದನು. [PE]
22. [PS]ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು.
23. ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾವುನು ಅರಸನಾದನು. [PE]
మొత్తం 36 అధ్యాయాలు, ఎంపిక చేయబడింది అధ్యాయము 26 / 36
1 {#1ಯೆಹೂದದ ಅರಸನಾದ ಉಜ್ಜೀಯ } ಆ ಬಳಿಕ ಯೆಹೂದದ ಜನರು ಅಮಚ್ಯನ ಮಗನಾದ ಉಜ್ಜೀಯನನ್ನು ತಮ್ಮ ಅರಸನನ್ನಾಗಿ ಆರಿಸಿಕೊಂಡರು. ಆಗ ಅವನಿಗೆ ಹದಿನಾರು ವರ್ಷ. 2 ಉಜ್ಜೀಯನು ಏಲೋತ್ ಪಟ್ಟಣವನ್ನು ಮತ್ತೆ ಕಟ್ಟಿಸಿ ಯೆಹೂದ ರಾಜ್ಯಕ್ಕೆ ಸೇರಿಸಿದನು. ಅಮಚ್ಯನು ಸತ್ತಾಗ ಉಜ್ಜೀಯನು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದನು. 3 ಉಜ್ಜೀಯನು ಪಟ್ಟಕ್ಕೆ ಬಂದಾಗ ಹದಿನಾರು ವರ್ಷದವನಾಗಿದ್ದನು. ಅವನು ಐವತ್ತೆರಡು ವರ್ಷ ಕಾಲ ಜೆರುಸಲೇಮಿನಲ್ಲಿ ರಾಜ್ಯಭಾರ ಮಾಡಿದನು. ಅವನ ತಾಯಿಯ ಹೆಸರು ಯೆಕೊಲ್ಯ. ಆಕೆ ಜೆರುಸಲೇಮಿನವಳು. 4 ಉಜ್ಜೀಯನು ತನ್ನ ತಂದೆಯಾದ ಅಮಚ್ಯನಂತೆ ದೇವರ ಮುಂದೆ ಯೋಗ್ಯನಾಗಿ ನಡೆದುಕೊಂಡನು. 5 ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು. 6 ಉಜ್ಜೀಯನು ಫಿಲಿಷ್ಟಿಯರೊಂದಿಗೆ ಯುದ್ಧಮಾಡಿ ಅವರ ಪಟ್ಟಣಗಳಾದ ಗತ್, ಯೆಬ್ನೆ ಮತ್ತು ಅಷ್ಡೋದ್‌ಗಳ ಪೌಳಿ ಗೋಡೆಗಳನ್ನು ಕೆಡವಿಹಾಕಿದನು. ಅವನು ಅಷ್ಡೋದಿನ ಮತ್ತು ಇತರ ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು. 7 ಫಿಲಿಷ್ಟಿಯರೊಂದಿಗೂ ಗೂರ್‌ಬಾಳಿನಲ್ಲಿ ವಾಸಿಸುತ್ತಿದ್ದ ಅರಬಿಯರೊಂದಿಗೂ ಹಾಗೂ ಮೆಗೂನ್ಯರೊಡನೆಯೂ ಯುದ್ಧಮಾಡಲು ದೇವರು ಅವನಿಗೆ ಸಹಾಯ ಮಾಡಿದನು. 8 ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪಕಾಣಿಕೆಯನ್ನು ತಂದುಕೊಟ್ಟರು. ಉಜ್ಜೀಯನು ಬಲಿಷ್ಠನಾಗಿದ್ದುದರಿಂದ ಅವನ ಹೆಸರು ಎಲ್ಲಾ ಕಡೆಗಳಲ್ಲಿ ಈಜಿಪ್ಟಿನ ಮೇರೆಯ ತನಕ ಪ್ರಸಿದ್ಧಿ ಹೊಂದಿತು. 9 ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆಬಾಗಿಲು, ತಗ್ಗಿನಬಾಗಿಲು ಮತ್ತು ಪೌಳಿಗೋಡೆ ತಿರುಗುವ ಭಾಗ ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿದನು. 10 ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು. 11 ಉಜ್ಜೀಯನ ಬಳಿ ಒಳ್ಳೆಯ ತರಬೇತಿ ಹೊಂದಿದ ಸೈನ್ಯವಿತ್ತು. ಕಾರ್ಯದರ್ಶಿಯಾದ ಯೆಗೀಯೇಲ್ ಮತ್ತು ಅಧಿಕಾರಿಯಾದ ಮಾಸೇಯರು ಅವರನ್ನು ಗುಂಪುಗುಂಪಾಗಿ ವಿಂಗಡಿಸಿದರು. ಹನನ್ಯನು ರಾಜನ ಅಧಿಕಾರಿಗಳಲ್ಲಿ ಒಬ್ಬನಾಗಿದ್ದನು. 12 ಸೈನ್ಯಕ್ಕೆ ಒಟ್ಟು ಎರಡು ಸಾವಿರದ ಆರುನೂರು ಮಂದಿ ಸೇನಾಪತಿಗಳಿದ್ದರು. 13 ಅವರು ಕುಟುಂಬದ ನಾಯಕರಾಗಿದ್ದು ಅವರ ಅಧೀನದಲ್ಲಿ ಯುದ್ಧವೀರರಾದ ಮೂರು ಲಕ್ಷದ ಏಳು ಸಾವಿರದ ಐನೂರು ಸೈನಿಕರಿದ್ದರು. ಇವರು ವೈರಿಯೊಂದಿಗೆ ಕಾದಾಡಿ ಅರಸನಿಗೆ ಜಯಗಳಿಸಿದರು. 14 ಉಜ್ಜೀಯನು ಸೈನಿಕರಿಗೆ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು ಮತ್ತು ಕವಣೆಗೆ ಕಲ್ಲುಗಳನ್ನು ಒದಗಿಸಿದನು. 15 ಜೆರುಸಲೇಮಿನಲ್ಲಿ ವಿಜ್ಞಾನಿಗಳು ರೂಪಿಸಿದ ಯಂತ್ರಗಳನ್ನು ಉಜ್ಜೀಯನು ತಯಾರಿಸಿದನು. ಇವುಗಳನ್ನು ಪೌಳಿಗೋಡೆಯ ಮೇಲೆ ಇರಿಸಿದನು. ಇವು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ವೈರಿಗಳ ಮೇಲೆ ಹಾರಿಸಬಲ್ಲವಾಗಿದ್ದವು. ಉಜ್ಜೀಯನು ತುಂಬಾ ಪ್ರಸಿದ್ಧಿ ಹೊಂದಿದ್ದನು. ಬಹುದೂರದ ತನಕ ಅವನ ಹೆಸರು ಹಬ್ಬಿತು. ಅವನು ದೇವರ ವಿಶೇಷ ಸಹಾಯ ಪಡೆದುಕೊಂಡು ಬಲಿಷ್ಠನಾದನು. 16 ಬಲಶಾಲಿಯಾದ ಉಜ್ಜೀಯನಲ್ಲಿ ನಾಶಕರವಾದ ಗರ್ವವು ಸೇರಿತು. ಅವನು ತನ್ನ ದೇವರಾದ ಯೆಹೋವನಿಗೆ ದ್ರೋಹ ಮಾಡಿದನು. ಅವನು ದೇವಾಲಯದೊಳಗೆ ಧೂಪವೇದಿಕೆಯಲ್ಲಿ ತಾನೇ ಧೂಪವನ್ನು ಹಾಕಲು ಹೋದನು. 17 ಆಗ ಮಹಾಯಾಜಕನಾದ ಅಜರ್ಯನೂ ಧೈರ್ಯಶಾಲಿಗಳಾದ ಎಂಭತ್ತು ಮಂದಿ ಸೇವೆಮಾಡುವ ಯಾಜಕರೂ ಉಜ್ಜೀಯನಿಗೆ, 18 “ಉಜ್ಜೀಯನೇ, ಯೆಹೋವನಿಗೆ ಧೂಪ ಹಾಕುವದು ನಿನ್ನ ಕೆಲಸವಲ್ಲ. ನೀನು ಹೀಗೆ ಮಾಡುವದು ಸರಿಯಲ್ಲ. ಆರೋನನ ಸಂತತಿಯವರಾದ ಯಾಜಕರೇ ಧೂಪ ಹಾಕಬೇಕಾದದ್ದು. ಅವರು ಪವಿತ್ರ ಸೇವೆಗೆ ನೇಮಿಸಲ್ಪಟ್ಟಿದ್ದಾರೆ. ನೀನು ಈ ಮಹಾ ಪವಿತ್ರಸ್ಥಾನದಿಂದ ಹೊರಗೆ ಹೋಗು. ನೀನು ದೇವರಾದ ಯೆಹೋವನಿಗೆ ವಿಧೇಯನಾಗಿಲ್ಲ. ಈ ಕಾರ್ಯವನ್ನು ಮಾಡಿದ್ದರಿಂದ ದೇವರು ನಿನ್ನನ್ನು ಮೆಚ್ಚುವದಿಲ್ಲ” ಎಂದು ಹೇಳಿದರು. 19 ಇದನ್ನು ಕೇಳಿ ಉಜ್ಜೀಯನು ಕೋಪಗೊಂಡನು. ಅವನು ಧೂಪ ಹಾಕಲು ಧೂಪಾರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದನು. ಅವನು ಯಾಜಕರ ಮೇಲೆ ಕೋಪಿಸಿಕೊಂಡಾಗ ಕುಷ್ಠರೋಗವು ಅವನ ಹಣೆಯಲ್ಲಿ ಕಾಣಿಸಿಕೊಂಡಿತು. ಇದು ಯಾಜಕರ ಮುಂದೆ ದೇವಾಲಯದೊಳಗೆ ಧೂಪವೇದಿಕೆಯ ಬಳಿಯಲ್ಲೇ ಆಯಿತು. 20 ಮಹಾಯಾಜಕನಾದ ಅಜರ್ಯನೂ ಇತರ ಯಾಜಕರೂ ಉಜ್ಜೀಯನನ್ನು ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಾಣಿಸಿದ್ದರಿಂದ ಅವನನ್ನು ಕೂಡಲೇ ದೇವಾಲಯದಿಂದ ಹೊರಕ್ಕೆ ಹಾಕಿದರು. ಯೆಹೋವನು ಅವನನ್ನು ಶಿಕ್ಷಿಸಿದುದರಿಂದ ಉಜ್ಜೀಯನು ತಾನಾಗಿಯೇ ದೇವಾಲಯದೊಳಗಿಂದ ಅವಸರದಿಂದ ಹೊರಬಂದನು. 21 ಅರಸನಾದ ಉಜ್ಜೀಯನು ಕುಷ್ಠರೋಗಿಯಾದುದರಿಂದ ಅವನು ಯೆಹೋವನ ಆಲಯವನ್ನು ಪ್ರವೇಶಿಸಲಾಗಲಿಲ್ಲ. ಅವನು ದೂರದಲ್ಲಿದ್ದ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಿದನು. ಅವನ ಮಗನಾದ ಯೋತಾವುನು ಪ್ರಜಾಪಾಲನೆ ಮಾಡಿದನು. 22 ಪ್ರಾರಂಭದಿಂದ ಕೊನೆಯವರೆಗೆ ಉಜ್ಜೀಯನು ಮಾಡಿದ ಕಾರ್ಯಗಳನ್ನೆಲ್ಲಾ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ತನ್ನ ಪುಸ್ತಕದಲ್ಲಿ ಬರೆದಿರುವನು. 23 ಉಜ್ಜೀಯನು ಸತ್ತು ತನ್ನ ಪೂರ್ವಿಕರನ್ನು ಸೇರಿದಾಗ, ಅವನ ಕುಷ್ಠದ ನಿಮಿತ್ತ ಅವನ ಶವವನ್ನು ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಹೂಳಿಟ್ಟರು. ಉಜ್ಜೀಯನ ಬದಲಾಗಿ ಅವನ ಮಗನಾದ ಯೋತಾವುನು ಅರಸನಾದನು.
మొత్తం 36 అధ్యాయాలు, ఎంపిక చేయబడింది అధ్యాయము 26 / 36
×

Alert

×

Telugu Letters Keypad References